Homeಮುಖಪುಟಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ‘ದ ಸಂಡೇ ಗಾರ್ಡಿಯನ್’ ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ ‘ಜಾತಿ ಮತ್ತು ವಿಕ್ಟಿಮ್ ಕಾರ್ಡ್’ ಕುರಿತು ನೀಡಿದ ಹೇಳಿಕೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜೆಎನ್‌ಯು ವಿದ್ಯಾರ್ಥಿ ಸಂಘಟನೆ (ಜೆಎನ್‌ಯುಎಸ್‌ಯು) ಪಂಡಿತ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಅವರ ರಾಜೀನಾಮೆಗೆ ಒತ್ತಾಯಿಸಿದೆ. ಅಲ್ಲದೆ, ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿ ಒಕ್ಕೂಟಗಳು, ಸಂಘಟನೆಗಳು ಮತ್ತು ವಿದ್ಯಾರ್ಥಿಗಳು ಪಂಡಿತ್ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ (ಫೆ. 21) ‘ರಾಷ್ಟ್ರೀಯ ಪ್ರತಿಭಟನಾ ದಿನ’ವನ್ನು ಆಚರಿಸುವಂತೆ ಮನವಿ ಮಾಡಿದೆ.

ಫೆ.16ರಂದು ಅಪ್ಲೋಡ್‌ ಮಾಡಲಾದ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಉಪಕುಲಪತಿ ಪಂಡಿತ್, “ಯಾರೂ ಕೂಡ ಶಾಶ್ವತವಾಗಿ ಸಂತ್ರಸ್ತರಾಗಿ ಅಥವಾ ವಿಕ್ಟಿಮ್ ಕಾರ್ಡ್ ಬಳಸುವ ಮೂಲಕ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಂದುವರಿದು, “ಯಾರನ್ನಾದರೂ ಕೆಟ್ಟವರೆಂದು ಬಿಂಬಿಸುವ ಮೂಲಕ ಅಥವಾ ಶತ್ರು ಎಂದು ಕೂಗಾಡುವ ಮೂಲಕ ಪ್ರಗತಿ ಹೊಂದಲು ಸಾಧ್ಯವಿಲ್ಲ. ಇದು ಕೇವಲ ತಾತ್ಕಾಲಿಕವಾಗಿ ಒಳ್ಳೆಯ ಭಾವನೆ ನೀಡುವ ಒಂದು ಡ್ರಗ್ ತರಹದ ಪ್ರವೃತ್ತಿಯಾಗಿದೆ” ಎಂದಿದ್ದಾರೆ.

ದಲಿತ ವಿದ್ಯಾರ್ಥಿಗಳ ಹೋರಾಟಕ್ಕೆ ಅಂತಾರಾಷ್ಟ್ರೀಯ ಉದಾಹರಣೆಯನ್ನು ನೀಡಿದ ಪಂಡಿತ್, “ಇದೇ ವಿಷಯವನ್ನು ವಿದೇಶಗಳಲ್ಲಿ ಕಪ್ಪು ಸಮುದಾಯದ ವಿಚಾರದಲ್ಲಿ ಮಾಡಲಾಗಿತ್ತು; ಈಗ ಅದೇ ವಿಷಯವನ್ನು ಇಲ್ಲಿ ದಲಿತರ ವಿಚಾರದಲ್ಲೂ ತರಲಾಗಿದೆ” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಯನ್ನು ಕೆಳಗಿನ ವಿಡಿಯೋದಲ್ಲಿ 45 ನಿಮಿಷದಿಂದ ನೋಡಬಹುದು

ಅಂದರೆ, ಸಾಮಾಜಿಕ ನ್ಯಾಯದ ಹೋರಾಟಗಳು ಅಥವಾ ಮೀಸಲಾತಿಯಂತಹ ನೀತಿಗಳು ಸಮುದಾಯಗಳನ್ನು ಶಾಶ್ವತವಾಗಿ ‘ಸಂತ್ರಸ್ತರು’ ಎಂಬ ಭಾವನೆಯಲ್ಲಿ ಇರಿಸುತ್ತವೆ ಎಂಬುದು ಪಂಡಿತ್ ಅವರ ಮಾತಿನ ಅರ್ಥವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಲು ರೂಪಿಸಲಾದ ‘ಯುಜಿಸಿ ಈಕ್ವಿಟಿ ರೆಗ್ಯುಲೇಷನ್ಸ್ 2026’ ಅನ್ನು ಪಂಡಿತ್ ‘ಅನಗತ್ಯ ಮತ್ತು ‘ಅಸಂಬದ್ಧ’ ಎಂದು ಹೇಳಿದ್ದಾರೆ. ಒಬ್ಬರ ಹುಟ್ಟಿನ ಗುರುತಿನ ಆಧಾರದ ಮೇಲೆ ಅವರಿಗೆ ಹಕ್ಕುಗಳನ್ನು ನಿರಾಕರಿಸಬಾರದು ಅಥವಾ ಅದರ ಆಧಾರದ ಮೇಲೆ ಶಿಕ್ಷಿಸಬಾರದು ಎಂದು ಅವರು ವಾದಿಸಿದ್ದಾರೆ.

ಈ ಹೇಳಿಕೆಗಳು ದಲಿತರ ದಶಕಗಳ ಕಾಲದ ಹೋರಾಟ ಮತ್ತು ಅವರಿಗೆ ಸಂವಿಧಾನಬದ್ಧವಾಗಿ ಸಿಗಬೇಕಾದ ಹಕ್ಕುಗಳನ್ನು ಕಡೆಗಣಿಸುವಂತಿವೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ಖಂಡಿಸಿದೆ.

ವಿಡಿಯೋದಲ್ಲಿ ಆರ್‌ಎಸ್‌ಎಸ್‌ ಜೊತೆಗಿನ ನಂಟಿನ ಕುರಿತು ಪಂಡಿತ್ ಅವರು ನೀಡಿರುವ ಹೇಳಿಕೆಗೂ ಜೆಎನ್‌ಯುಎಸ್‌ಯು ಖಂಡನೆ ವ್ಯಕ್ತಪಡಿಸಿದೆ.

ಆದರೆ, ಪಂಡಿತ್ ಅವರು ತನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...