Homeಮುಖಪುಟಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ’ ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು, ಸಾರಿಗೆ ಮತ್ತು ಬ್ಯಾಂಕಿಂಗ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿಯಾಗಿದೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿತ್ತು. ದೇಶದಾದ್ಯಂತ ಸುಮಾರು 30 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವೇದಿಕೆ ಹೇಳಿಕೊಂಡಿದೆ.

ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುವ ಮತ್ತು ಉದ್ಯೋಗದಾತರಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹಾಗೂ ಕೆಲಸದಿಂದ ತೆಗೆದುಹಾಕಲು ಸುಲಭವಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ವಿಬಿ-ಜಿ ರಾಮ್‌ಜಿ ಕಾಯ್ದೆ ರದ್ದುಗೊಳಿಸಬೇಕು, ಕರಡು ಬೀಜ ಮಸೂದೆಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು, ಪರಮಾಣು ಶಕ್ತಿಯ ಶಾಂತಿ ಕಾಯ್ದೆಯನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಿಂದ ಪ್ರತಿಭಟನೆಯ ವರದಿಗಳು ಬಂದಿವೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದಲ್ಲಿ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ದೊರೆತಂತೆ ಕಂಡು ಬಂದಿಲ್ಲ. ಬೆಂಗಳೂರಿನ ಟೌನ್‌ ಹಾಲ್ ಬಳಿ ಪ್ರತಿಭಟನೆಗೆ ಮುಂದಾದ ಕಾರ್ಮಿಕ ಸಂಘಟನೆಗಳ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನುಳಿದಂತೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ.

ದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ

ದೆಹಲಿಯ ಕೈಗಾರಿಕಾ ವಲಯಗಳಾದ ಓಖ್ಲಾ ಮತ್ತು ಬವಾನಾಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗೆ ಇಳಿಯದ ಕಾರಣ ಸಂಚಾರ ದಟ್ಟಣೆ ಕಡಿಮೆಯಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಗ್ಯಾಸ್ ಪೈಪ್‌ಲೈನ್ ಹಾಗೂ ವಿದ್ಯುತ್ ವಲಯಗಳ ಮೇಲೆ ಇಂದಿನ ಮುಷ್ಕರದ ಪರಿಣಾಮ ಬೀರಿದೆ ಎಂದು ಕೌರ್ ತಿಳಿಸಿದ್ದಾರೆ.

ಒಡಿಶಾದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆ, ಸಾರಿಗೆ ಸೇವೆಯಲ್ಲಿ ವ್ಯತ್ಯಯ

ದೇಶದಾದ್ಯಂತ ನಡೆದ ಮುಷ್ಕರದಿಂದ ಒಡಿಶಾದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭುವನೇಶ್ವರ, ಕಟಕ್ ಮತ್ತು ರೂರ್ಕೆಲಾದಂತಹ ಸ್ಥಳಗಳಲ್ಲಿ ಸಾರಿಗೆ ಸೇವೆಗಳು ವ್ಯತ್ಯಯಗೊಂಡವು. ಭುವನೇಶ್ವರದಲ್ಲಿ ಪ್ರತಿಭಟನಾಕಾರರು ಸ್ಟೇಷನ್ ಸ್ಕ್ವೇರ್ ಬಳಿ ರಸ್ತೆ ತಡೆ ನಡೆಸಿದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಮುಷ್ಕರದಿಂದಾಗಿ ‘ಅಮಾ ಬಸ್’ ಮತ್ತು ಆಟೋರಿಕ್ಷಾ ಸೇವೆಗಳು ಸ್ಥಗಿತಗೊಂಡವು. ರಾಜಧಾನಿಯ ಪ್ರಮುಖ ವಾಣಿಜ್ಯ ಸಂಸ್ಥೆಗಳೂ ಕೂಡ ಮುಚ್ಚಲ್ಪಟ್ಟಿತ್ತು ಎಂದು ವರದಿಯಾಗಿದೆ.

ಜಯದೇವ್ ವಿಹಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿಯೂ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ವರದಿ ತಿಳಿಸಿದೆ.

ಜಾರ್ಖಂಡ್‌ನಲ್ಲಿ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ವಲಯಗಳಿಗೆ ತಟ್ಟಿದ ಮುಷ್ಕರದ ಬಿಸಿ

ಜಾರ್ಖಂಡ್‌ನ ವಿವಿಧ ಕಾರ್ಮಿಕ ಸಂಘಗಳ ಸದಸ್ಯರು ವಿವಿಧ ಕಲ್ಲಿದ್ದಲು ಕಂಪನಿಗಳು ಮತ್ತು ಪಿಎಸ್‌ಯುಗಳ ದ್ವಾರಗಳ ಮುಂದೆ ಪ್ರತಿಭಟಿಸಿದರು. ಮುಷ್ಕರದಿಂದ ರಾಜ್ಯದ ಬ್ಯಾಂಕಿಂಗ್, ವಿಮೆ ಮತ್ತು ಕಲ್ಲಿದ್ದಲು ವಲಯಗಳ ಮೇಲೂ ಪರಿಣಾಮ ಬೀರಿದೆ. ಎಡಪಕ್ಷಗಳು ಮತ್ತು ಕಾಂಗ್ರೆಸ್ ಮುಷ್ಕರಕ್ಕೆ ಬೆಂಬಲ ನೀಡಿತ್ತು.

ಕೇರಳದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಸಾರಿಗೆ ಸೇವೆಗಳಲ್ಲಿ ವ್ಯತ್ಯಯ

ಕೇರಳದಲ್ಲಿ ಮುಷ್ಕರದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಹೆಚ್ಚು ತೊಂದರೆ ಅನುಭವಿಸಿದರು. ಆಟೋ-ರಿಕ್ಷಾ ಒಕ್ಕೂಟಗಳು ಕೂಡ ಮುಷ್ಕರದ ಸಮಯದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ್ದವು. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಯಿತು ಎಂದು ವರದಿಯಾಗಿದೆ.

ಸಾರಿಗೆ ಸೇವೆಗಳ ವ್ಯತ್ಯಯವು ಸರ್ಕಾರಿ ಕಚೇರಿಗಳಲ್ಲಿನ ಹಾಜರಾತಿಯ ಮೇಲೂ ಪರಿಣಾಮ ಬೀರಿತ್ತು. ಈ ನಡುವೆ, ಮುಷ್ಕರದ ಕಾರಣದಿಂದ ಕಚೇರಿಗೆ ತೆರಳಲು ಆಗದೆ ಆದ ಗೈರುಹಾಜರಿಯನ್ನು ‘ಡೈಸ್-ನಾನ್’ (ಕೆಲಸವಿಲ್ಲದ ದಿನಕ್ಕೆ ವೇತನವಿಲ್ಲ) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ

ಗೋವಾದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅನೇಕ ವಿಮಾ ಕಂಪನಿಗಳ ಕಚೇರಿಗಳು ಮುಚ್ಚಲ್ಪಟ್ಟಿತ್ತು. ರಾಜ್ಯದ ಕೆಲವು ಕೈಗಾರಿಕಾ ಘಟಕಗಳ ಮೇಲೂ ಮುಷ್ಕರ ಪರಿಣಾಮ ಬೀರಿದೆ. ಮುಷ್ಕರದ ಕರೆಗೆ ಬೆಂಬಲ ಸೂಚಿಸಲು ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಸಂಘಟನೆಗಳು ಕೆಲಸವನ್ನು ಸ್ಥಗಿತಗೊಳಿಸಿವೆ ಎಂದು ಎಐಟಿಯುಸಿ ಕಾರ್ಯದರ್ಶಿ ಸುಹಾಸ್ ನಾಯಕ್ ತಿಳಿಸಿದ್ದಾರೆ.

ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ನಾಯಕ್ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಯಾವುದೇ ಸಮಸ್ಯೆಯಿಲ್ಲದೆ ಕಾರ್ಯನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

ಕಾರ್ಮಿಕ ಸಂಘಟನೆಗಳ ಸದಸ್ಯರು ರಾಜಧಾನಿ ಪಣಜಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಭಾಗಶಃ ಪ್ರತಿಕ್ರಿಯೆ

ಪಶ್ಚಿಮ ಬಂಗಾಳದಲ್ಲಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಬ್ಯಾಂಕುಗಳು ಮತ್ತು ಕೈಗಾರಿಕಾ ವಲಯಗಳಲ್ಲಿ ಕೆಲಸದ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ‘ಬಂಗಾಳವನ್ನು ಉಳಿಸಿ’ ಎಂಬ ಕರೆ ನೀಡಿರುವ ಸಿಐಟಿಯು, ಎಐಟಿಯುಸಿ ಮತ್ತು ಯುಟಿಯುಸಿ ಸೇರಿದಂತೆ ಕಾರ್ಮಿಕ ಸಂಘಟನೆಗಳ ಸದಸ್ಯರು ದುರ್ಗಾಪುರ ಮತ್ತು ಹಲ್ದಿಯಾದ ಕೈಗಾರಿಕಾ ಕೇಂದ್ರಗಳ ಕಾರ್ಖಾನೆಗಳ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ಕಾರ್ಯಾಚರಣೆಯ ಮೇಲೆ ಮುಷ್ಕರ ಪರಿಣಾಮ ಬೀರಿದೆ ಎಂದು ಕಾರ್ಮಿಕ ಸಂಘಟನೆಯ ನಾಯಕರು ತಿಳಿಸಿದ್ದಾರೆ. ಆದರೆ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಎಂದಿನಂತೆ ಕಾರ್ಯನಿರ್ವಹಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...