Homeಮುಖಪುಟಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

- Advertisement -
- Advertisement -

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ.

ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡ ವಿಭಾಗೀಯ ಪೀಠವು, ಇದು ಕತ್ತು ಹಿಸುಕಿದ ಪರಿಣಾಮ ಸಂಭವಿಸಿದ ಕೊಲೆಯಾಗಿದೆಯೇ ಹೊರತು, ಆರೋಪಿಗಳು ಪ್ರತಿಪಾದಿಸಿದಂತೆ ಆತ್ಮಹತ್ಯೆಯ ಪ್ರಕರಣವಲ್ಲ ಎಂದು ತೀರ್ಪು ನೀಡಿದೆ.

ನ್ಯಾಯಾಲಯವು ಈ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಗಮನಿಸಿದ್ದು, ಬಾಡಿಗೆದಾರ ಪ್ರದೀಪ್ ಕುಮಾರ್ ಮತ್ತು 15 ವರ್ಷದ ಬಾಲಕಿಯ ಹತ್ಯೆಯು ಆಕೆ ಗರ್ಭಿಣಿಯಾಗಿರುವ ವಿಷಯ ಪೋಷಕರಿಗೆ ತಿಳಿದ ತಕ್ಷಣವೇ ನಡೆದಿದೆ ಎಂದು ಅಭಿಪ್ರಾಯಪಟ್ಟಿದೆ.

ಆಗಸ್ಟ್ 20, 2014ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ, 28 ವರ್ಷದ ಶಿಕ್ಷಕ ಪ್ರದೀಪ್ ಕುಮಾರ್, ಅಪರಾಧಿಗಳಾದ ಮುಖೇಶ್ ಗುಪ್ತಾ ಮತ್ತು ಅವರ ಪತ್ನಿ ಸೀಮಾ ಗುಪ್ತಾ ಮನೆಯಲ್ಲಿ ಬಾಡಿಗೆದಾರರಾಗಿದ್ದರು.

ದಂಪತಿಯ 15 ವರ್ಷದ ಮಗಳು ಮತ್ತು ಪ್ರದೀಪ್ ಕುಮಾರ್ ನಡುವೆ ಇದ್ದ ದೈಹಿಕ ಸಂಬಂಧದಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಕಾರಣಕ್ಕೆ ದಂಪತಿ ಅವರಿಬ್ಬರನ್ನೂ ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಾಸಿಕ್ಯೂಷನ್ ಇದನ್ನು ಸ್ಪಷ್ಟವಾಗಿ ‘ಮರ್ಯಾದೆಗೇಡು ಹತ್ಯೆ’ ಪ್ರಕರಣ ಎಂದು ಹೇಳಿತ್ತು.

ಫೆಬ್ರವರಿ 2020ರಲ್ಲಿ ದಂಪತಿ ತಪ್ಪಿತಸ್ಥರೆಂದು ಸಾಬೀತಾಗಿ ವಿಚಾರಣಾ ನ್ಯಾಯಾಲಯ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ, ಆರೋಪಿಗಳ ಅವಿವಾಹಿತ ಮಗಳು ಗರ್ಭಿಣಿಯಾಗಿದ್ದಳು ಎಂಬ ಅಂಶವು ಸಾಬೀತಾಗಿದೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಅಲ್ಲದೆ, ಪ್ರದೀಪ್ ಕುಮಾರ್ ತಮ್ಮ ಮಗಳೊಂದಿಗೆ ಸಂಬಂಧ ಹೊಂದಿದ್ದ ಎಂಬ ಬಗ್ಗೆ ಗುಪ್ತಾ ದಂಪತಿಗೆ ಖಚಿತವಾಗಿ ತಿಳಿದಿತ್ತು ಎಂಬ ಅಂಶವನ್ನೂ ನ್ಯಾಯಾಲಯವು ಪತ್ತೆಹಚ್ಚಿದೆ.

ಈ ವಿಷಯವು (ಮಗಳ ಗರ್ಭಧಾರಣೆ) ಪೋಷಕರಿಗೆ ತೀವ್ರ ಆಘಾತವನ್ನುಂಟು ಮಾಡಿತ್ತು ಎಂದ ನ್ಯಾಯಾಲಯ, ದಂಪತಿಗೆ ದುಷ್ಕೃತ್ಯ ಎಸಗಲು ಸ್ಪಷ್ಟವಾದ ಉದ್ದೇಶವಿತ್ತು ಎಂದು ಹೇಳಿದೆ.

Courtesy : barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...