Homeಮುಖಪುಟ'ಕೋಮು ಸಾಮರಸ್ಯ ಕದಡುವ ಸಾಧ್ಯತೆ': 'ದಿ ಕೇರಳ ಸ್ಟೋರಿ-2' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

- Advertisement -
- Advertisement -

‘ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್’ ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ (ಫೆ.27) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು.

ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ತಮ್ಮ ಆದೇಶದಲ್ಲಿ,“…ಸಿನಿಮಾದ ಭಾಗವೆಂದು ಒಪ್ಪಿಕೊಳ್ಳಲಾದ ಟೀಸರ್‌ನಲ್ಲಿರುವ ವಿಷಯವೇ ಮೇಲ್ನೋಟಕ್ಕೆ ಸಾರ್ವಜನಿಕರ ಗ್ರಹಿಕೆಯನ್ನು ವಿರೂಪಗೊಳಿಸುವ ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವ ಸಾಮರ್ಥ್ಯವನ್ನು ಹೊಂದಿದೆ…” ಎಂದು ಹೇಳಿದ್ದಾರೆ.

ಮುಂದುವರಿದು, “ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಸಿನಿಮಾ ಪ್ರಮಾಣೀಕರಣದ ಆಥವಾ ಸೆನ್ಸಾರ್ ಮಾರ್ಗಸೂಚಿಗಳನ್ನು ಮೇಲ್ನೋಟಕ್ಕೆ ನಿರ್ಲಕ್ಷಿಸಿದೆ” ಎಂದಿದ್ದಾರೆ ಮತ್ತು ಈ ವಿಷಯವನ್ನು ಮರುಪರಿಶೀಲಿಸುವಂತೆ ಮಂಡಳಿಗೆ ಸೂಚಿಸಿದ್ದಾರೆ ಎಂದು livelaw.in ವರದಿ ಮಾಡಿದೆ.

“ಕಲಹವನ್ನು ಉಂಟುಮಾಡುವ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಅಥವಾ ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುವ ಸಾಧ್ಯತೆ ಇರುವ ವಿಷಯಗಳ ಪ್ರಸಾರವು ಭಾರತದ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಪ್ರತಿಪಾದಿಸಲಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಅರ್ಜಿದಾರರು ಸಲ್ಲಿಸಿದ ಮಧ್ಯಂತರ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಈ ಹಿಂದೆ, ಈ ಪ್ರಕರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾವನ್ನು ವೀಕ್ಷಿಸಲು ಸಿದ್ದವಿರುವುದಾಗಿ ನ್ಯಾಯಾಲಯ ತಿಳಿಸಿತ್ತು. ಆದರೆ, ಸಿನಿಮಾ ತಂಡ ಇದಕ್ಕೆ ಆಸಕ್ತಿ ತೋರಿಸಿರಲಿಲ್ಲ. ನ್ಯಾಯಾಲಯದ ಮುಂದಿರುವ ಅರ್ಜಿಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ಸ್ವರೂಪದಲ್ಲಿವೆಯೇ ಅಥವಾ ಖಾಸಗಿ ಮೊಕದ್ದಮೆಯ ಸ್ವರೂಪದಲ್ಲಿವೆಯೇ ಎಂಬುವುದನ್ನು ಮೊದಲು ನಿರ್ಧರಿಸಬೇಕು ಎಂದು ಸಿನಿಮಾ ತಂಡ ವಾದಿಸಿತ್ತು.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಹೇಳಿತ್ತು.

ಅರ್ಜಿದಾರರ ವಕೀಲರು, ನಿರ್ಮಾಪಕರ ಪರ ಹಾಜರಾದ ಹಿರಿಯ ವಕೀಲರು ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ವಕೀಲರ ವಿವರವಾದ ವಾದಗಳನ್ನು ಆಲಿಸಿ ನಂತರ, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

Courtesy : livelaw

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...