Homeಮುಖಪುಟಕೇರಳ ಹೆಸರು ಇನ್ನು ಮುಂದೆ 'ಕೇರಳಂ'; ಕೇಂದ್ರ ಸಚಿವ ಸಂಪುಟ ಅನುಮೋದನೆ

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

- Advertisement -
- Advertisement -

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. “ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಸಚಿವ ಸಂಪುಟದ ಈ ನಿರ್ಧಾರ ಬಂದಿದೆ.

ಕೇರಳ ವಿಧಾನಸಭೆಯು ಜೂನ್ 24, 2024 ರಂದು ರಾಜ್ಯವನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು. ವಿಧಾನಸಭೆಯ ನಿರ್ಣಯದ ನಂತರ, ಮಂಗಳವಾರ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ರಾಜ್ಯದ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸಲು ಅನುಮೋದನೆ ನೀಡಿದೆ ಎಂಧು ಮಾಧ್ಯಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಉದ್ಘಾಟನೆಗೊಂಡ ಸೇವಾ ತೀರ್ಥ, ಹೊಸ ಪಿಎಂಒ ಕಟ್ಟಡದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಇದಾಗಿದೆ. ಮೊದಲ ನಿರ್ಣಯವನ್ನು ಪರಿಶೀಲಿಸಿದ ಗೃಹ ಸಚಿವಾಲಯವು ಕೆಲವು ತಾಂತ್ರಿಕ ಬದಲಾವಣೆಗಳನ್ನು ಸೂಚಿಸಿದ್ದರಿಂದ ಕೇರಳ ವಿಧಾನಸಭೆಯು ಎರಡನೇ ಬಾರಿಗೆ ನಿರ್ಣಯವನ್ನು ಅಂಗೀಕರಿಸಿತು.

ಸಂಪುಟ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, “ಸೇವಾ ತೀರ್ಥದಲ್ಲಿ ನಡೆಯುವ ಈ ಮೊದಲ ಸಭೆಯೊಂದಿಗೆ, ಕೇಂದ್ರ ಸಚಿವ ಸಂಪುಟವು ಇಲ್ಲಿ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು 1.4 ಶತಕೋಟಿ ದೇಶವಾಸಿಗಳಿಗೆ ಸೇವಾ ಮನೋಭಾವದಿಂದ ಪ್ರೇರಿತವಾಗಿರುತ್ತದೆ. ರಾಷ್ಟ್ರ ನಿರ್ಮಾಣದ ವಿಶಾಲ ಗುರಿಯೊಂದಿಗೆ ಸಂಬಂಧ ಹೊಂದಿದೆ ಎಂಬ ತನ್ನ ಸಂಕಲ್ಪವನ್ನು ಪುನರುಚ್ಚರಿಸುತ್ತದೆ. ನಮಗೆ, ಸಾಂವಿಧಾನಿಕ ಮೌಲ್ಯಗಳು ಆಡಳಿತವನ್ನು ನಾಗರಿಕರ ಘನತೆ, ಸಮಾನತೆ ಮತ್ತು ನ್ಯಾಯದೊಂದಿಗೆ ಸಂಪರ್ಕಿಸುವ ನೈತಿಕ ಬದ್ಧತೆಯ ಅಭಿವ್ಯಕ್ತಿಯಾಗಿದೆ” ಎಂದರು.

ರಾಜ್ಯದ ಹೆಸರು ಬದಲಾವಣೆ ಕುರಿತು ಪಿಣರಾಯಿ ವಿಜಯನ್ ಹೇಳಿದ್ದೇನು?

ನಿರ್ಣಯವನ್ನು ಮಂಡಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸಲಾದ ಎಲ್ಲ ಭಾಷೆಗಳಲ್ಲಿ ದಕ್ಷಿಣ ರಾಜ್ಯದ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸಬೇಕೆಂದು ಕೇಂದ್ರ ಸರ್ಕಾರವನ್ನು ಬಯಸಿದ್ದರು.

ನಿರ್ಣಯವನ್ನು ಮಂಡಿಸುತ್ತಾ, ಮುಖ್ಯಮಂತ್ರಿಗಳು ರಾಜ್ಯವನ್ನು ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯಲಾಗುತ್ತಿತ್ತು. ಮಲಯಾಳಂ ಮಾತನಾಡುವ ಸಮುದಾಯಗಳಿಗೆ ಸಂಯುಕ್ತ ಕೇರಳವನ್ನು ರಚಿಸುವ ಬೇಡಿಕೆ ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದ ಸಮಯದಿಂದ ಬಲವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದರು. ರಾಜ್ಯ ಸರ್ಕಾರವು ಆಗಸ್ಟ್ 2023 ರಲ್ಲಿ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತ್ತು.

ಆದರೆ, ಸಂವಿಧಾನದ ಮೊದಲ ಶೇಡ್ಯೂಲ್‌ನಲ್ಲಿ ರಾಜ್ಯದ ಹೆಸರನ್ನು ಕೇರಳಂ ಎಂದು ಬರೆಯಲಾಗಿದೆ ಎಂದು ಅವರು ಹೇಳಿದರು. ಸಂವಿಧಾನದ 3 ನೇ ವಿಧಿಯ ಅಡಿಯಲ್ಲಿ ಕೇರಳ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ಕೇರಳಂ ಎಂದು ಮರುನಾಮಕರಣ ಮಾಡಲು ಈ ಸಭೆ ಕೇಂದ್ರವನ್ನು ತಕ್ಷಣ ವಿನಂತಿಸುತ್ತದೆ ಎಂದು ವಿಜಯನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...