Homeಮುಖಪುಟಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ದೆಹಲಿ ಪೊಲೀಸರು ಆರೋಪಿಗಳ ಕಸ್ಟಡಿ (ರಿಮಾಂಡ್) ಕೋರುವಾಗ, ಅವರು ನೇಪಾಳದಲ್ಲಿ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಇಲ್ಲೂ ಪ್ರತಿಭಟನೆ ನಡೆಸಿದ್ದಾರೆ. ಇದು ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಿಸುವ ಪಿತೂರಿಯಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಭಾರತ- ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸುವ ವೇಳೆ ಆರೋಪಿಗಳು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಸಂದೇಶಗಳಿದ್ದ ಟಿ-ಶರ್ಟ್‌ಗಳನ್ನು ಧರಿಸಿದ್ದರು ಎಂದು ಸಾರ್ವಜನಿಕ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರತಿಭಟನೆಯ ಹಿಂದೆ ದೊಡ್ಡ ಪಿತೂರಿ ಅಡಗಿದೆ. ಇತರ ಕೆಲ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣದ ಸಮಗ್ರ ತನಿಖೆಗಾಗಿ ಬಂಧಿತರ ಕಸ್ಟಡಿ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಪ್ರತಿಭಟನೆ ತಡೆಯುವ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿಭಟನೆಗೆ ಹಣಕಾಸಿನ ನೆರವು ಎಲ್ಲಿಂದ ಬಂದಿದೆ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಆರೋಪಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳುವ ಅಗತ್ಯವಿದೆ ಎಂದಿರುವ ಪೊಲೀಸರು, ನಾಲ್ಕು ವಿಭಿನ್ನ ಸ್ಥಳಗಳಿಂದ ಬಂದ ನಾಲ್ವರು ವ್ಯಕ್ತಿಗಳು ಒಟ್ಟಾಗಿ ಈ ಟಿ-ಶರ್ಟ್‌ಗಳನ್ನು ಮುದ್ರಿಸಿದ್ದರು ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ ಎಂದು ವರದಿಗಳು ಹೇಳಿವೆ.

ಈ ನಡುವೆ ಆರೋಪಿಗಳ ಪರ ವಕೀಲರು, ಆರೋಪಿಗಳು ವಿರೋಧ ಪಕ್ಷಕ್ಕೆ ಸೇರಿದವರಾಗಿರುವುದರಿಂದ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಗಳು ಎಲ್ಲೆಡೆ ನಡೆಯುತ್ತಿವೆ ಮತ್ತು ಪ್ರತಿಭಟನೆ ಮಾಡುವುದು ಅವರ ಹಕ್ಕು ಎಂದು ವಾದಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಈ ರೀತಿ ಹತ್ತಿಕ್ಕಬಾರದು ಎಂದು ಹೇಳಿದ್ದಾರೆ.

ಸುಮಾರು 15 ಜನರು ಎಐ ಶೃಂಗಸಭೆಯ ಹಾಲ್ ಸಂಖ್ಯೆ 5ರ ಲಾಬಿ ಪ್ರದೇಶಕ್ಕೆ ಪ್ರವೇಶಿಸಿ, ಶರ್ಟ್‌ಗಳ ಒಳಗೆ ಧರಿಸಿದ್ದ ಟಿ-ಶರ್ಟ್‌ಗಳನ್ನು ತೆಗೆದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಎಸಿಪಿ (ನವದೆಹಲಿ) ದೇವೇಶ್ ಮಹ್ಲಾ ಹೇಳಿದ್ದಾರೆ. ಪ್ರತಿಭಟನೆಯ ನಂತರ ದೆಹಲಿ ಪೊಲೀಸರು ಆರಂಭದಲ್ಲಿ ಸುಮಾರು 10 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು.

ಬಂಧಿತ ನಾಲ್ವರು ಆರೋಪಿಗಳನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು; ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತಿದ್ದು, ಅದರಲ್ಲಿ ಹಲವು ಗಂಭೀರ ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.

ಅಪರಾಧಿಗಳು ಕಾರ್ಯಕ್ರಮದ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಸುದೀರ್ಘವಾದ ಸಂಘರ್ಷ ಅಥವಾ ನೂಕಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...