Homeಕರ್ನಾಟಕಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

- Advertisement -
- Advertisement -

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ ಶನಿವಾರ (ಫೆ.14) ಮಧ್ಯರಾತ್ರಿ ನಡೆದಿದೆ.

ಮೃತರನ್ನು ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20), ಮತ್ತು ಧನುಷ್ (20) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ದೊಡ್ಡಬಳ್ಳಾಪುರ ನಿವಾಸಿಗಳು ಎಂದು ತಿಳಿದು ಬಂದಿದೆ.

ಪೊಲೀಸರ ಪ್ರಕಾರ, ಟಾಟಾ ಇಂಡಿಕಾ ಕಾರು ತುಮಕೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಪಕ್ಷದ ರಸ್ತೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಬಸ್ಸಿನ ಮುಂಭಾಗವೂ ಹಾನಿಗೊಳಗಾಗಿದೆ. ಆದರೆ, ಬಸ್ಸಿನಲ್ಲಿದ್ದ ಎಲ್ಲಾ 43 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...