Homeಮುಖಪುಟಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ (ಫೆ.17) ವರದಿ ಮಾಡಿದೆ.

ನ್ಯಾಯಾಧೀಶರಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಫೆಬ್ರವರಿ 12ರಂದು ಇಬ್ಬರು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ ಕಾಯ್ದೆ 1971’ರ ಅಡಿಯಲ್ಲಿ ಕ್ರಮ ಜರುಗಿಸಿದೆ. ಇದೇ ವೇಳೆ ಅರ್ಜಿದಾರ ತಾರಿಕ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಿರುವ ಹೈಕೋರ್ಟ್, ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೋರಿದೆ ಎಂದು ವರದಿ ವಿವರಿಸಿದೆ.

ನಮ್ಮ ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಖಾಸಗಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದು ನಾಗರಿಕರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಜನವರಿ 16ರಂದು ರೇಷ್ಮಾ ಖಾನ್ ಎಂಬುವವರಿಗೆ ಸೇರಿದ ಖಾಲಿ ಮನೆಯೊಳಗೆ ನಮಾಝ್ ಮಾಡಿದ ಗುಂಪನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಪ್ರಾರ್ಥನೆಯು ಸಂಪೂರ್ಣವಾಗಿ ತನ್ನ ಖಾಸಗಿ ಆವರಣದೊಳಗೆ ನಡೆದಿದ್ದು, ಇದಕ್ಕೆ ತಾನು ಅನುಮತಿ ನೀಡಿರುವುದಾಗಿ ರೇಷ್ಮಾ ಖಾನ್ ತಿಳಿಸಿದ್ದರು.

ಪೊಲೀಸರ ಕ್ರಮದ ವಿರುದ್ದ ಈ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಂಬಂಧಿಸಿದ ‘ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಉತ್ತರ ಪ್ರದೇಶ ಸರ್ಕಾರ’ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಾರಿಖ್ ಖಾನ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ಹೇಳಿತ್ತು.

