Homeಮುಖಪುಟಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ 'ಕೈ ಟ್ರಬಲ್ ಶೂಟರ್‌ಗಳು'...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ.

ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ, ಗುರುವಾರದಿಂದ (ಫೆ.19) ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ನಂತರ ಪಕ್ಷದ ಪ್ರಧಾನ ಕಚೇರಿಯಾದ ‘ರಾಜೀವ್ ಭವನ’ದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಿಯಾಂಕಾ ಗಾಂಧಿ ಜೊತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಅಸ್ಸಾಂಗೆ ತೆರಳಿದ್ದಾರೆ. ಅಸ್ಸಾಂ ಚುನಾವಣೆಗೆ ಡಿ.ಕೆ ಶಿವಕುಮಾರ್ ಅವರನ್ನು ಹಿರಿಯ ವೀಕ್ಷಕರಾಗಿ ನೇಮಿಸಲಾಗಿದೆ. ಡಿಕೆಶಿ ಈಗಾಗಲೇ ಹಲವು ಬಾರಿ ದೆಹಲಿಯಲ್ಲಿ ಅಸ್ಸಾಂ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಭೆಗಳನ್ನು ನಡೆಸಿದ್ದು, ಪ್ರಸ್ತುತ ಪ್ರಿಯಾಂಕಾ ಗಾಂಧಿಯವರೊಂದಿಗೆ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್‌ನ ಕಾಂಗ್ರೆಸ್‌ ನಾಯಕ ಬಂಧು ತಿರ್ಕಿ ಅವರನ್ನೂ ಸಹ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ವೀಕ್ಷಕ ತಂಡದಲ್ಲಿ ಸೇರಿಸಲಾಗಿದೆ.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಅಧ್ಯಕ್ಷ ಗೌರವ್ ಗೊಗೋಯ್ ಮತ್ತು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ಈ ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.

ಬಿಜೆಪಿಗೆ ಹಾರಲು ಸಿದ್ದರಾದ ಬೋರಾ

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕ ಭೂಪೇನ್ ಕುಮಾರ್ ಬೋರಾ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಬಿಕ್ಕಟ್ಟಿನ ನಡುವೆಯೇ ಹೈಕಮಾಂಡ್ ಸೂಚನೆಯಂತೆ ಪ್ರಿಯಾಂಕಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ.

ಭೂಪೇನ್ ಬೋರಾ ಅವರು ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸೌಜನ್ಯದ ನಡವಳಿಕೆ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಬೋರಾ ಅವರ ರಾಜೀನಾಮೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಬೋರಾ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಫೆಬ್ರವರಿ 17 ರಂದು ಬೋರಾ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಬೋರಾ ಫೆಬ್ರವರಿ 22ರಂದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್‌ಗೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ.

ಬೋರಾ ತನ್ನ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವುದಾಗಿ ತಿಳಿಸಿದ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಸಿಎಂ ಶರ್ಮಾ ಬೋರಾ ಫೆ.22ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಅಸ್ಸಾಂಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಚುನಾವಣೆಯ ವೀಕ್ಷಕನಾಗಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ ಜೊತೆ ಅಭ್ಯರ್ಥಿಗಳ ಆಯ್ಕೆ ಮತ್ತು ಪ್ರಚಾರ ತಂತ್ರಗಳ ಕುರಿತು ಚರ್ಚಿಸಲು ಅಸ್ಸಾಂಗೆ ತೆರಳುತ್ತಿರುವುದಾಗಿ ಡಿಕೆಶಿ ಹೇಳಿದ್ದಾರೆ. ಬೋರಾ ಅವರ ಮನವೊಲಿಕೆಯ ಬಗ್ಗೆ ಅವರು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೂ, ಡಿಕೆಶಿ ಬೋರಾ ಅವರ ಮನವೊಲಿಸುವ ಸಾಧ್ಯತೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...