Homeದಲಿತ್ ಫೈಲ್ಸ್ರಾಜಸ್ಥಾನ| 'ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..'; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

- Advertisement -
- Advertisement -

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ – ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.

ಫೆಬ್ರವರಿ 27 ರಂದು ಚುರುವಿನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, 30 ವರ್ಷದ ಮೀನಾ ಮೇಘವಾಲ್, ಪ್ರೊಫೆಸರ್ ಅಪೂರ್ವ ಶರ್ಮಾ ಮತ್ತು ಪ್ರೊಫೆಸರ್ ಅನಿಲ್ ಅವರು ಅವಹೇಳನಕಾರಿ ಜಾತಿ ಹೇಳಿಕೆಗಳನ್ನು ಬಳಸಿ, ತನ್ನನ್ನು ಅನುತ್ತೀರ್ಣಗೊಳಿಸುವ ಬೆದರಿಕೆ ಹಾಕಿ, ಉದ್ದೇಶಪೂರ್ವಕವಾಗಿ ಕಡಿಮೆ ಅಂಕಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಚುರು ಸರ್ಕಲ್‌ ಆರ್‌ಪಿಎಸ್ ಸುನೀಲ್ ಕುಮಾರ್ ಜಜಾರಿಯಾ ಅವರಿಗೆ ರವಾನಿಸಲಾಗಿದೆ.

ಕಾಲೇಜು ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಜಾತಿ ನಿಂದನೆ ಆರೋಪ

ಜುನ್ಜುನು ಜಿಲ್ಲೆಯ ಖಾರಿಯಾ ಗ್ರಾಮದ ನಿವಾಸಿ ಮತ್ತು ತೋರುರಾಮ್ ಮೇಘವಾಲ್ ಅವರ ಪುತ್ರಿ ಮೀನಾ ಮೇಘವಾಲ್ ಅವರು ತಮ್ಮ ಲಿಖಿತ ದೂರಿನಲ್ಲಿ, ಈ ಘಟನೆ ಮೊದಲು ಡಿಸೆಂಬರ್ 2025 ರಲ್ಲಿ ನಡೆದ ಕಾಲೇಜು ಕಾರ್ಯಕ್ರಮದಲ್ಲಿ ನಡೆದಿತ್ತು ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಸಮಯದಲ್ಲಿ, ಪ್ರಶ್ನೆ ಕೇಳಿದಾಗ ಪ್ರೊಫೆಸರ್ ಅಪೂರ್ವ ಶರ್ಮಾ ಕೋಪಗೊಂಡರು ಎಂದು ಅವರು ಹೇಳಿದರು. ದೂರಿನ ಪ್ರಕಾರ, ಪ್ರೊಫೆಸರ್ ಇತರ ವಿದ್ಯಾರ್ಥಿಗಳ ಮುಂದೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ನೀವು ಚಾಮರಿ, ನೀವು ಕೆಳಜಾತಿಯವರು. ನೀವು ಎಲ್ಎಲ್ ಬಿ ಮಾಡಲು ಸಾಧ್ಯವಿಲ್ಲ. ಅದು ನಿಮ್ಮ ಕೆಲಸವಲ್ಲ” ಎಂದು ಪ್ರಾಧ್ಯಾಪಕರು ಹೇಳಿದರು, ತನ್ನನ್ನು ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ಅವರು ಹೇಳಿಕೊಂಡಿದ್ದಾರೆ.

ಆ ಸಮಯದಲ್ಲಿ ಆಕಾಶ್ ದೀಪ್, ಆಕಾಶ್ ಮಿಶ್ರಾ, ಹಿಮಾಂಶು ಮತ್ತು ಪ್ರೇಮ್ ಪ್ರಕಾಶ್ ಸೇರಿದಂತೆ ಹಲವಾರು ಸಹಪಾಠಿಗಳು ಸ್ಥಳದಲ್ಲಿದ್ದರು ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ

ಡಿಸೆಂಬರ್‌ನಲ್ಲಿ ಘಟನೆ ನಡೆದ ನಂತರ, ಪ್ರೊಫೆಸರ್ ತನ್ನನ್ನು ಅವಮಾನಿಸುವುದನ್ನು ಮುಂದುವರೆಸಿದರು ಎಂದು ಮೀನಾ ಮೇಘವಾಲ್ ಆರೋಪಿಸಿದ್ದಾರೆ. ಪ್ರಾಯೋಗಿಕ ಪರೀಕ್ಷೆಯಲ್ಲಿ ತನಗೆ 20 ರಲ್ಲಿ 6 ಅಂಕಗಳನ್ನು ಮಾತ್ರ ನೀಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಆದರೆ ಇತರ ವಿಷಯಗಳಲ್ಲಿ, ವಿವಿಧ ಪ್ರಾಧ್ಯಾಪಕರು 12 ರಿಂದ 13 ಅಂಕಗಳನ್ನು ನೀಡಿದ್ದಾರೆ ಎಂದು ಅವರು ದೂರಿನಲ್ಲಿ ವಿರಿಸಿದ್ದಾರೆ.

ಫೆಬ್ರವರಿ 21 ರಂದು, ಕಡಿಮೆ ಅಂಕಗಳಿಗೆ ಕಾರಣ ಕೇಳಿದಾಗ, ಪ್ರೊಫೆಸರ್ ಅಪೂರ್ವ ಶರ್ಮಾ “ಇದು ನನ್ನ ಆಸೆ, ನಾನು ಅದನ್ನು ಮಾಡಿದ್ದೇನೆ. ನೀವು ಕೆಳಜಾತಿಯವರು” ಎಂದು ಹೇಳಿದ್ದರು ಎಂದು ಅವರು ಆರೋಪಿಸಿದ್ದಾರೆ.

ಕಾಲೇಜು ಆಡಳಿತಕ್ಕೆ ಲಿಖಿತ ದೂರು ಸಲ್ಲಿಸಿದ್ದೇನೆ. ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...