Homeಕರ್ನಾಟಕ'ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..'; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

- Advertisement -
- Advertisement -

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮಾನ್ಯ ಛಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ ದಿನವಾಗುತ್ತದೆ!” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರ ಚಡ್ಡಿಗಳನ್ನು ತಲೆ ಮೇಲೆ ಹೊತ್ತು ರಾಜಕೀಯ ಅಸ್ತಿತ್ವ ಕಂಡುಕೊಳ್ಳುವ ಬದಲು ನನ್ನ ತಂದೆಯವರ ಸೈದ್ದಂತಿಕ ನೆರಳಿನಲ್ಲಿ ಮುಂದುವರೆಯುವುದು ಅತ್ಯಂತ ಗೌರವಯುತ ರಾಜಕಾರಣ ಎಂದು ಭಾವಿಸಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

“ವಂಶಪರಂಪರೆಯ ರಾಜಕಾರಣದ ಬಗ್ಗೆ ಮಾತನಾಡಲೇಬೇಕು ಎಂದಿದ್ದರೆ ತಮ್ಮದೇ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ್ ಅವರಿಂದ ಮಾತನಾಡಲು ಶುರು ಮಾಡಲಿ, ಆ ಧೈರ್ಯ ನಾರಾಯಣಸ್ವಾಮಿಯವರಿಗಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ, ದಲಿತತ್ವ ಎಂದರೆ ಸ್ವಾಭಿಮಾನ, ದಲಿತತ್ವ ಎಂದರೆ ಅನ್ಯಾಯಕ್ಕೆ ಪ್ರತಿರೋಧ, ದಲಿತತ್ವ ಎಂದರೆ ಆತ್ಮಬಲ” ಎಂದು ಹೇಳಿದ್ದಾರೆ.

“ದಲಿತತ್ವದ ಸ್ವಾಭಿಮಾನವನ್ನು ಆರ್‌ಎಸ್‌ಎಸ್‌ನವರ ಚಡ್ಡಿಗಳಿಗೆ ಅಡ ಇಟ್ಟವರು ದಲಿತತ್ವದ ಪಾಠ ಹೇಳುವುದು ಕುಚೋದ್ಯವಲ್ಲದೆ ಇನ್ನೇನು” ಎಂದು ಸಚಿವ ಪ್ರಿಯಾಂಕ್ ಅವರು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮಾಡಿದ ಟೀಕೆ ಏನು?

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ವಿಧಾನಪರಿಷತ್ ವಿಪಕ್ಷ ನಾಯಕರ ಛಲವಾದಿ ನಾರಾಯಣಸ್ವಾಮಿ, “ಅಪ್ಪ ಮಲ್ಲಿಕಾರ್ಜುನ ಖರ್ಗೆ ಹೆಸರು ಜೊತೆಯಲ್ಲಿ ಇಲ್ಲದೇ ಇದ್ದರೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಗ್ರಾಮ ಪಂಚಾಯಿತಿ ಸದಸ್ಯರಾಗಲೂ ಅರ್ಹರಲ್ಲ” ಎಂದು ಟೀಕಿಸಿದ್ದರು.

“ಸಚಿವ ಪ್ರಿಯಾಂಕ್‌ ಅವರಿಗೆ ಮಾಡಲು ಬೇರೇನೂ ಕೆಲಸವಿಲ್ಲ. ಕೇವಲ ಸಚಿವರು ಎಂಬ ಗೌರವ ಬಿಟ್ಟರೆ ಸಮಾಜದಲ್ಲಿ ಬೇರೆನೂ ಇಲ್ಲ. ಅವರು ದಲಿತರ ಪರ ಹೋರಾಡಿಲ್ಲ. ಅಂಬೇಡ್ಕರ್‌ ಹೆಸರು ಹೇಳುತ್ತಾರೆಯೇ ಹೊರತು ದಲಿತತ್ವ ಅವರ ಕುಟುಂಬದಲ್ಲೇ ಇಲ್ಲ. ಪ್ರಿಯಾಂಕ್‌ ಅವರು ರಾಜಕಾರಣಿಯೇ ಅಲ್ಲ. ಅಪ್ಪನ ನೆರಳಲ್ಲಿ ಅಧಿಕಾರ ಅನುಭವಿಸುತ್ತಿದ್ದಾರೆ. ಅವರಿಗೆ ಯಾವ ಬದ್ಧತೆಯೂ ಇಲ್ಲ. ಅವರ ತಳಬುಡ ಎಲ್ಲಾ ನನಗೆ ಗೊತ್ತಿದೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...