Homeಕರ್ನಾಟಕಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ' ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ‘ಭೂಮಿ ಹಬ್ಬ’ ಐತಿಹಾಸಿಕ ವಿಜಯೋತ್ಸವ ಮತ್ತು ಗೌರವ ಸಮರ್ಪಣೆ ಹಮ್ಮಿಕೊಂಡಿತು.

2026 ಫೆಬ್ರವರಿ 27, ಶುಕ್ರವಾರ ನಡೆದ ‘ಭೂಮಿ ಹಬ್ಬ’ ಸಂಭ್ರಮದಲ್ಲಿ ಈ ಐತಿಹಾಸಿಕ ಹೋರಾಟದ ನೆನಪುಗಳನ್ನು ಸಂಗ್ರಹಿಸಿದ ‘ಸಾವಿರಾರು ನದಿಗಳು’ ಲೇಖನ ಸಂಕಲವನ್ನು ಲೋಕಾರ್ಪಣೆಗೊಳಿಸಲಾಯಿತು. 

ರೈತ ಹೋರಾಟದ ಮುಂದಾಳುಗಳಲ್ಲಿ ಒಬ್ಬರಾದ ಕಾರಳ್ಳಿ ಶ್ರೀನಿವಾಸ್ ಅವರು ಮಾತನಾಡಿ ‘ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಮಣ್ಣಿನ ಮೇಲೆ ಕಣ್ಣಿಟ್ಟಿದ್ದ ಭೂದಾಹದ ವ್ಯವಸ್ಥೆಯ ವಿರುದ್ಧ ರೈತರು ತೋರಿದ ಅಪ್ರತಿಮ ಸಂಘಟಿತ ಶಕ್ತಿಗೆ ಸರಕಾರ ಕೊನೆಗೂ ಮಣಿದಿದೆ. ದೀರ್ಘ ಕಾಲ ಮಳೆ, ಗಾಳಿ, ಬಿಸಿಲೆನ್ನದೆ ಧರಣಿ ಕುಳಿತ ರೈತರ ಛಲಕ್ಕೆ ಸಂದ ಜಯವಾಗಿ, ಸುಮಾರು 1,777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದರು. ಅಲ್ಲದೇ ಈ ವಿಜಯವು ಕೇವಲ ಚನ್ನರಾಯಪಟ್ಟಣದ ರೈತರದ್ದಲ್ಲ, ಬದಲಿಗೆ ಭೂಮಿಯೇ ಜೀವನಾಧಾರವೆಂದು ನಂಬಿರುವ ನಾಡಿನ ಸಮಸ್ತ ರೈತಕುಲದ ಸ್ವಾಭಿಮಾನದ ಸಂಕೇತವಾಗಿದೆ ಎಂದು ಅವರು ಹೇಳಿದರು.

ಈ ಸುದೀರ್ಘ ಹೋರಾಟದ ಹಾದಿಯಲ್ಲಿ ನಮಗೆ ಧೈರ್ಯ ತುಂಬಿ ಹೆಗಲಿಗೆ ಹೆಗಲು ಕೊಟ್ಟು ನಿಂತವರು ನಮ್ಮ ಹೋರಾಟದ ಒಡನಾಡಿಗಳು, ವಿವಿಧ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ಮಿತ್ರರು ನೀಡಿದ ಬೆಂಬಲದಿಂದಲೇ ಇಂದು ನಾವು ಈ ಮಣ್ಣನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ನೋವಿಗೆ ದನಿಯಾಗಿ, ಅಧಿಕಾರಶಾಹಿಯ ವಿರುದ್ಧದ ಈ ಸಮರದಲ್ಲಿ ಬೆನ್ನೆಲುಬಾಗಿ ನಿಂತ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾರಳ್ಳಿ ಶ್ರೀನಿವಾಸ್ ಸ್ಮರಿಸಿದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ‘ಈ ಗೆಲುವಿನ ನಡುವೆಯೇ ಸರಕಾರವು ಭೂಮಿಯನ್ನು ಬಿಡುಗಡೆ ಮಾಡುವ ನೆಪದಲ್ಲಿ ‘ಶಾಶ್ವತ ವಿಶೇಷ ಕೃಷಿ ವಲಯ’ ಎಂಬ ಅಸಂವಿಧಾನಿಕ ನಿಯಮವನ್ನು ಹೇರಿ, ರೈತರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾಗಿದೆ. ಸರಕಾರದ ಈ ದ್ವಂದ್ವ ನೀತಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭೂಮಿ ಉಳಿಸಿಕೊಳ್ಳಲು ಹೋರಾಡಿದ ನಮಗೆ, ಇಂತಹ ಮಾರಕ ಷರತ್ತುಗಳನ್ನು ಎದುರಿಸುವುದು ಹೇಗೆ ಎಂಬುದು ತಿಳಿದಿದೆಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ‘ರೈತರ ತಾಳ್ಮೆಯನ್ನು ಪರೀಕ್ಷಿಸದೆ ಕೂಡಲೇ ಈ ಕಠಿಣ ನಿಯಮಗಳನ್ನು ಹಿಂಪಡೆದು ರೈತರಿಗೆ ಮುಕ್ತವಾಗಿ ಬದುಕುವ ಹಕ್ಕನ್ನು ನೀಡಬೇಕು. ಐತಿಹಾಸಿಕ ವಿಜಯವನ್ನು ಸಂಭ್ರಮಿಸುವುದರ ಜೊತೆಗೆ ಎಲ್ಲರೂ ಒಟ್ಟಾಗಿ ಸೇರಿ ನಮ್ಮೆಲ್ಲರ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಿದ್ದೇವೆ’ ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಈ ಸಂಭ್ರಮದಲ್ಲಿ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳಾದ ಕಾರಳ್ಳಿ ಶ್ರೀನಿವಾಸ್, ರಮೇಶ್ ಚೀಮಾಚನಹಳ್ಳಿ, ಪ್ರಮೋದ್ ಪೂಲನಹಳ್ಳಿ, ಮಾರೇಗೌಡ, ನಂಜಪ್ಪ, ಸಂಯುಕ್ತ ಹೋರಾಟ ಕರ್ನಾಟಕ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ನೂರ್ ಶ್ರೀಧರ್, ವರಲಕ್ಷ್ಮಿ, ಯಶವಂತ, ಕೆ.ವಿ.ಭಟ್, ವೀರಸಂಗಯ್ಯ, ಹೋರಾಟಗಾರರಾದ ದು.ಸರಸ್ವತಿ, ದೇವಿ, ಪ್ರಕಾಶ್, ಗೌರಿ, ಗೌರಮ್ಮ, ಆಂಜಿನೇಯರೆಡ್ಡಿ, ಪತ್ರಕರ್ತರಾದ ರವಿಕುಮಾರ್ ಈಚಲಮರ, ಚಂದ್ರು ತರಹುಣಿಸೆ, ವಿದ್ಯಾರ್ಥಿ ಮುಖಂಡರಾದ ಸರೋವರ್, ಯಮುನಾ, ಕೌಶಲ್ಯ, ಮಮತಾ, ಶರತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...