Homeಕರ್ನಾಟಕಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

- Advertisement -
- Advertisement -

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರದ ಗ್ರಾಮದಲ್ಲಿ ಖಮೇನಿ ಸಮುದಾಯದ ಶಿಯಾ ಮುಸ್ಲಿಮರೆ ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ.

ಖಮೇನಿ ಹತ್ಯೆ ಸುದ್ದಿ ಖಚಿತವಾಗುತ್ತಿದ್ದಂತೆಯೇ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ಮಾಡಿದರು. ಅಮೇರಿಕ ಮತ್ತು ಇಸ್ರೇಲ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಣ್ಣೀರು ಹಾಕುತ್ತಿರುವ ಅಲ್ಲಿಪುರದ ಜನ

ಖಮೇನಿ ಹತ್ಯೆಗೆ ಅಲಿಪುರ ಗ್ರಾಮದ ಪ್ರತಿಯೊಬ್ಬರು ಕಣ್ಣೀರು ಹಾಕುತ್ತಿದ್ದಾರೆ, ಪ್ರತಿ ಮನೆಯಲ್ಲೂ ಶೋಕ ಆವರಿಸಿದೆ. ನೂರಾರು ಜನರು ಇರಾನ್‌ನಲ್ಲಿ ಉದ್ಯಮ ನಡೆಸುತ್ತಿದ್ದು, ಹಲವರು ಅಲ್ಲಿ ಓದು ಮತ್ತು ಉದ್ಯೋಗ ಮಾಡುತ್ತಿದ್ದಾರೆ.

ಕಪ್ಪು ಬಟ್ಟೆ ಧರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಜನರು, ಅಮೇರಿಕ ಹಾಗೂ ಇಸ್ರೇಲ್ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಖಮೇನಿ ಅವರದ್ದು ಹತ್ಯೆಯಲ್ಲ ಇದು ಬಲಿದಾನ; ಇದು ಅಂತ್ಯ ಅಲ್ಲ ಆರಂಭ ಎಂದು ಕೂಗಿದರು.

ಗ್ರಾಮಕ್ಕೆ ಭೇಟಿ ನೀಡಿದ್ದ ಖಮೇನಿ

1981ರಲ್ಲಿ ಭಾರತ ಪ್ರವಾಸದ ಸಮಯದಲ್ಲಿ ಖಮೇನಿ ಸ್ವತಃ ಈ ಗ್ರಾಮಕ್ಕೆ ಭೇಟಿ ನೀಡಿದ್ದರು. ಆಗ ಅವರಿನ್ನೂ ಇರಾನಿನ ಪರಮೋಚ್ಚ ನಾಯಕ ಆಗಿರಲಿಲ್ಲ. ಅವರು ಗ್ರಾಮಕ್ಕೆ ಆಗಮಿಸಿದ್ದರ ನೆನಪು ಸ್ಥಳೀಯರಲ್ಲಿ ಇನ್ನೂ ಹಸಿರಾಗಿದೆ. 

ಇರಾನಿನ ಬೆಂಬಲದೊಂದಿಗೆ ಅಲಿಪುರದಲ್ಲಿ ನಿರ್ಮಿಸಲಾದ ಆಸ್ಪತ್ರೆಯನ್ನು ಖಮೇನಿ ಉದ್ಘಾಟಿಸಿದ್ದರು. ಬಳಿಕ ಅಲ್ಲಿಯ ವಿದ್ವಾಂಸರು ಮತ್ತು ನಿವಾಸಿಗಳೊಂದಿಗೆ ಸಮಯ ಕಳೆದಿದ್ದು, ಸಮುದಾಯ ಮತ್ತು ಇರಾನ್ ನಡುವಿನ ಆಜೀವ ಬಾಂಧವ್ಯವನ್ನು ಬಲಪಡಿಸಿದ್ದರು ಎಂಬುದನ್ನು ಸ್ಥಳೀಯರು ನೆನಪಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಇಲ್ಲಿನ ಸುಮಾರು 25ಸಾವಿರಕ್ಕೂ ಅಧಿಕ ಶಿಯಾ ಮುಸ್ಲಿಂ ಪಂಗಡದವರು ಖಮೇನಿಯವರನ್ನು ತಮ್ಮ ಧರ್ಮಗುರು ಎಂದು ಭಾವಿಸುತ್ತಾರೆ.

ಅಲಿಪುರ ಪರಿಚಯ

ಅಲಿಪುರ ಒಂದು ಸಣ್ಣ ಮತ್ತು ವಿಶಿಷ್ಟ ಹಳ್ಳಿಯಾಗಿದ್ದು, ಇದು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಶಿಯಾ ಸಂಸ್ಕೃತಿಯನ್ನು ಆಚರಿಸುತ್ತಾ ಭಾರತದಲ್ಲಿ ನೆಲೆಗೊಂಡಿರುವ ಈ ಗ್ರಾಮವು ತನ್ನ ವಿಶಿಷ್ಟ ಲಕ್ಷಣಕ್ಕಾಗಿ ಗಮನ ಸೆಳೆದಿದೆ. ಇದರ ಬಹುಪಾಲು ನಿವಾಸಿಗಳು ಶಿಯಾ ಮುಸ್ಲಿಮರು, 30,000 ಕ್ಕೂ ಹೆಚ್ಚು ಜನರಿದ್ದಾರೆ. ಇಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯು ಅಲ್ಪಸಂಖ್ಯಾತವಾಗಿದೆ.

