Homeಕರ್ನಾಟಕಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಈ ರಂಜಾನ್ ಆಹಾರ ಮೇಳವನ್ನು ನಿಲ್ಲಿಸಬೇಕೆಂದು ಸ್ಥಳೀಯ ನಿವಾಸಿಗಳು, ಪುಲಕೇಶಿನಗರ ಶಾಸಕ ಎಸಿ ಶ್ರೀನಿವಾಸ್, ಪೊಲೀಸರು ಮತ್ತು ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ನಿವಾಸಿಗಳು ತಮ್ಮ ಮನವಿಯಲ್ಲಿ ಅಂಗಡಿಗಳು, ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪೊಲೀಸರು ಮತ್ತು ಅಧಿಕಾರಿಗಳು, ರಂಜಾನ್ ಆಹಾರ ಮೇಳದ ಹೆಸರಿನಲ್ಲಿ ಯಾವುದೇ ಪಾದಚಾರಿ ಮಾರ್ಗ ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ. ಏಕೆಂದರೆ ಈ ತಿನಿಸುಗಳು ನಿಯಮಗಳನ್ನು ಉಲ್ಲಂಘಿಸುತ್ತವೆ ಎಂದು ಹೇಳಿದ್ದಾರೆ.

ರಂಜಾನ್ ಸಮಯದಲ್ಲಿ ತಮ್ಮ ಅಂಗಡಿಗಳನ್ನು ಪಾದಚಾರಿ ಮಾರ್ಗಗಳಿಗೆ ವಿಸ್ತರಿಸದಂತೆ ಹೋಟೆಲ್ ಗಳಿಗೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿದರೆ “ದಂಡ ವಿಧಿಸಲಾಗುವುದು ಮತ್ತು ಅವರ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಆಹಾರ ಮೇಳದ ಹೆಸರಿನಲ್ಲಿ ಯಾವುದೇ ತೊಂದರೆಗೆ ಅವಕಾಶ ನೀಡವುದಿಲ್ಲ” ಎಂದು ಶಾಸಕ ಶ್ರೀನಿವಾಸ್ ಹೇಳಿದ್ದಾರೆ.

ರಂಜಾನ್ ಆಹಾರ ಮೇಳೆದಸಮಯದಲ್ಲಿ ರಸ್ತೆಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ತಿನಿಸುಗಳು ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ, ಶಬ್ದ ಮತ್ತು ವಾಯು ಮಾಲಿನ್ಯ ಉಂಟಾಗುತ್ತಿದೆ ಎಂದು ಫ್ರೇಸರ್ ಟೌನ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(FTRWA) ಹೇಳಿವೆ.

ಈ ಸಂಬಂಧ ಫೆಬ್ರವರಿ 16 ರಂದು ಶಾಸಕ ಶ್ರೀನಿವಾಸ್ ಅವರ ಕಚೇರಿಯಲ್ಲಿ ಬೆಂಗಳೂರು ಉತ್ತರ ನಗರ ನಿಗಮದ ಅಧಿಕಾರಿಗಳನ್ನು ಭೇಟಿಯಾಗಿ ಒಂದೇ ಒಂದು ಬೇಡಿಕೆ ಇಟ್ಟಿದ್ದೇವೆ. ರಂಜಾನ್ ತಿಂಗಳಲ್ಲಿ ಆಹಾರ ಮೇಳ ಬೇಡ. “ಈ ಮೇಳವು ನಿವಾಸಿಗಳ ಸುರಕ್ಷತೆ ಮತ್ತು ಯೋಗಕ್ಷೇಮದ ಮೇಲೆ ಹಲವು ರೀತಿಯಲ್ಲಿ ತೀವ್ರ ಪರಿಣಾಮ ಬೀರುತ್ತದೆ ಎಂದು FTRWAನ ಖಾಸಿಯರ್ ಅಹ್ಮದ್ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...