Homeಕರ್ನಾಟಕ'ಪಿಟಿಸಿಎಲ್‌ ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

- Advertisement -
- Advertisement -

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಭೂಮಿ ವಂಚಿತ ಕುಟುಂಬಗಳ ಬದುಕಿನ ಜೊತೆ ಆಟ ಆಡುತ್ತಾ, ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡುತ್ತಿರುವ ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಲಯಗಳ ವಿರುದ್ಧ ಹಾಗೂ ಇಷ್ಟೆಲ್ಲಾ ಅನ್ಯಾಯ ಆಗುತ್ತಿದ್ದರೂ, ಸಮಸ್ಯೆ ಸರಿಪಡಿಸದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಸರ್ಕಾರ ಕಣ್ಣು ಮುಚ್ಚಿಕೊಂಡು ನಾಟಕ ಮಾಡುತ್ತಿದೆ” ಎಂದು ಹೋರಾಟಗಾರರು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 3 ವರ್ಷವಾದರೂ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಅದ್ದರಿಂದ, ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿ, 10 ದಿನಗಳ ಕಾಲ ಅವಕಾಶ ಕೊಟ್ಟು ನಮ್ಮ ಬದುಕಿಗೋಸ್ಕರ ಹಾಗೂ ನಮ್ಮ ಭೂಮಿಗೋಸ್ಕರ ನಾವು ಮತ್ತೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲೇಬೇಕಾದ ಅನಿವಾರ್ಯತೆ ಇದೆ. ರಾಜ್ಯದ ಎಲ್ಲ ಭೂಮಿ ಕಳೆದುಕೊಂಡ ಬಾಧಿತರು ಮತ್ತು ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ ಧರಣಿಗೆ ತೀರ್ಮಾನಿಸಲಾಗಿದೆ” ಎಂದು ಘೋಷಿಸಿದರು.

ಪ್ರಮುಖ ಬೇಡಿಕೆಗಳು

1) ಸರ್ಕಾರದ ಪಿಟಿಸಿಎಲ್‌ ತಿದ್ದುಪಡಿ ವಿರುದ್ದ ಸರ್ವಾಧಿಕಾರಿಗಳೆಂತೆ ವರ್ತಿಸುತ್ತಿರುವ ಕಂದಾಯ ಇಲಾಖೆಯ ಎಸಿ, ಡಿಸಿ ಹಾಗೂ ಸಂವಿಧಾನ ಆಶಯಗಳನ್ನು ರಕ್ಷಿಸಬೇಕಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಲಯಗಳಲ್ಲಿಯೂ ಸಹ ಆಗುತ್ತಿರುವ ಅನ್ಯಾಯವನ್ನು ಕಂಡಿಸುತ್ತೇವೆ, ಕಾಲಮಿತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.

2) 2023 ತಿದ್ದುಪಡಿಯಲ್ಲಿ ಸೇರಿಸಿರುವ ಕಲಂ 5(1)ಡಿ ತೆಗೆಯಬೇಕು

3) ಪಿಟಿಸಿಎಲ್‌ ಕಾಯ್ದೆ ಕಲಂ 3(1) ಬಿ ಅಡಿಯಲ್ಲಿ ಬರುವ ಭೂಮಿಗಳಾದ ಎಲ್ಲ ರೀತಿಯ ಇನಾಂ ಭೂಮಿಗಳು (ತೋಟಿ ನೌಕರ ಇನಾಂ, ನಿರಗಂಟಿ,ತಳವಾರಿ, ಕುಲವಾಡಿಕೆ) ಕಿಮ್ಮತ್ತು, ಜಿ ಎಂ ಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಆಗಿರುವ ಮಂಜೂರು, ಪ್ರತಿಕೂಲ ಸ್ವಾಧೀನ, ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಭೂಮಿಗಳು ಪಿಟಿಸಿಎಲ್‌ ಕಾಯ್ದೆಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಬೇಕು; ಅವಶ್ಯಕತೆ ಇದ್ದರೆ ತಿದ್ದುಪಡಿ ಮಾಡಬೇಕು.

4) 2023 ರ ಪಿಟಿಸಿಎಲ್‌ ತಿದ್ದುಪಡಿ ಕಾಯ್ದೆಯನ್ನು ಸರ್ವನಾಶ ಮಾಡುತ್ತಿರುವ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು; ಸರ್ಕಾರದ ಮಂಜೂರಾತಿಯ ದಾಖಲೆಗಳ ಸಂರಕ್ಷಿಸಲು ಸೂಕ್ತ ಕ್ರಮವಹಿಸಬೇಕು.

5) ಸರ್ಕಾರದ ಪರ ವಾದಿಸುವ ಅಭಿಯೋಜಕರ (ವಕೀಲರ) ಬೇಜವಾಬ್ದಾರಿಯಿಂದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಆಶಯದ ವಿರುದ್ಧ ಹಾಗೂ ಕಾಯ್ದೆಗಳ ವಿರುದ್ದವಾಗಿ ಆದೇಶ ಬರುತ್ತಿದೆ. ಇದಕ್ಕೆ ನೇರ ಕಾರಣವಾದವರನ್ನು ಅಮಾನತುಗೊಳಿಸಬೇಕು.

6) ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯೇ ನೇರ ಹೊಣೆ. ಅದ್ದರಿಂದ ಇಲಾಖೆ ವತಿಯಿಂದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ, ಮೇಲುಸ್ತುವಾರಿ ನೋಡಿಕೊಂಡು ನ್ಯಾಯ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...