Homeಮುಖಪುಟ'ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ' : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

- Advertisement -
- Advertisement -

‘ಅಂತಾರಾಷ್ಟ್ರೀಯ ಸಂತಾಲ್’ ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನ’ಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಮಾ.7) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಉತ್ತರ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಮೊದಲು ಅನುಮತಿ ನಿರಾಕರಿಸಿತ್ತು ಎಂದು ರಾಷ್ಟ್ರಪತಿ ಆರೋಪಿಸಿದ್ದರು.

ಕೊನೆಯ ಕ್ಷಣದಲ್ಲಿ ಸಮ್ಮೇಳನವನ್ನು ಡಾರ್ಜಿಲಿಂಗ್ ಜಿಲ್ಲೆಯ ಬಿಧಾನನಗರದಿಂದ ಸಿಲಿಗುರಿ ಹೊರವಲಯದ ಗೋಸೈನ್‌ಪುರಕ್ಕೆ ವರ್ಗಾಯಿಸಲಾಗಿದೆ ಎಂದಿದ್ದರು. ಅಲ್ಲದೆ, ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದಾಗ ಸಿಎಂ ಮಮತಾ ಬ್ಯಾನರ್ಜಿ ಅಥವಾ ಯಾವುದೇ ಹಿರಿಯ ಸಚಿವರು ಅವರನ್ನು ಸ್ವಾಗತಿಸಲು ಬರದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಬೆಟ್ಟು ಮಾಡಿದ್ದರು.

ಬಂಗಾಳದಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಸರಿಯಾಗಿ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದರು.

ದಾಖಲೆ ಸಹಿತ ಮಮತಾ ತಿರುಗೇಟು

ರಾಷ್ಟ್ರಪತಿಯ ಗಂಭೀರ ಆರೋಪಗಳಿಗೆ ಸಿಎಂ ಮಮತಾ ಬ್ಯಾನರ್ಜಿ ದಾಖಲೆ ಸಹಿತ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ರಾಷ್ಟ್ರಪತಿಯ ಕಾರ್ಯಾಲಯ ಅನುಮೋದಿಸಿದ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಚಿವರು ಹಾಜರಿರಬೇಕೆಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ ಮತ್ತು ಈ ಕಾರ್ಯಕ್ರಮವನ್ನು ಖಾಸಗಿ ಸಂಸ್ಥೆಯೊಂದು ಆಯೋಜಿಸಿತ್ತು ಎಂದು ಹೇಳಿದ್ದಾರೆ. ಅಲ್ಲದೆ, ಬಿಧಾನನಗರವು ಕಾರ್ಯಕ್ರಮದ ಆರಂಭಿಕ ಸ್ಥಳವಾಗಿತ್ತು ಎಂಬ ಬಗ್ಗೆ ಯಾವುದೇ ದಾಖಲೆಗಳಲ್ಲಿ ಉಲ್ಲೇಖವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮವು ಮೊದಲಿನಿಂದಲೂ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು ಎಂದು ಅವರು ಹೇಳಿದ್ದಾರೆ. ರಾಷ್ಟ್ರಪತಿ ಭವನಕ್ಕೆ ನೀಡಲಾದ ಮೂಲ ದಾಖಲೆಗಳಲ್ಲಿಯೂ ಇದೇ ಸ್ಥಳದ ಉಲ್ಲೇಖವಿದೆಯೇ ಹೊರತು ಬಿಧಾನನಗರದ್ದಲ್ಲ ಎಂದು ಅವರು ವಾದಿಸಿದ್ದಾರೆ.

