Homeಅಂತರಾಷ್ಟ್ರೀಯಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

- Advertisement -
- Advertisement -

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಈಗ, ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನ ಕತ್ತು ಹಿಸುಕಲಾಗಿದೆ ಎಂದು ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ವೀಕ್ಷಿಸಿದ್ದ ವೈದ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

ಬಾಲಕಿಯರು- ಮಕ್ಕಳು ಸೇರಿದಂತೆ ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದ ಮತ್ತು ಪ್ರಭಾವಿ ನಾಯಕರ ಲೈಂಗಿಕ ತೃಷೆಗಾಗಿ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲೈಂಗಿಕ ಅಪರಾಧಿ ಎಪ್ಸ್ಟೀನ್‌ನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. 

ಆತನಿಗೆ, 2017ರಲ್ಲಿ ಶಿಕ್ಷೆ ವಿಧಿಸಿ, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿತ್ತು. ಆತ, 2019ರ ಆಗಸ್ಟ್‌ 10ರಂದು ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಇತ್ತೀಚೆಗೆ, ಎಪ್ಸ್ಟೀನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅಮೆರಿಕ ನ್ಯಾಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ, ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರಗಳ ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿವೆ. ಇದೇ ಹೊತ್ತಿನಲ್ಲಿ ಅತನ ಸಾವಿನ ಕುರಿತಾದ ಚರ್ಚೆಯೂ ನಡೆಯುತ್ತಿದೆ.

ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ಆತನ ಕುಟುಂಬದ ಪರವಾಗಿ ವೀಕ್ಷಿಸಿದ್ದ ವಿಧಿವಿಜ್ಞಾನ ರೋಗಶಾಸ್ತ್ರಜ್ಞ ಡಾ. ಮೈಕೆಲ್ ಬಾಡೆನ್ ಅವರು ದಿ ಟೆಲಿಗ್ರಾಫ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ, ಎಪ್ಸ್ಟೀನ್‌ ಆತ್ಮಹತ್ಯೆ ವರದಿಯ ಬಗ್ಗೆ ಅನುಮಾನವನ್ನು ಪುನರುಚ್ಚರಿಸಿದ್ದಾರೆ.

“ಎಪ್ಸ್ಟೀನ್ ನೇಣು ಹಾಕಿಕೊಂಡು ಮೃತಪಟ್ಟಿಲ್ಲ. ಆತನ ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈಗ ಲಭ್ಯವಿರುವ ಎಲ್ಲ ವಿವರಗಳನ್ನು ಸಮಗ್ರವಾಗಿ ಪರಿಗಣಿಸಿ, ಪರಿಶೀಲಿಸಿ ಆತನ ಸಾವಿನ ನಿಖರ ಕಾರಣದ ಕುರಿತು ಇನ್ನಷ್ಟು ಆಳವಾದ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

2019ರಲ್ಲಿಯೂ ಬಾಡೆನ್‌ ಅವರು ಪರೀಕ್ಷೆಯ ವರದಿಗಳು ಮತ್ತು ಸಾಕ್ಷ್ಯಗಳು ಇದು ಆತ್ಮಹತ್ಯೆಗಿಂತ ಕೊಲೆಯೆಂದು ಸೂಚಿಸುತ್ತದೆ ಎಂದೇ ಹೇಳಿದ್ದರು. ಆರಂಭಿಕ ಪರೀಕ್ಷೆ ವೇಳೆ ಇನ್ನೂ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಯನ್ನು ಬಾಕಿ ಇಡಲಾಗಿತ್ತು. ಆದರೆ, ಕೇವಲ ಐದು ದಿನಗಳಲ್ಲಿಯೇ ಅಂದಿನ ಮುಖ್ಯ ವೈದ್ಯಕೀಯ ಪರೀಕ್ಷಕ ಡಾ. ಬಾರ್ಬರಾ ಸ್ಯಾಂಪ್ಸನ್ ಅವರು ಮರಣ ಪ್ರಮಾಣಪತ್ರದಲ್ಲಿ ಆತ್ಮಹತ್ಯೆ ಎಂದು ದಾಖಲಿಸಿದ್ದರು. ಸ್ಯಾಂಪ್ಸನ್ ಅವರು ಸಂಪೂರ್ಣ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ತಾವು ಹಾಜರಿರಲಿಲ್ಲವೆಂದು ಬಾಡೆನ್‌ ಈಗ ಹೇಳಿದ್ದಾರೆ.

“ಅಧಿಕೃತ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಎಪ್ಸ್ಟೀನ್‌ನ ಕುತ್ತಿಗೆಯಲ್ಲಿ ಮೂರು ಮುರಿತಗಳು ದಾಖಲಾಗಿದ್ದವು. ಥೈರಾಯ್ಡ್ ಕಾರ್ಟಿಲೇಜ್ ಮೇಲೆ ಎರಡು ಮುರಿತ ಕಂಡು ಬಂದಿತ್ತು. ನನ್ನ 50 ವರ್ಷದ ವೃತ್ತಿಜೀವನದಲ್ಲಿ ನ್ಯೂಯಾರ್ಕ್ ಜೈಲಿನ ಖೈದಿಗಳನ್ನು ಸೇರಿದಂತೆ, ನೇಣು ಬಿಗಿದುಕೊಂಡ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಕುತ್ತಿಗೆ ಮುರಿತಗಳನ್ನು ಎಂದಿಗೂ ನೋಡಿಲ್ಲ” ಎಂದು ಬಾಡೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...