Homeಮುಖಪುಟ5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ, ರಾಜ್ಯದ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಶಿಕ್ಷಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಹಿಂಪಡೆದಂತಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾನೂನು ಅಡೆತಡೆಗಳಿಂದಾಗಿ ಈ ಮೀಸಲಾತಿಯು ಜಾರಿಯಾಗಿರಲಿಲ್ಲ, ಅಲ್ಲದೆ ಮೀಸಲಾತಿ ನೀಡುವ ಸುಗ್ರೀವಾಜ್ಞೆಯು 2014ರಲ್ಲೇ ಅವಧಿ ಮುಕ್ತಾಯಗೊಂಡಿತ್ತು (ಲ್ಯಾಪ್ಸ್ ಆಗಿತ್ತು). ಮಂಗಳವಾರ ಹೊರಡಿಸಲಾದ ಸರ್ಕಾರದ ಆದೇಶವನ್ನು ಪ್ರಸ್ತುತ ಸ್ಥಿತಿಯನ್ನು ಅಧಿಕೃತವಾಗಿ ಘೋಷಿಸುವ ಒಂದು ತಾಂತ್ರಿಕ ಕ್ರಮವೆಂದು ಪರಿಗಣಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

2014ರಲ್ಲಿ ಅಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಮುಸ್ಲಿಮರಿಗೆ ಮತ್ತು ಮರಾಠರಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಘೋಷಿಸಿತ್ತು. 2014ರ ವಿಧಾನಸಭಾ ಚುನಾವಣೆಗೆ ಮುನ್ನ ಅಂದಿನ ಸಚಿವ ಮತ್ತು ಕಾಂಗ್ರೆಸ್ ನಾಯಕ ಅರಿಫ್ ನಸೀಮ್ ಖಾನ್ ಈ ಘೋಷಣೆಯನ್ನು ಮಾಡಿದ್ದರು.

ಇದರ ಅಡಿಯಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಮರಾಠ ಮತ್ತು ಮುಸ್ಲಿಂ ವಿಭಾಗಗಳಿಗೆ ಕ್ರಮವಾಗಿ ಶೇಕಡ 16 ಮತ್ತು ಶೇಕಡ 5ರಷ್ಟು ಮೀಸಲಾತಿಯನ್ನು ನೀಡಬೇಕಾಗಿತ್ತು. ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ, ನಾರಾಯಣ ರಾಣೆ ಸಮಿತಿಯ ವರದಿಯು ಆಧಾರವಾಗಿತ್ತು. ಮುಸ್ಲಿಂ ಮೀಸಲಾತಿಯ ಬೇಡಿಕೆಯೂ ದೀರ್ಘಕಾಲದದಾಗಿದ್ದು, ಈ ಹಿಂದೆ ಸಾಚಾರ್ ಸಮಿತಿಯು ಕೂಡ ಇದಕ್ಕೆ ಶಿಫಾರಸು ಮಾಡಿತ್ತು.

2014ರಲ್ಲಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್ಇಬಿಸಿ) ಅಡಿಯಲ್ಲಿ (ವಿಶೇಷ ಹಿಂದುಳಿದ ವರ್ಗ-ಎ ಅಥವಾ ಎಸ್‌ಬಿಸಿ-ಎ ಮೂಲಕ) ಮುಸ್ಲಿಮರಿಗೆ ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇಕಡ 5ರಷ್ಟು ಮೀಸಲಾತಿಯನ್ನು ನೀಡುವ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ ಚುನಾವಣೆಯ ನಂತರ, ಬಿಜೆಪಿ ಅಧಿಕಾರಕ್ಕೆ ಬರುವುದರೊಂದಿಗೆ ಸರ್ಕಾರ ಬದಲಾಯಿತು. ನಿಗದಿತ ಆರು ತಿಂಗಳ ಕಾಲಮಿತಿಯೊಳಗೆ ಅದರ ಬಗ್ಗೆ ಕಾನೂನನ್ನು ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾದ ಕಾರಣ, 2014ರ ಡಿಸೆಂಬರ್ 23 ರಂದು ಆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿತ್ತು.