ಸಿಲಿಗುರಿ ಜಿಲ್ಲಾಡಳಿತವು ಕಾರ್ಯಕ್ರಮದ ಸ್ಥಳದಲ್ಲಿ ವ್ಯವಸ್ಥೆಗಳ ಕೊರತೆಯಿರುವ ಬಗ್ಗೆ ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಮುಂಚಿತವಾಗಿಯೇ ಮಾಹಿತಿ ನೀಡಿತ್ತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ಹಂಚಿಕೊಂಡ ದಾಖಲೆಗಳ ಪ್ರಕಾರ, ಕಾರ್ಯಕ್ರಮ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು. ರಾಷ್ಟ್ರಪತಿ ಭೇಟಿಗೆ ಎರಡು ದಿನಗಳ ಮೊದಲು ತೆಗೆಯಲಾದ ಫೋಟೋಗಳನ್ನು ಸಿಎಂ ಬಿಡುಗಡೆ ಮಾಡಿದ್ದು, ಅವುಗಳಲ್ಲಿ ಸಾರ್ವಜನಿಕ ಸಮಾರಂಭಕ್ಕೆ ಅಗತ್ಯವಿರುವ ಯಾವುದೇ ಸೌಲಭ್ಯಗಳಿಲ್ಲದ ಬಂಜರು ಮೈದಾನವನ್ನು ಕಾಣಬಹುದು.

ಖಾಸಗಿ ಸಂಸ್ಥೆಯಾದ ಅಂತಾರಾಷ್ಟ್ರೀಯ ಸಂತಾಲ್ ಕೌನ್ಸಿಲ್, ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿಯಲ್ಲಿ ಆಯೋಜಿಸಿದ್ದ 9ನೇ ಅಂತಾರಾಷ್ಟ್ರೀಯ ಆದಿವಾಸಿ ಸಂತಾಲ್ ಸಮ್ಮೇಳನಕ್ಕೆ ಆಹ್ವಾನಿಸಿತ್ತು. ಮುಂಗಡ ಭದ್ರತಾ ಸಂಪರ್ಕದ ನಂತರ, ಸಂಘಟಕರು ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಜಿಲ್ಲಾಡಳಿತವು ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಲಿಖಿತವಾಗಿ ಮಾಹಿತಿ ನೀಡಿತ್ತು; ಈ ವಿಷಯವನ್ನು ದೂರವಾಣಿ ಮೂಲಕವೂ ತಿಳಿಸಲಾಗಿತ್ತು. ರಾಷ್ಟ್ರಪತಿಯ ಸಚಿವಾಲಯದ ಮುಂಗಡ ತಂಡವು ದಿನಾಂಕ 05.03.26 ರಂದು ಭೇಟಿ ನೀಡಿದಾಗಲೂ ವ್ಯವಸ್ಥೆಗಳ ಕೊರತೆಯ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿತ್ತು, ಆದರೂ ಕಾರ್ಯಕ್ರಮವು ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರಿಯಿತು” ಎಂದು ಸಿಎಂ ಮಮತಾ ಬ್ಯಾನರ್ಜಿ ಎಕ್ಸ್‌ ಹಾಗೂ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರಪತಿಯವರ ತಂಡವು ಮೊದಲೇ ಅನುಮೋದಿಸಿದ ಪಟ್ಟಿಯಂತೆಯೇ ಸಿಲಿಗುರಿ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ರಾಷ್ಟ್ರಪತಿ ಮುರ್ಮು ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರಪತಿಯ ಸಚಿವಾಲಯ ಹಂಚಿಕೊಂಡಿದ್ದ ಅನುಮೋದಿತ ಪಟ್ಟಿಯ ಪ್ರಕಾರವೇ ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿ ಮಹಾನಗರ ಪಾಲಿಕೆಯ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ಸ್ವಾಗತಿಸಿ, ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿದ್ದಾರೆ. ಈ ಪಟ್ಟಿಯಲ್ಲಾಗಲಿ ಅಥವಾ ವೇದಿಕೆಯ ಕಾರ್ಯಕ್ರಮದಲ್ಲಾಗಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯವರ ಹೆಸರು ಇರಲಿಲ್ಲ. ಆದ್ದರಿಂದ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಶಿಷ್ಟಾಚಾರದ ಉಲ್ಲಂಘನೆಯಾಗಿಲ್ಲ ಎಂದು ಮಮತಾ ಬ್ಯಾನರ್ಜಿ ತಮ್ಮ ಪೋಸ್ಟ್‌ನಲ್ಲಿ ವಿವರಿಸಿದ್ದಾರೆ.

