Homeಕರ್ನಾಟಕಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ ಸೂಫಿ ಸಂತರ ಸಮಾಧಿ ಮೇಲೆ ಹಸಿರು ಬಟ್ಟೆ ಹೊದಿಸುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಮತ್ತು ಉರೂಸಿನ ಪ್ರಮುಖ ಭಾಗವೂ ಹೌದು. ಆದರೆ, ಜಿಲ್ಲಾಡಳಿತ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಗೌಸ್ ಮುಈನುದ್ದೀನ್ ಆರೋಪಿಸಿದ್ದಾರೆ.

ಸಮಾಧಿ ಮೇಲೆ ಹಸಿರು ಬಟ್ಟೆ ಹೊದಿಸಲು ಅವಕಾಶ ನೀಡುವ ಕುರಿತು ಮಾಧುಸ್ವಾಮಿ ವರದಿಯಲ್ಲೂ ಉಲ್ಲೇಖಿಸಲಾಗಿದೆ. ವರದಿಯನ್ನು ಸರ್ಕಾರ ಒಪ್ಪಿಕೊಂಡಿರುವ ಕಾರಣ, ಇದು ಕಾನೂನಾತ್ಮಕ ಅವಕಾಶವಾಗಿದೆ. ಆದರೆ, ಜಿಲ್ಲಾಡಳಿತ ಉರೂಸ್ ಸಂದರ್ಭದಲ್ಲಿ ಹಸಿರು ಬಟ್ಟೆ ಹೊದಿಸಲು ಬಿಟ್ಟಿಲ್ಲ. ಅಧಿಕಾರಿಗಳು ಅವರಿಗೆ ಇಷ್ಟ ಬಂದಂತೆ ಉರೂಸ್ ನಡೆಸಿದ್ದಾರೆ. ಹಸಿರು ಬಟ್ಟೆ ಹೊದಿಸಲು ಅವಕಾಶ ನೀಡದ ಹಿನ್ನೆಲೆ, ಮುಜಾವರ್ ಉರೂಸ್ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂದು ಮುಈನುದ್ದೀನ್ ವಿವರಿಸಿದ್ದಾರೆ.

ದತ್ತ ಜಯಂತಿ ಸಂದರ್ಭದಲ್ಲಿ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡುತ್ತದೆ. ಯಾವ ರೀತಿ ಬೇಕೋ ಆ ರೀತಿ ಜಯಂತಿ ಆಚರಿಸಲು ಅವಕಾಶ ನೀಡುತ್ತದೆ. ಉರೂಸ್ ಸಂದರ್ಭದಲ್ಲಿ ಮಾತ್ರ ಕನಿಷ್ಠ ಹಸಿರು ಬಟ್ಟೆ ಹೊದಿಸಲೂ ಅವಕಾಶ ನೀಡುತ್ತಿಲ್ಲ. ಇದು ಜಿಲ್ಲಾಡಳಿತದ ದ್ವಿಮುಖ ನೀತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಈ ರೀತಿ ಜಾತ್ಯಾತೀತ ಅವಕಾಶಗಳನ್ನು ನಿರಾಕರಿಸುತ್ತಿರುವುದು ಬೇಸರದ ಸಂಗತಿ ಎಂದು ಮುಈನುದ್ದೀನ್ ಹೇಳಿದ್ದಾರೆ.

ನಮಗೆ ಇಲ್ಲಿ ಉರೂಸ್ ಅಥವಾ ದತ್ತ ಜಯಂತಿ ಮುಖ್ಯವಲ್ಲ. ಜಿಲ್ಲಾಡಳಿತದ ದ್ವಿಮುಖ ಮತ್ತು ಏಕಪಕ್ಷೀಯ ಧೋರಣೆಯನ್ನು ನಾವು ಖಂಡಿಸುತ್ತೇವೆ. ಒಂದು ಸಮುದಾಯದವರ ಧಾರ್ಮಿಕ ಆಚರಣೆಗಳಿಗೆ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿಕೊಡುವ ಆಡಳಿತ, ಇನ್ನೊಂದು ಸಮುದಾಯದ ಕನಿಷ್ಠ ಆಚರಣೆಗಳಿಗೆ ಅವಕಾಶ ನೀಡುತ್ತಿಲ್ಲ. ಇದು ಸಂವಿಧಾನದ ತತ್ವಗಳು ಮತ್ತು ಸರ್ಕಾರವೇ ಒಪ್ಪಿಕೊಂಡ ಮಾಧುಸ್ವಾಮಿ ವರದಿಯ ಶಿಫಾರಸುಗಳಿಗೆ ವಿರುದ್ದವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಈ ದ್ವಿಮುಖ ನೀತಿ ಖಂಡಿಸಿ ಗುರುವಾರ ಚಿಕ್ಕಮಗಳೂರಿನ ಆಝಾದ್ ವೃತ್ತ ಮತ್ತು ಬಾಬಾ ಬುಡನ್‌ಗಿರಿಯಲ್ಲಿ ಎದ್ದೇಳು ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಗೌಸ್ ಮುಈನುದ್ದೀನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...