ಅಲಿಪುರವನ್ನು “ದಕ್ಷಿಣ ಭಾರತದ ರತ್ನಗಳ ಗ್ರಾಮ” ಎಂದು ಕರೆಯಲಾಗುತ್ತದೆ. ಈ ಗ್ರಾಮವು ಜೋಳ, ಸೂರ್ಯಕಾಂತಿ, ದ್ವಿದಳ ಧಾನ್ಯಗಳು, ತರಕಾರಿಗಳು ಮತ್ತು ಹಣ್ಣುಗಳಂತಹ ಬೆಳೆಗಳನ್ನು ಬೆಳೆಯುತ್ತಾರೆ.

ರಾಜ್ಯ 94 ರಲ್ಲಿರುವ ಅಲಿಪುರವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಕಿ.ಮೀ ದೂರದಲ್ಲಿದೆ. ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ಇದು ಬೆಂಗಳೂರು, ದೊಡ್ಡಬಳ್ಳಾಪುರ, ಗೌರಿಬಿದನೂರು, ಹಿಂದೂಪುರ ಮತ್ತು ತುಮಕೂರು ಮುಂತಾದ ಹತ್ತಿರದ ಪಟ್ಟಣಗಳು ​​ಮತ್ತು ನಗರಗಳಿಗೆ ರಸ್ತೆಯ ಮೂಲಕ ಉತ್ತಮ ಸಂಪರ್ಕ ಹೊಂದಿದೆ.

ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯ

ಅಲಿಪುರ್ ಧಾರ್ಮಿಕ ವೈವಿಧ್ಯತೆ ಮತ್ತು ಸಾಮರಸ್ಯವನ್ನು ಆಚರಿಸುವ ಒಂದು ಹಳ್ಳಿಯಾಗಿದೆ. ಇದು ಮಸೀದಿಗಳು, ಅಶುರ್ ಖಾನಗಳು, ದೇವಾಲಯಗಳು ಮತ್ತು ಚರ್ಚ್‌ನಂತಹ ವಾಸ್ತುಶಿಲ್ಪದ ಅದ್ಭುತಗಳನ್ನು ಹೊಂದಿದೆ. ಇತ್ತೀಚಿನ ವರ್ಷಗಳಲ್ಲಿ, ಇದು ಜಿಲ್ಲೆಯ ಶೈಕ್ಷಣಿಕ ಕೇಂದ್ರವಾಗಿ ಮಾರ್ಪಟ್ಟಿದೆ, ಗ್ರಾಮದೊಳಗೆ ಹಲವಾರು ಶಾಲೆಗಳು ಮತ್ತು ಕಾಲೇಜುಗಳಿವೆ. ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಸಣ್ಣ ಮುಸ್ಲಿಂ ಪಂಗಡಗಳ ವೈವಿಧ್ಯಮಯ ಜನಸಂಖ್ಯೆಯನ್ನು ಹೊಂದಿದ್ದರೂ, ಗ್ರಾಮಸ್ಥರು ತಮ್ಮ ಧಾರ್ಮಿಕ ಸಂಘಗಳ ಬಗ್ಗೆ ಪರಸ್ಪರ ತಿಳುವಳಿಕೆಯೊಂದಿಗೆ ಶಾಂತಿಯುತವಾಗಿ ಬದುಕುತ್ತಾರೆ.

ಅಲಿಪುರದಲ್ಲಿ ಪೊಲೀಸ್ ಠಾಣೆ ಇಲ್ಲದಿರುವುದು ಗಮನಿಸಬೇಕಾದ ಸಂಗತಿ. ಬದಲಾಗಿ, ಸರ್ವೋಚ್ಚ ಸಂಸ್ಥೆ ಅಂಜುಮನ್ ಇ ಜಾಫ್ರಿಯಾ 1930 ರಲ್ಲಿ ಅಲಿಪುರದ ಪೋಷಕರು ಸ್ಥಾಪಿಸಿದ ಉಪ-ಕಾನೂನುಗಳ ಪ್ರಕಾರ ಸಮಸ್ಯೆಗಳನ್ನು ಪರಿಹರಿಸುತ್ತದೆ. ಇದನ್ನು ಮೌಲಾನಾ ಅಬ್ಬಾಸ್ ಹುಸೇನ್ ಬಕ್ರಿ ಸಾಹಿಬ್ ನೇತೃತ್ವ ವಹಿಸಿದ್ದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಬದಲಾಗುವ ಈ ಸಂಸ್ಥೆ (ಅಂಜುಮನ್ ಇ ಜಾಫ್ರಿಯಾ), ಒಬ್ಬ ಅಧ್ಯಕ್ಷ ಮತ್ತು ಕಾರ್ಯದರ್ಶಿಯನ್ನು ಹೊಂದಿದ್ದು, ಅಲಿಪುರದ ವಿವಿಧ ಇಲಾಖೆಗಳನ್ನು ನಿರ್ವಹಿಸಲು ಸದಸ್ಯರನ್ನು ನಿಯೋಜಿಸಲಾಗಿದೆ. ಇಸ್ಲಾಮಿಕ್ ನಿಯಮಗಳು ಮತ್ತು ಭಾರತೀಯ ಸಂವಿಧಾನವನ್ನು ಅನುಸರಿಸುವಾಗ ಉಪ-ಕಾನೂನುಗಳನ್ನು ಶ್ರೀ ದಿವಂಗತ ಮೀರ್ ಮುಸ್ತಾಕ್ ಅಲಿ ಬರೆದಿದ್ದಾರೆ ಮತ್ತು ಅವು ಅಲಿಪುರದ ಕಾರ್ಯನಿರ್ವಹಣೆಗೆ ಮಾರ್ಗದರ್ಶಿ ತತ್ವಗಳಾಗಿ ಕಾರ್ಯನಿರ್ವಹಿಸುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...