ಅರ್ಜಿದಾರ ತಾರಿಖ್ ಖಾನ್ ಪ್ರತಿಕ್ರಿಯಿಸಿ, “ಜನವರಿ 27ರಂದು ಹೊರಡಿಸಲಾದ ನ್ಯಾಯಾಲಯದ ಆದೇಶವು ಮತ್ತೊಂದು ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ನಾವೂ ಸಹ ಅಲ್ಪಸಂಖ್ಯಾತ ಸಮುದಾಯದವರೇ ಆಗಿರುವುದರಿಂದ, ಅದೇ ನಿಯಮ ನಮಗೂ ಅನ್ವಯಿಸಬೇಕು. ಇಲ್ಲಿಯವರೆಗೆ ನ್ಯಾಯಾಲಯದ ತಡೆಯಾಜ್ಞೆಯು ನಮಗೆ ರಕ್ಷಣೆ ನೀಡಿದೆ, ಆ ಕಾರಣಕ್ಕಾಗಿಯೇ ನಾವು ಮನೆಯಲ್ಲಿ ನಮ್ಮ ಪ್ರಾರ್ಥನೆಯನ್ನು ಪುನರಾರಂಭಿಸಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಹಿರಿಯ ಹೈಕೋರ್ಟ್ ವಕೀಲರಾದ ಎಸ್‌ಎಫ್‌ಎ ನಖ್ವಿ ಅವರು ನ್ಯಾಯಾಲಯದ ಆದೇಶ ಮತ್ತು ಹಿಂದೂ ನಿವಾಸಿಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ತೀರ್ಪು ಯಾವುದೇ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಈ ಆದೇಶವು ಸ್ವಯಂ ವಿವರಣಾತ್ಮಕವಾಗಿದೆ. ಒಂದು ಕಡೆ, ಖಾಸಗಿ ಜಾಗದಲ್ಲಿ ಪ್ರಾರ್ಥನೆ ನಡೆಸುವ ಅರ್ಜಿದಾರರ ಸಾಂವಿಧಾನಿಕ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಮತ್ತೊಂದು ಕಡೆ, ಈ ವಿಷಯದಲ್ಲಿ ಯಾವುದೇ ನಿಷೇಧಾಜ್ಞೆ ಹೊರಡಿಸಿಲ್ಲ ಎಂದು ಸ್ವತಃ ರಾಜ್ಯ ಸರ್ಕಾರವೇ ನ್ಯಾಯಾಲಯಕ್ಕೆ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಈ ಕ್ರಮವು ಕಾನೂನುಬಾಹಿರ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಆಡಳಿತಾತ್ಮಕ ಜವಾಬ್ದಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯೇ ಹೊರತು ಖಾಸಗಿ ವ್ಯಕ್ತಿಗಳದ್ದಲ್ಲ. ಒಂದು ವೇಳೆ ಪ್ರಾರ್ಥನೆ ನಡೆಸುವುದರ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೆ, ಸರ್ಕಾರವು ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು. ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುತ್ತಿರುವ ವ್ಯಕ್ತಿಗಳ ಬದಲಿಗೆ, ಕಾನೂನುಬದ್ಧ ಧಾರ್ಮಿಕ ಆಚರಣೆಯನ್ನು ವಿರೋಧಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಖ್ವಿ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ನಡುವೆ ಮೊಹಮ್ಮದ್‌ಗಂಜ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮನೆಯಲ್ಲಿ ಶುಕ್ರವಾರದ ನಮಾಝ್ ಪುನರಾರಂಭಿಸುವುದಕ್ಕೆ ಕೆಲವು ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾರದ ಪ್ರಾರ್ಥನಾ ಸಭೆಗಳನ್ನು ಬೇರೆ ಬೇರೆ ಖಾಸಗಿ ಮನೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿರುವ ಐದು ಕುಟುಂಬಗಳು, ಈ ವಸತಿ ಆಸ್ತಿಯು ಕಾಲಾನಂತರದಲ್ಲಿ ಶಾಶ್ವತ ಪ್ರಾರ್ಥನಾ ಮಂದಿರವಾಗಿ ಮಾರ್ಪಡಬಹುದು ಎಂಬ ಆತಂಕ ವ್ಯಕ್ತಪಡಿಸಿ ತಮ್ಮ ಮನೆಗಳ ಹೊರಗೋಡೆಗಳ ಮೇಲೆ “ಮನೆ ಮಾರಾಟಕ್ಕಿದೆ” ಎಂದು ಬರೆದಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್‌ಗಂಜ್‌ ಗ್ರಾಮವು ಸುಮಾರು 100 ಮನೆಗಳನ್ನು ಹೊಂದಿದ್ದು, ಎರಡೂ ಸಮುದಾಯಗಳ ಸುಮಾರು 600 ಜನರು ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದಾರೆ. ಭಿನ್ನಾಭಿಪ್ರಾಯಗಳು ಸಾರ್ವಜನಿಕ ಪ್ರತಿಭಟನೆಯಾಗಿ ಬದಲಾದ ಕಾರಣ, ಈ ವಾರದ ಆರಂಭದಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ.

ಗ್ರಾಮಸ್ಥರಾದ ಕಮಲ್ ಕಿಶೋರ್ ಅವರು ಪ್ರತಿಕ್ರಿಯಿಸಿ, “ಕಳೆದ ಬಾರಿ ಅವರನ್ನು ತಡೆಯಲಾಗಿತ್ತು, ಆದರೆ ಈಗ ಮತ್ತೆ ಅದೇ ಮನೆಯಲ್ಲಿ ನಮಾಝ್ ಮಾಡುವುದನ್ನು ಆರಂಭಿಸಿದ್ದಾರೆ. ಆ ಮನೆ ಮದರಸಾ ಅಥವಾ ಮಸೀದಿಯಾಗಿ ಬದಲಾಗುವ ಮೊದಲೇ ಅದನ್ನು ಕೆಡವಬೇಕು ಎಂಬುದು ನಮ್ಮ ಆಗ್ರಹ” ಎಂದಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿ ಆರ್ಯ ತಿಳಿಸಿದ್ದಾರೆ. “ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸದ ಹೊರತು ನಾವು ಧಾರ್ಮಿಕ ಆಚರಣೆಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ವಸತಿ ಆಸ್ತಿಯನ್ನು ಸೂಕ್ತ ಪ್ರಕ್ರಿಯೆಯಿಲ್ಲದೆ ರಹಸ್ಯವಾಗಿ ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿ ಪರಿವರ್ತಿಸದಂತೆ ನೋಡುವುದಷ್ಟೇ ನಮ್ಮ ಕಾಳಜಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...