Homeಕರ್ನಾಟಕಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

- Advertisement -
- Advertisement -

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದು ನಕಲಿ ಪತ್ರ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಿಎಂ ಜಂಟಿ ಕಾರ್ಯದರ್ಶಿ ಅರುಣ್‌ ಫುರ್ಟಾಡೊ ಅವರು ವಿಧಾನಸೌಧದ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಪತ್ರದ ಕುರಿತು ಮಾಹಿತಿ ನೀಡಿರುವ ಸಿಎಂ “ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

“ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

ನಕಲಿ ಎನ್ನಲಾದ ಪತ್ರವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್, ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಮತ್ತು ಸುನಿಲ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು.

ಸುನಿಲ್ ಕುಮಾರ್ ಅವರು ಪತ್ರವನ್ನು ಹಂಚಿಕೊಂಡು, “ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ” ಎಂದು ಬರೆದುಕೊಂಡಿದ್ದರು.

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ? ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ಖುದ್ದಾಗಿ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ? ಎಂದು ಪ್ರಶ್ನಿಸಿದ್ದರು.

ಇತರ ಕೆಲವರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಸಿದ್ದರಾಮಯ್ಯ ಹೆಸರಿನ ಪತ್ರವನ್ನು ಹಂಚಿಕೊಂಡು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...