Homeಮುಖಪುಟತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

- Advertisement -
- Advertisement -

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ ಮೂಲಕ 116 ಪುರಸಭೆಗಳ ಪೈಕಿ ಸುಮಾರು 74ರಲ್ಲಿ ಸ್ಪಷ್ಟ ಬಹುಮತ ಪಡೆದಿದೆ.

ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) 781 ವಾರ್ಡ್‌ಗಳಲ್ಲಿ ಜಯಗಳಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಕಳೆದ ಬಾರಿಗಿಂತ ಬಿಆರ್‌ಎಸ್ ತನ್ನ ಬಲವನ್ನು ಗಣನೀಯವಾಗಿ ಕಳೆದುಕೊಂಡಿದೆ.

ಬಿಜೆಪಿ 336 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಎಐಎಂಐಎಂ 66 ಮತ್ತು ಸಿಪಿಐ(ಎಂ) 13 ವಾರ್ಡ್‌ಗಳಲ್ಲಿ ಜಯಗಳಿಸಿವೆ.

ಸುಮಾರು 30 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಫಲಿತಾಂಶ ಬಂದಿದೆ. ಇಲ್ಲಿ ಪಕ್ಷೇತರರು ಮತ್ತು ಇತರ ಸಣ್ಣ ಪಕ್ಷಗಳ ಬೆಂಬಲ ನಿರ್ಣಾಯಕವಾಗಲಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಸ್ವಕ್ಷೇತ್ರ ಖಮ್ಮಂ ಜಿಲ್ಲೆಯ ಮಧಿರ ಪುರಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ಟಿಡಿಪಿ ಒಟ್ಟು 21 ವಾರ್ಡ್‌ಗಳಲ್ಲಿ ಜಯಗಳಿಸಿವೆ. ಕಾಂಗ್ರೆಸ್ ಸ್ವತಃ 18 ಸ್ಥಾನಗಳನ್ನು ಗೆದ್ದುಕೊಂಡರೆ, ಟಿಡಿಪಿ 3 ವಾರ್ಡ್‌ಗಳಲ್ಲಿ ಜಯ ದಾಖಲಿಸಿದೆ.

ಪ್ರಬಲ ವಿರೋಧ ಪಕ್ಷಗಳಾದ ಬಿಆರ್‌ಎಸ್ ಮತ್ತು ಸಿಪಿಐ(ಎಂ) ಮೈತ್ರಿಕೂಟವು ಕೇವಲ 1 ವಾರ್ಡ್‌ಗೆ ಸೀಮಿತಗೊಂಡಿದೆ. ಭಟ್ಟಿ ವಿಕ್ರಮಾರ್ಕ ಅವರ ತಳಮಟ್ಟದ ಪ್ರಚಾರ ಮತ್ತು ಅಭಿವೃದ್ಧಿ ಕಾರ್ಯಸೂಚಿ ಈ “ಕ್ಲೀನ್ ಸ್ವೀಪ್‌”ಗೆ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗಿದೆ.

ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಅವರ ಪ್ರಭಾವವಿರುವ ಸೂರ್ಯಪೇಟೆ ಜಿಲ್ಲೆಯ ಹುಜೂರ್‌ನಗರ ಪುರಸಭೆಯಲ್ಲೂ ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಕಾಂಗ್ರೆಸ್ 19 ವಾರ್ಡ್‌ಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಆರ್‌ಎಸ್ 4 ಸ್ಥಾನಗಳನ್ನು ಪಡೆದರೆ, ಪಕ್ಷೇತರರು ಮತ್ತು ಇತರ ಅಭ್ಯರ್ಥಿಗಳು 5 ವಾರ್ಡ್‌ಗಳಲ್ಲಿ ಗೆದ್ದಿದ್ದಾರೆ. ಬಿಜೆಪಿ ಇಲ್ಲಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಕರೀಂ ನಗರ, ನಿಝಾಮಾಬಾದ್‌ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಸ್ವಕ್ಷೇತ್ರದ ಕರೀಂನಗರ ಮಹಾನಗರ ಪಾಲಿಕೆ ಮತ್ತು ಸಂಸದ ಧರ್ಮಪುರಿ ಅರವಿಂದ್ ಅವರ ಸ್ವಕ್ಷೇತ್ರದ ನಿಝಾಮಾಬಾದ್‌ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಕರೀಂ ನಗರ ಪಾಲಿಕೆಯ ಒಟ್ಟು 66 ಸ್ಥಾನಗಳಲ್ಲಿ ಸ್ಪಷ್ಟ ಬಹುಮತಕ್ಕೆ 34 ಸ್ಥಾನಗಳ ಅಗತ್ಯವಿದೆ. ಬಿಜೆಪಿ 30 ಸ್ಥಾನಗಳನ್ನು ಗೆದ್ದಿದ್ದು, ಕರೀಂನಗರ ಸಂಸದರ ಬೆಂಬಲ ಮತ್ತು ಪಕ್ಷೇತರರ ಸಹಾಯದೊಂದಿಗೆ ಮೇಯರ್ ಪೀಠ ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

ನಿಝಾಮಾಬಾದ್ ಮಹಾನಗರ ಪಾಲಿಕೆಯ 60 ಸ್ಥಾನಗಳ ಪೈಕಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ. ಬಿಜೆಪಿ 28 ಸ್ಥಾನಗಳನ್ನು ಗೆದ್ದಿದ್ದು, ಮ್ಯಾಜಿಕ್ ನಂಬರ್‌ಗೆ ಸಮೀಪದಲ್ಲಿದೆ. ಸಂಸದರು ಮತ್ತು ಶಾಸಕರ ಬೆಂಬಲದೊಂದಿಗೆ ಬಿಜೆಪಿ ತನ್ನ ಮೇಯರ್ ಆಯ್ಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಕರೀಂನಗರ ಮತ್ತು ನಿಝಾಮಾಬಾದ್ ಎರಡರಲ್ಲೂ ಬಿಜೆಪಿ ಅತಿ ದೊಡ್ಡ ಪಕ್ಷವಾಗಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಯ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...