Homeಮುಖಪುಟ‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

- Advertisement -
- Advertisement -

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ ಮಲ್ಯ ಭಾರತಕ್ಕೆ ಬರದಿದ್ದರೆ, ಅವರು ಸಲ್ಲಿಸಿರುವ ಯಾವುದೇ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ನ್ಯಾಯಪೀಠವು ಎಚ್ಚರಿಕೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಖಾಡ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

“ನೀವು ನ್ಯಾಯಾಲಯದ ಪ್ರಕ್ರಿಯೆಯನ್ನು ತಪ್ಪಿಸುತ್ತಿದ್ದೀರಿ. ಹೀಗಿರುವಾಗ ಕಾನೂನಿನ ಅಡಿಯಲ್ಲಿ ಯಾವುದೇ ರಿಯಾಯಿತಿ ಅಥವಾ ಪರಿಹಾರವನ್ನು ಪಡೆಯಲು ನಿಮಗೆ ಅರ್ಹತೆಯಿಲ್ಲ. ನೀವು ಮೊದಲು ಭಾರತಕ್ಕೆ ಮರಳಿ ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ಪೀಠವು ಮಲ್ಯ ಪರ ವಕೀಲರಿಗೆ ಸ್ಪಷ್ಟಪಡಿಸಿತು. ತಾವು ಯಾವಾಗ ಭಾರತಕ್ಕೆ ಮರಳುತ್ತೇವೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಮಲ್ಯ ಪಾಲಿಸಿಲ್ಲದಿರುವುದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯ್ ಮಲ್ಯ ಅವರು ಕೇಂದ್ರ ಸರ್ಕಾರದ ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯದ (ED) ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಮಲ್ಯ ಅವರು ಭಾರತದ ಕಾನೂನನ್ನು ನಂಬುತ್ತಿಲ್ಲ, ಆದರೆ ಅದೇ ಕಾನೂನಿನ ಅಡಿಯಲ್ಲಿ ಪರಿಹಾರ ಕೇಳುತ್ತಿದ್ದಾರೆ. ಇದು ದ್ವಂದ್ವ ನೀತಿ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ನ್ಯಾಯೋಚಿತವಾಗಿ ನಾವು ನಿಮ್ಮ ಅರ್ಜಿಯನ್ನು ಈಗಲೇ ವಜಾ ಮಾಡುತ್ತಿಲ್ಲ. ಬದಲಿಗೆ ಒಂದು ಕೊನೆಯ ಅವಕಾಶ ನೀಡುತ್ತಿದ್ದೇವೆ. ಮುಂದಿನ ವಾರದೊಳಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕೋರ್ಟ್ ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...