Homeಮುಖಪುಟ'ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ': ಕೇಜ್ರಿವಾಲ್...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

- Advertisement -
- Advertisement -

“ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ತಾವು ಮತ್ತು ಇತರರು ನ್ಯಾಯಾಲದಿಂದ ಆರೋಪ ಮುಕ್ತರಾದ ಬಳಿಕ ಶುಕ್ರವಾರ (ಫೆ.27) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಗೆ ನೇರವ ಸವಾಲು ಹಾಕಿದ್ದಾರೆ.

ಕೇಜ್ರಿವಾಲ್, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಆರ್‌ಎಸ್‌ ಮಾಜಿ ನಾಯಕಿ ಕ.ಕವಿತಾ ಸೇರಿದಂತೆ ಎಎಪಿ ನಾಯಕರನ್ನು ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಪ್ರಕರಣದ ತನಿಖೆ ನಡೆಸಿದ ಸಿಬಿಐಗೆ ಛೀಮಾರಿ ಹಾಕಿದ ನ್ಯಾಯಾಲಯ, ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ವಿಶ್ವಾಸಾರ್ಹ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಎಂದು ತೀರ್ಪು ನೀಡಿದೆ.

2021-22ರಲ್ಲಿ ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಎಎಪಿ ಸರ್ಕಾರ, ರಾಷ್ಟ್ರ ರಾಜಧಾನಿಗೆ ಹೊಸ ಅಬಕಾರಿ ನೀತಿ ರೂಪಿಸುವ ಸಮಯದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ಆರೋಪಿಸಿತ್ತು.

ನ್ಯಾಯಾಲಯ ತೀರ್ಪು ಹೊರಬಿದ್ದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ ನಂತರ ದೆಹಲಿ ಸಂಕಷ್ಟದಲ್ಲಿದೆ ಎಂದ ಕೇಜ್ರಿವಾಲ್, “ಇಡೀ ದೆಹಲಿ ಹಾಳಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಅಧಿಕಾರದ ದುರಾಸೆಯ ದೊಡ್ಡ ಪರಿಣಾಮವನ್ನು ದೆಹಲಿಯ ಮೂರು ಕೋಟಿ ಜನರು ಅನುಭವಿಸುತ್ತಿದ್ದಾರೆ. ಹೋಗಿ ದೆಹಲಿಯ ಜನರನ್ನು ಕೇಳಿ. ಇಂದು ನಾನು ಮೋದಿಯವರಿಗೆ ಸವಾಲು ಹಾಕುತ್ತೇನೆ. ನಿಮಗೆ ಧೈರ್ಯವಿದ್ದರೆ, ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ. ನೀವು ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ, ನಾನು ರಾಜಕೀಯವನ್ನು ತ್ಯಜಿಸುತ್ತೇನೆ. ದೆಹಲಿಯ ಜನರು ನಿಮ್ಮಿಂದ ಬೇಸತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ದೆಹಲಿಯ ವಿಧಾನಸಭೆಯ 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದೆ. ಇದಕ್ಕೂ ಮುನ್ನ ಎಎಪಿ 2015ರಲ್ಲಿ 67 ಮತ್ತು 2020ರಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು. ಎರಡು ಚುನಾವಣೆಗಳಲ್ಲಿ ಭಾರೀ ಬಹುಮತ ಗಳಿಸಿದ್ದ ಎಎಪಿ, 2025ರಲ್ಲಿ ಕೇವಲ 22 ಸ್ಥಾನಗಳನ್ನು ಪಡೆದಿತ್ತು.

ಅಬಕಾರಿ ನೀತಿ ಹಗರಣದ ಎನ್ನುವುದು ದೆಹಲಿಯಲ್ಲಿ ಎಎಪಿ ಸರ್ಕಾರದ ಆಡಳಿತವನ್ನು ಕೊನೆಗೊಳಿಸಲು ಬಿಜೆಪಿ ರೂಪಿಸಿದ ಸ್ವತಂತ್ರ ಭಾರತದ ಅತಿ ದೊಡ್ಡ ಪಿತೂರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿಯಂತಹ ಪಕ್ಷಗಳನ್ನು ನಾಶಮಾಡಲು ಮತ್ತು ಅಪಖ್ಯಾತಿಗೊಳಿಸಲು ಪ್ರಯತ್ನಿಸುವ ಬದಲು, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುವತ್ತ ಗಮನಹರಿಸಬೇಕು ಎಂದಿದ್ದಾರೆ.

ಅಧಿಕಾರಕ್ಕಾಗಿ ಯಾರೂ ದೇಶ ಮತ್ತು ಸಂವಿಧಾನದೊಂದಿಗೆ ಈ ರೀತಿ ಆಟವಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಬಕಾರಿ ನೀತಿ ಹಗರಣ ಆರೋಪ ಆರಂಭದಿಂದಲೇ ಕಪೋಲಕಲ್ಪಿತ, ಅದರಲ್ಲಿ ಯಾವುದೇ ಹುರುಳಿರಲಿಲ್ಲ. ಅದರಲ್ಲಿ ಏನಾದರೂ ಹುರುಳಿದ್ದರೆ, ವಿಚಾರಣೆ ಹದಿನೈದು ಅಥವಾ ಇಪ್ಪತ್ತು ವರ್ಷಗಳ ಕಾಲ ನಡೆಯುತ್ತಿತ್ತು. ಹಲವಾರು ಸಾಕ್ಷಿಗಳನ್ನು ಕರೆಯಲಾಗುತ್ತಿತ್ತು, ಸಾಕ್ಷ್ಯಗಳನ್ನು ಹಾಜರುಪಡಿಸಲಾಗುತ್ತಿತ್ತು. ಆದರೆ, ನ್ಯಾಯಾಲಯ ಇದು ಕ್ಷುಲ್ಲಕ ಪ್ರಕರಣ, ನಕಲಿ, ನಿಷ್ಪ್ರಯೋಜಕ, ತಪ್ಪು ಎಂದು ಹೇಳಿದೆ. ಇದನ್ನು ನಾನು ಹೇಳುತ್ತಿಲ್ಲ. ನ್ಯಾಯಾಲಯವೇ ಈ ಪದಗಳನ್ನು ಬಳಸಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನೇರ ವಾಗ್ದಾಳಿಯಲ್ಲಿ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಎಎಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಅವರಿಬ್ಬರು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಇಡೀ ಪಿತೂರಿಯನ್ನು ಇಬ್ಬರು ವ್ಯಕ್ತಿಗಳು ರೂಪಿಸಿದ್ದರು. ಒಂದು ನರೇಂದ್ರ ಮೋದಿ ಮತ್ತೊಂದು ಅಮಿತ್ ಶಾ. ಹಾಗಾಗಿ, ಅವರಿಬ್ಬರೂ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರು ಒಟ್ಟಾಗಿ ಎಎಪಿಯನ್ನು ನಾಶಮಾಡಲು ಪಿತೂರಿ ನಡೆಸಿದ್ದರು ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...