Homeಅಂತರಾಷ್ಟ್ರೀಯಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

- Advertisement -
- Advertisement -

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೊಸ ಪ್ರಧಾನಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 13 ದೇಶಗಳ ನಾಯಕರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನುಸ್ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ, ಚೀನಾ, ಸೌದಿ ಅರೇಬಿಯಾ, ತುರ್ಕಿ, ಪಾಕಿಸ್ತಾನ, ಯುಎಇ, ಕತಾರ್, ಮಲೇಷ್ಯಾ, ಬ್ರೂನೈ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಬೂತಾನ್ ದೇಶಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ತಾರಿಖ್ ರೆಹಮಾನ್ ಸೇರಿದಂತೆ ಬಿಎನ್‌ಪಿ ನಾಯಕರ ಪ್ರಮಾಣವಚನ ಕಾರ್ಯಕ್ರಮ ಡಾಕಾದಲ್ಲಿರುವ ಬಾಂಗ್ಲಾದೇಶದ ರಾಷ್ಟೀಯ ಸಂಸತ್ತಿನ ಸೌತ್ ಪ್ಲಾಝಾದಲ್ಲಿ ನಡೆಯಲಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯ ಸಾಧಿಸಿದೆ.

ಬಿಎನ್‌ಪಿ ನಾಯಕ ಎಎನ್‌ಎಂ ಇಹ್ಸಾನುಲ್ ಹಕ್ ಮಿಲನ್ ಅವರು ಶನಿವಾರ ಮಾತನಾಡಿ, ನೂತನ ಸರ್ಕಾರದ ಪ್ರಮಾಣವಚನ ಸಮಾರಂಭಕ್ಕೆ ಭಾರತದ ಪ್ರಧಾನಿ ಮೋದಿಯವರನ್ನು ಆಹ್ವಾನಿಸುವ ಭರವಸೆ ವ್ಯಕ್ತಪಡಿಸಿದ್ದರು. ಇದೇ ವೇಳೆ ಅವರು “ಎಲ್ಲರೊಂದಿಗೆ ಸ್ನೇಹ, ಯಾರ ಮೇಲೂ ದ್ವೇಷವಿಲ್ಲ” ಎಂಬ ಪಕ್ಷದ ಅಂತರ್ಗತ ವಿದೇಶಾಂಗ ನೀತಿಯ ದೃಷ್ಟಿಕೋನವನ್ನು ಒತ್ತಿ ಹೇಳಿದ್ದರು.

ಢಾಕಾದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ್ದ ಮಿಲನ್, “ಕಾರ್ಯಕ್ರಮದ ಆಯೋಜಕರು ಏನು ಮಾಡುತ್ತಿದ್ದಾರೆಂದು ನನಗೆ ಸರಿಯಾಗಿ ತಿಳಿದಿಲ್ಲ, ಆದರೆ ಅವರು ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ಭರವಸೆ ನನಗಿದೆ. ನನಗಂತೂ ನಿಖರವಾಗಿ ಗೊತ್ತಿಲ್ಲ, ಆದರೆ ಅವರು (ಪ್ರಧಾನಿ ಮೋದಿ) ಆಹ್ವಾನಿತರಾಗಬೇಕು. ಇದು ಸಾಮಾನ್ಯ ಸೌಜನ್ಯ. ಆಯೋಜಕರು ಅದನ್ನು ಮಾಡುತ್ತಾರೆ. ಇಡೀ ಜಗತ್ತು ನಮ್ಮೊಂದಿಗಿರುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದರು.

ಬಿಎನ್‌ಪಿ ವಿಜಯದ ನಂತರ ಅಭಿನಂದನಾ ಸಂದೇಶ ಕಳುಹಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದೆ. “ಗೌರವಾನ್ವಿತ ನರೇಂದ್ರ ಮೋದಿಯವರೇ ನಿಮಗೆ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಚುನಾವಣೆಯಲ್ಲಿ ಬಿಎನ್‌ಪಿ ನಿರ್ಣಾಯಕ ಜಯ ಸಾಧಿಸುವಲ್ಲಿ ತಾರಿಖ್ ರೆಹಮಾನ್ ಅವರ ನಾಯಕತ್ವವನ್ನು ನೀವು ಗುರುತಿಸಿರುವುದನ್ನು ನಾವು ಅಪಾರವಾಗಿ ಪ್ರಶಂಸಿಸುತ್ತೇವೆ” ಎಂದು ಮೋದಿಯ ಪೋಸ್ಟ್‌ಗೆ ಬಿಎನ್‌ಪಿ ಪ್ರತಿಕ್ರಿಯಿಸಿತ್ತು.

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾ, ಮುಂಬರುವ ವರ್ಷಗಳಲ್ಲಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುವ ಇಚ್ಛೆಯನ್ನು ಬಿಎನ್‌ಪಿ ವ್ಯಕ್ತಪಡಿಸಿದೆ.

“ಪರಸ್ಪರ ಗೌರವ, ಪರಸ್ಪರರ ಕಾಳಜಿಗಳ ಬಗ್ಗೆ ಸಂವೇದನೆ ಹಾಗೂ ನಮ್ಮ ಪ್ರದೇಶದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಹಿತದೃಷ್ಟಿಯಿಂದ, ಭಾರತದೊಂದಿಗೆ ನಾವು ರಚನಾತ್ಮಕವಾಗಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇವೆ. ಆ ಮೂಲಕ ನಮ್ಮ ಬಹುಮುಖಿ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಹೊಂದಿದ್ದೇವೆ” ಎಂದು ಹೇಳಿದೆ.

2026ರ ಫೆಬ್ರವರಿ 12ರಂದು ನಡೆದ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯು, ದೀರ್ಘಕಾಲದ ನಾಯಕಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ 2024ರ ವಿದ್ಯಾರ್ಥಿ ದಂಗೆಯ ನಂತರದ ಮೊದಲ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ 300 ಸ್ಥಾನಗಳ ಸಂಸತ್ತಿನಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 151 ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಎನ್‌ಪಿ ಭದ್ರಪಡಿಸಿಕೊಂಡಿದೆ. ಇದರಿಂದಾಗಿ ತಾರಿಖ್ ರೆಹಮಾನ್ ಅವರು ಭಾವಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರೆ, ಇಸ್ಲಾಮಿಸ್ಟ್ ಜಮಾತ್-ಎ-ಇಸ್ಲಾಮಿ ಮೈತ್ರಿಕೂಟವು ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...