Homeಮುಖಪುಟಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

- Advertisement -
- Advertisement -

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬುಧವಾರ (ಫೆ.25) ಪೋಸ್ಟ್ ಹಾಕಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರವಾಸದ ವೇಳೆ ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾದಲ್ಲಿ ನಡೆಸಿದ ಪುರುಷರು, ಮಹಿಳೆಯರು ಮತ್ತು ಮಕ್ಕಳ ಸೇರಿದಂತೆ ಸಾವಿರಾರು ಮುಗ್ಧ ಜನರ ನರಮೇಧವನ್ನು ಉಲ್ಲೇಖಿಸುತ್ತಾರೆ ಮತ್ತು ಅವರಿಗೆ ನ್ಯಾಯ ಕೋರುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಮುಂದುವರಿದು, “ಸ್ವತಂತ್ರ ರಾಷ್ಟ್ರವಾಗಿ ನಮ್ಮ ಇತಿಹಾಸದುದ್ದಕ್ಕೂ ಭಾರತ ಸತ್ಯದ ಪರ ನಿಂತಿದೆ. ನಾವು ಜಗತ್ತಿಗೆ ಸತ್ಯ, ಶಾಂತಿ ಮತ್ತು ನ್ಯಾಯದ ಬೆಳಕನ್ನು ತೋರಿಸುವುದನ್ನು ಮುಂದುವರಿಸಬೇಕು” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಫೆ.25 ಮತ್ತು 26ರಂದು ಇಸ್ರೇಲ್‌ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಇದು ಪ್ರಧಾನಿಯಾಗಿ ಮೋದಿಯವರ ಎರಡನೇ ಇಸ್ರೇಲ್ ಪ್ರವಾಸವಾಗಿದೆ. 

ಈ ಸಂದರ್ಭದಲ್ಲಿ ಮೋದಿ ಅವರು ಇಸ್ರೇಲ್ ಸಂಸತ್ ಆದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ರಕ್ಷಣೆ, ಭದ್ರತೆ, ತಂತ್ರಜ್ಞಾನ (ಎಐ ಮತ್ತು ಸೈಬರ್ ಸೆಕ್ಯುರಿಟಿ), ಕೃಷಿ ಮತ್ತು ನೀರಿನ ನಿರ್ವಹಣೆಯ ಕ್ಷೇತ್ರಗಳಲ್ಲಿನ ಸಹಕಾರದ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...