Homeಕರ್ನಾಟಕಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

- Advertisement -
- Advertisement -

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು, ಎಬಿವಿಪಿ ಈ ಹಿಂದೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿತ್ತು.ಎಎಸ್‌ಎ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ಪರಿಣಾಮ ಕೇಂದ್ರ ಸರ್ಕಾರವೇ ಮುತುವರ್ಜಿ ವಹಿಸಿ ದಲಿತ ವಿದ್ಯಾರ್ಥಿಗಳನ್ನು ವಿವಿಯ ಹಾಸ್ಟೆಲ್‌ನಿಂದ ಹೊರಗಟ್ಟಿತ್ತು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಎಎಸ್‌ಎಯ ನಾಯಕ ರೋಹಿತ್ ವೇಮುಲ ಅವರಿಗೆ ಮಾನಸಿಕ ಕಿರುಕುಳ ನೀಡಿ ಸಾಂಸ್ಥಿಕ ಕೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ದೆಹಲಿ ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಎಬಿವಿಪಿಯವರು ವಿದ್ಯಾರ್ಥಿಗಳು, ಗ್ರಂಥಾಲಯ ಮತ್ತು ತರಗತಿ ಕೋಣೆಗಳ ಮೇಲೆ ದಾಳಿ ನಡೆಸಿದ್ದರು. ಜೆಎನ್‌ಯುನಲ್ಲೂ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಗಿತ್ತು. ಇವೆಲ್ಲವನ್ನು ನೋಡಿದರೆ ಎಬಿವಿಪಿಯವರು ನೇರವಾಗಿ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಇಂತಹ ದಾಳಿ ನಡೆಸುತ್ತಿರುವ ಎಬಿವಿಪಿಯ ದುಂಡಾವರ್ತನೆಯನ್ನು ನಾಗರಿಕ ಸಮಾಜ ಖಂಡಿಸಬೇಕು ಎಂದು ಹೇಳಿದ್ದಾರೆ.

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ ನಡೆಸಿದ ಆರೋಪಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ದಾಳಿಯ ಹಿಂದೆ ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈವಾಡ ಇದ್ದಂತಿದೆ. ಆರೋಪಿಗಳು ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದು ನೋಡಿದರೆ ಈ ಅನುಮಾನ ಬರುತ್ತಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವವನ್ನು ಒಪ್ಪದ ಎಬಿವಿಪಿ, ವಿವಿಗಳಲ್ಲಿ ಕೋಮುವಾದ ಸೃಷ್ಟಿಸಲು ವಿದ್ಯಾರ್ಥಿಗಳ ಮೇಲೆ ನಡೆಸುತ್ತಿದೆ. ಸಾಮಾಜಿಕ ನ್ಯಾಯ, ಆರ್ಥಿಕ, ರಾಜಕೀಯ ಚರ್ಚೆಗಳನ್ನು ಒಪ್ಪದ ಎಬಿವಿಪಿ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದನ್ನು ಎಂದಿಗೂ ಸಹಿಸುವುದಿಲ್ಲ. ಸಮಾನತೆ ಪಡೆಯುವುದನ್ನು ಅವರು ಒಪ್ಪಲ್ಲ. ಅದೊಂದು ಕೋಮುವಾದಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ದುರ್ಗೇಶ್ ಕಿಡಿಕಾರಿದ್ದಾರೆ.

ವಿಶ್ವ ವಿದ್ಯಾಲಯಗಳಲ್ಲಿ ಹಿಂಸೆ, ಪ್ರಚೋದನೆ ಹಾಗೂ ಉದ್ದೇಶ ಪೂರ್ವಕವಾಗಿ ಗಲಭೆಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಳ ನಡುವೆ ಭಯದ ವಾತಾವರಣ ಸೃಷ್ಟಿಸುವುದೇ ಎಬಿವಿಪಿಯವರ ಮುಖ್ಯ ಉದ್ದೇಶವಾಗಿದೆ. ಅಜೀಂ ಪ್ರೇಮ್‌ ಜಿ ವಿವಿ ಮೇಲಿನ ದಾಳಿ ಕೂಡ ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ, ಆಸ್ತಿಗಳನ್ನು ಧ್ವಂಸಗೈದು , ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವ ಎಬಿವಿಪಿ ಗುಂಡಾಗಳ ಮೇಲೆ ರೌಡಿ ಶೀಟ್ ತೆರೆಯಬೇಕು ಎಂದು ದುರ್ಗೇಶ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...