Homeಕರ್ನಾಟಕಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

- Advertisement -
- Advertisement -

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ನೌಕರರ ಪ್ರತಿಭಟನೆ ನಿರ್ಧಾರಕ್ಕೆ ಮಣಿದ ಸರ್ಕಾರ 26 ತಿಂಗಳ ಹಿಂಬಾಕಿ ಪಾವತಿಗೆ 1271.92 ಕೋಟಿ ರೂಪಾಯಿ ಬಿಡುಗಡೆ ಮಾಡಲು ಒಪ್ಪಿದೆ. ಇದರಲ್ಲಿ 2022ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗೆ ಇರುವ 14 ತಿಂಗಳ ಬಾಕಿಗೆ 718.93 ಕೋಟಿ ರೂ. ಹಾಗೂ 2021ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಇರುವ 12 ತಿಂಗಳ ಬಾಕಿಗೆ 552.99 ಕೋಟಿ ರೂ. ವಿಶೇಷ ಅನುದಾನವಾಗಿ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗ್ತಿದೆ. ಈ ನಿರ್ಧಾರವನ್ನು ಸರ್ಕಾರ ಅಧಿಕೃತ ಆದೇಶದ ಮೂಲಕ ಪ್ರಕಟಿಸಿದೆ.

ಅಲ್ಲದೆ, ಏಪ್ರಿಲ್ 1, 2025ರಿಂದ ಜಾರಿಗೆ ಬರುವ ಶೇಕಡಾವಾರು ಆಧಾರಿತ ಮೂಲ ವೇತನ ಪರಿಷ್ಕರಣೆಯ ಕುರಿತು ಕಾರ್ಮಿಕ ಸಂಘಗಳೊಂದಿಗೆ ಚರ್ಚೆಯನ್ನು ಪ್ರಾರಂಭಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಆದರೆ, ಸರ್ಕಾರದ ಈ ಭರವಸೆಗಳನ್ನು ಸಾರಿಗೆ ನೌಕರರ ಸಂಘಗಳು ಒಪ್ಪಿಕೊಂಡಿಲ್ಲ. ಹಾಗಾಗಿ, ಇಂದು ನಿಗದಿಯಂತೆ ‘ಬೆಂಗಳೂರು ಚಲೋ’ ನಡೆಯುವ ಸಾಧ್ಯತೆ ಇದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನೌಕರರು ತೀರ್ಮಾನಿಸಿದ್ದಾರೆ. ಸಂಜೆ 4 ಗಂಟೆಯ ನಂತರವೂ ಸರ್ಕಾರ ಬೇಡಿಕೆ ಈಡೇರಿಕೆಗೆ ಮುಂದಾಗದಿದ್ದರೆ, ನಂತರ ಸಂಪೂರ್ಣ ಸಾರಿಗೆ ಸೇವೆ ಬಂದ್ ಮಾಡುವುದಾಗಿ ಎಚ್ಚರಿಸಿದ್ದಾರೆ.

ಒಟ್ಟು 38 ತಿಂಗಳ ಹಿಂಬಾಕಿ ಪಾವತಿಸಬೇಕು. ಜನವರಿ 1, 2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆಯಾಗಬೇಕು. ಖಾಯಂ ಸರ್ಕಾರಿ ನೌಕರರನ್ನಾಗಿ ಸಾರಿಗೆ ಸಿಬ್ಬಂದಿಯನ್ನು ಪರಿಗಣಿಸಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿದ್ದಾರೆ.

ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್‌ ನೋ ಪೇ’ ಅಸ್ತ್ರ ಪ್ರಯೋಗಿಸಲು ಸರ್ಕಾರ ಸಿದ್ದತೆ ನಡೆಸಿದೆ. ತುರ್ತು ಹೊರತುಪಡಿಸಿ ಇತರ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ. ಬಸ್ ಬಂದ್ ಆಗಲ್ಲ, ನೌಕರರು ಸರ್ಕಾರದ ಮನವೊಲಿಸಲು ಪ್ರತಿಭಟನೆ ಮಾಡುತ್ತಿದ್ದಾರೆ ಅಷ್ಟೆ. ಅವರೊಂದಿಗೆ ನಮ್ಮ ಎಂ.ಡಿ ಮಾತನಾಡುತ್ತಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...