ಬಿಜೆಪಿಯು ‘ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತನ್ನ ಪಕ್ಷದ ಕಾರ್ಯಸೂಚಿಗಾಗಿ ಅಗೌರವಗೊಳಿಸುತ್ತಿದೆ ಮತ್ತು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದು, ‘ಇದು ಅತ್ಯಂತ ದುರದೃಷ್ಟಕರ’ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಮಾಡಿರುವ ಆರೋಪಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪಶ್ಚಿ ಬಂಗಾಳ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. “ಬಂಗಾಳ ಸರ್ಕಾರ ರಾಷ್ಟ್ರಪತಿಗೆ ಅವಮಾನ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡು, ಇದು ಹಿಂದೆಂದೂ ನಡೆಯದ ಘಟನೆ ಎಂದು ಹೇಳಿದ್ದರು.

ಪ್ರಧಾನಿಯವರು ಹೀಗೆ ಹೇಳಿದ ಕೂಡಲೇ ವಿವಾದ ದೊಡ್ಡದಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ರಾಷ್ಟ್ರಪತಿ ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ, ಅವರು ಬಿಜೆಪಿಯ ಪರವಾಗಿ (ಬಿಜೆಪಿ ಹೇಳಿದಂತೆ) ನಡೆದುಕೊಳ್ಳುತ್ತಿದ್ದಾರೆ” ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ರಾಷ್ಟ್ರಪತಿಯನ್ನು ಬಳಸಿಕೊಂಡು ಬಿಜೆಪಿಯ ಸಲಹೆಯಂತೆ ರಾಜಕೀಯ ಮಾಡಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಲ್ಕತ್ತಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದನ್ನು ಹೇಳಲು ನನಗೆ ನಾಚಿಕೆಯಾಗುತ್ತಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಮೇಲೆ ನಮಗೆ ಅಪಾರ ಗೌರವವಿದೆ. ಆದರೆ, ಅವರನ್ನು ಇಲ್ಲಿಗೆ ಕೇವಲ ರಾಜಕೀಯ ಮಾಡಲು ಕಳುಹಿಸಲಾಗಿದೆ ಎಂದು ದೂರಿದ್ದಾರೆ.

“ಕ್ಷಮಿಸಿ ಮೇಡಂ, ನಿಮ್ಮ ಬಗ್ಗೆ ನನಗೆ ಬಹಳ ಗೌರವವಿದೆ. ಆದರೆ ನೀವು ಈಗ ಸಂಪೂರ್ಣವಾಗಿ ಬಿಜೆಪಿಯ ನೀತಿಗಳು ಮತ್ತು ಅವರ ಸೂಚನೆಗಳಂತೆ ನಡೆಯುತ್ತಿದ್ದೀರಿ” ಎಂದು ಮಮತಾ ನೇರವಾಗಿ ರಾಷ್ಟ್ರಪತಿಗೆ ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದನ್ನು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ನೀವು ವರ್ಷಕ್ಕೊಮ್ಮೆ ಬಂದರೆ ನಾನು ನಿಮ್ಮನ್ನು ಸ್ವಾಗತಿಸಬಹುದು. ಆದರೆ, ಚುನಾವಣೆ ಇರುವಾಗ ನೀವು ಪದೇ ಪದೇ ಬರುತ್ತಿದ್ದರೆ, ನಮಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಲು ಹೇಗೆ ಸಾಧ್ಯ? ನಾವು ಯಾವಾಗಲೂ ನಿಮ್ಮನ್ನೇ ಹಿಂಬಾಲಿಸಿಕೊಂಡಿರಬೇಕೇ?” ಎಂದು ಮಮತಾ ಪ್ರಶ್ನಿಸಿದ್ದಾರೆ.

“ಗಾಳಿಪಟ ಹಾರಿಸುವವನು ದಾರ ಹಿಡಿದು ಓಡುವಂತೆ ನಾವು ಸದಾ ನಿಮ್ಮ ಹಿಂದೆ ಓಡಬೇಕೇ? ಗಾಳಿಪಟವನ್ನು ವರ್ಷಕ್ಕೆ ಒಮ್ಮೆ ವಿಶ್ವಕರ್ಮ ಪೂಜೆಯ ಸಮಯದಲ್ಲಿ ಹಾರಿಸಲಾಗುತ್ತದೆ (ಆದರೆ ನೀವು ಯಾವಾಗಲೂ ಬರುತ್ತಿದ್ದೀರಿ)” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...