Homeಮುಖಪುಟಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

- Advertisement -
- Advertisement -

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಮತ್ತು ನ್ಯಾಯಮೂರ್ತಿ ವಿಕ್ರಮ್ ಅಗರ್ವಾಲ್ ಅವರಿದ್ದ ನ್ಯಾಯಪೀಠವು ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಗಳ ಕುರಿತು ತೀರ್ಪು ಪ್ರಕಟಿಸಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಇತರ ಮೂವರು ಅಪರಾಧಿಗಳಾದ ಕುಲದೀಪ್, ನಿರ್ಮಲ್ ಮತ್ತು ಕ್ರಿಶನ್ ಲಾಲ್ ಅವರ ಅಪರಾಧ ಮತ್ತು ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ನ್ಯಾಯಾಲಯವು ಈ ಹಿಂದೆ ಈ ಪ್ರಕರಣದಲ್ಲಿ ರಾಮ್ ರಹೀಂ ಸಿಂಗ್ ಸೇರಿದಂತೆ ಎಲ್ಲರನ್ನೂ ಅಪರಾಧಿಗಳು ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

2002ರಲ್ಲಿ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಮತ್ತು ಇತರ ಮೂವರು ತಪ್ಪಿತಸ್ಥರು ಎಂದು ಸಿಬಿಐ ನ್ಯಾಯಾಲಯ 2019ರಲ್ಲಿ ತೀರ್ಪು ನೀಡಿತ್ತು.

ವಿಶೇಷ ಸಿಬಿಐ ನ್ಯಾಯಾಧೀಶ ಜಗದೀಪ್ ಸಿಂಗ್ ಅವರು ನಾಲ್ವರನ್ನು ತಪ್ಪಿತಸ್ಥರು ಎಂದು ಘೋಷಿಸಿದ್ದರು.

2002ರ ಅಕ್ಟೋಬರ್‌ನಲ್ಲಿ, ಸಿರ್ಸಾದಲ್ಲಿರುವ ಡೇರಾ ಪ್ರಧಾನ ಕಚೇರಿಯಲ್ಲಿ ಗುರ್ಮೀತ್ ರಾಮ್ ರಹೀಂ ಸಿಂಗ್ ಮಹಿಳೆಯರನ್ನು ಹೇಗೆ ಲೈಂಗಿಕವಾಗಿ ಶೋಷಿಸುತ್ತಿದ್ದಾನೆಂದು ವಿವರಿಸುವ ಅನಾಮಧೇಯ ಪತ್ರವನ್ನು ಛತ್ರಪತಿ ಅವರ ‘ಪೂರಾ ಸಚ್’ ಪತ್ರಿಕೆ ಪ್ರಕಟಿಸಿದ ನಂತರ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.

2003ರಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ನಂತರ 2006ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.

ಈ ಪ್ರಕರಣದಲ್ಲಿ ರಾಮ್ ರಹೀಂ ಅನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಲಾಗಿತ್ತು. ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಪ್ರಸ್ತುತ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. 2024ರಲ್ಲಿ, ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಈತನನ್ನು ಖುಲಾಸೆಗೊಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...