Homeಮುಖಪುಟರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

- Advertisement -
- Advertisement -

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ.

ಆರು ಸದಸ್ಯರ ಎನ್‌ಜಿಟಿಯ ವಿಶೇಷ ಪೀಠವು ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಅಥವಾ ತಡೆ ನೀಡಲು ಯಾವುದೇ ಕಾರಣಗಳಿಲ್ಲ. ಯೋಜನೆಯ ಪರಿಸರ ಅನುಮತಿಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಹೇಳಿದೆ.

ಯೋಜನೆಯ ಪರಿಸರ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪೀಠ ವಜಾಗೊಳಿಸಿದೆ. ಪರಿಸರ ಅನುಮತಿಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ರಕ್ಷಣಾತ್ಮಕ ಕ್ರಮಗಳನ್ನು ನಿರ್ದೇಶಿಸಲಾಗಿದೆ ಎಂದಿದೆ. ಉನ್ನತ ಮಟ್ಟದ ಸಮಿತಿಯು ಈ ಹಿಂದಿನ ಕಳವಳಗಳನ್ನು ಪರೀಕ್ಷಿಸಿ ಪರಿಹರಿಸಿದೆ ಎಂದು ಹೇಳಿದೆ. ರಾಷ್ಟ್ರದ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಈ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಸಮರ್ಥಿಸಿಕೊಂಡಿದೆ. ಯೋಜನೆಯ ಅನುಷ್ಠಾನದ ವೇಳೆ ಕಟ್ಟುನಿಟ್ಟಾದ ಪರಿಸರ ನಿಯಮಗಳ ಪಾಲನೆಯನ್ನು ಮೇಲ್ವಿಚಾರಣೆ ಮಾಡಲು ಸೂಚಿಸಿದೆ.

ವಿದೇಶಿ ಶಕ್ತಿಗಳಿಂದ ಹೆಚ್ಚುತ್ತಿರುವ ಒತ್ತಡದ ನಡುವೆ, ಈ ಯೋಜನೆಯು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಉಪಸ್ಥಿತಿಯನ್ನು ಬಲಪಡಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಸುಮಾರು 166 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಹರಡಿರುವ ಈ ಯೋಜನೆಗಾಗಿ 130 ಚದರ ಕಿಲೋಮೀಟರ್ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಒಂದು ಪ್ರಮುಖ ಸರಕು ವರ್ಗಾವಣೆ ಬಂದರು ಹಾಗೂ ನಾಗರಿಕ ಮತ್ತು ಮಿಲಿಟರಿ ಎರಡೂ ಉದ್ದೇಶಗಳಿಗೆ ಬಳಸಬಹುದಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಪೂರಕ ಯೋಜನೆಗಳನ್ನು ನಿರ್ಮಿಸಲಾಗುವುದು ಎಂದಿದೆ.

ಮಲಕ್ಕಾ ಜಲಸಂಧಿಯಂತಹ ಪ್ರಮುಖ ಜಾಗತಿಕ ಹಡಗು ಮಾರ್ಗಗಳ ಸಮೀಪವಿರುವುದರಿಂದ, ಇದು ಭಾರತದ ಕಡಲ ಭದ್ರತೆ ಮತ್ತು ವ್ಯಾಪಾರಕ್ಕೆ ಹೆಚ್ಚಿನ ಶಕ್ತಿ ನೀಡಲಿದೆ. ಅಂತಾರಾಷ್ಟ್ರೀಯ ಕಂಟೇನರ್ ಟರ್ಮಿನಲ್ ಜೊತೆಗೆ ಹೊಸ ಪಟ್ಟಣ ಮತ್ತು 450 ಎಂವಿಎ ಸಾಮರ್ಥ್ಯದ ಅನಿಲ ಹಾಗೂ ಸೌರಶಕ್ತಿ ಆಧಾರಿತ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಅರಣ್ಯ ನಾಶದ ಬಗ್ಗೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದರೂ, ಎನ್‌ಜಿಟಿ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...