Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...