2014ರಲ್ಲಿ ಸಂಜಿತ್ ಶುಕ್ಲಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ಮೂಲಕ ಈ ವಿಷಯವನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ಉದ್ಯೋಗಗಳಲ್ಲಿನ ಶೇಕಡಾ 5 ರಷ್ಟು ಮೀಸಲಾತಿಯ ಅನುಷ್ಠಾನವನ್ನು ರದ್ದುಗೊಳಿಸಿತ್ತು, ಆದರೆ ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹಸಿರು ನಿಶಾನೆ ತೋರಿಸಿತ್ತು. ಆದರೆ ಸುಗ್ರೀವಾಜ್ಞೆಯ ಅವಧಿಯು ಮುಕ್ತಾಯಗೊಂಡಿದ್ದರಿಂದ ಶಿಕ್ಷಣದಲ್ಲಿನ ಮೀಸಲಾತಿಯೂ ಜಾರಿಗೆ ಬರಲಿಲ್ಲ. ಆದಾಗ್ಯೂ, ಸರ್ಕಾರವು 2014 ಮತ್ತು 2015ರಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ವಿವಿಧ ಆದೇಶಗಳನ್ನು ಹೊರಡಿಸಿತ್ತು. ಜಾತಿ ಪ್ರಮಾಣಪತ್ರಗಳ ವಿತರಣೆ ಮತ್ತು ಸಿಂಧುತ್ವ ಪ್ರಕ್ರಿಯೆಯೂ ಅವುಗಳಲ್ಲಿ ಒಂದಾಗಿತ್ತು.

ಪ್ರಸ್ತುತ ಸರ್ಕಾರ ಈಗ 2014 ಮತ್ತು 2015ರಲ್ಲಿ ಈ ಸಂಬಂಧ ಹೊರಡಿಸಲಾಗಿದ್ದ ಎಲ್ಲಾ ಆದೇಶಗಳನ್ನು ಅಧಿಕೃತವಾಗಿ ರದ್ದುಗೊಳಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಎಸ್‌ಇಬಿಸಿ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡ 5ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು, ಬಿಜೆಪಿಗೆ ತನ್ನ ಪಕ್ಷದ ಅಥವಾ ತನ್ನ ಮಿತ್ರಪಕ್ಷಗಳ ಮುಸ್ಲಿಂ ನಾಯಕರ ಬಗ್ಗೆ ಯಾವುದೇ ಗೌರವವಿಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ. ಅಲ್ಲದೆ, ಈ ಮುಸ್ಲಿಂ ನಾಯಕರು ಬಿಜೆಪಿಯಿಂದ ನ್ಯಾಯ ಕೊಡಿಸಲು ಅಸಮರ್ಥರಾಗಿದ್ದಾರೆ ಎಂಬುವುದನ್ನು ಇದು ತೋರಿಸುತ್ತದೆ” ಎಂದು ಎನ್‌ಸಿಪಿ-ಎಸ್‌ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಕಿಡಿಕಾರಿದ್ದಾರೆ.

ಶಿವಸೇನಾ ನಾಯಕ ಕೃಷ್ಣ ಹೆಗ್ಡೆ ಈ ಬಗ್ಗೆ ಪ್ರತಿಕ್ರಿಯಿಸಿ, “ಕಾಂಗ್ರೆಸ್-ಎನ್‌ಸಿಪಿ ಸರ್ಕಾರವು ಈ ವಿಷಯದಲ್ಲಿ ಕಾನೂನು ರೂಪಿಸುವಲ್ಲಿ ವಿಫಲವಾಗಿತ್ತು ಮತ್ತು ಕೇವಲ ತಾತ್ಕಾಲಿಕ ಸುಗ್ರೀವಾಜ್ಞೆಯನ್ನು ಹೊರಡಿಸುವ ಮೂಲಕ ಹಿಂದುಳಿದ ಸಮುದಾಯಗಳಿಂದ ಮೀಸಲಾತಿಯನ್ನು ಕಸಿದುಕೊಂಡಿತ್ತು. ಈಗ ಮಹಾಯುತಿ ಸರ್ಕಾರವು ಹಿಂದುಳಿದ ಸಮುದಾಯಗಳ ಸಂಪೂರ್ಣ ಮೀಸಲಾತಿಯನ್ನು ಮರುಸ್ಥಾಪಿಸಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...