Homeಮುಖಪುಟರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ.

ರಾಷ್ಟ್ರಪತಿ ಭೇಟಿಯ ವೇಳೆ ಪಶ್ಚಿಮ ಬಂಗಾಳ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಕೇಂದ್ರ ಸರ್ಕಾರ, ಭಾನುವಾರ (ಮಾ.8) ಸಂಜೆ 5 ಗಂಟೆಯೊಳಗೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಕೇಂದ್ರ ಗೃಹ ಕಾರ್ಯದರ್ಶಿಯವರು ‘ಬ್ಲೂ ಬುಕ್’ ನಿಯಮಗಳ ಶಿಷ್ಟಾಚಾರ, ಸ್ಥಳ ಮತ್ತು ಮಾರ್ಗ ವ್ಯವಸ್ಥೆಗಳ ಉಲ್ಲಂಘನೆಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಬ್ಲೂ ಬುಕ್’ ಎಂಬುವುದು ಒಂದು ಗೌಪ್ಯ ದಾಖಲೆಯಾಗಿದ್ದು, ಇದು ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಹಾಗೂ ಅವರ ಕುಟುಂಬಗಳಿಗೆ ಭದ್ರತೆ, ಶಿಷ್ಟಾಚಾರದ ನಿಯಮಗಳನ್ನು ವಿವರಿಸುತ್ತದೆ.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ ಪತ್ರದಲ್ಲಿ, ರಾಷ್ಟ್ರಪತಿ ರಾಜ್ಯಕ್ಕೆ ಆಗಮಿಸಿದಾಗ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಇಲ್ಲದಿರುವುದು ಬ್ಲೂ ಬುಕ್ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ಕೋರಿದೆ ಎಂದು ವರದಿ ಹೇಳಿದೆ.

ರಾಷ್ಟ್ರಪತಿಯನ್ನು ಸ್ವಾಗತಿಸಲು ಸಿಲಿಗುರಿ ಮೇಯರ್ ಮಾತ್ರ ಹಾಜರಿದ್ದರು ಎಂಬುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಮೂಲಗಳ ಪ್ರಕಾರ, ರಾಷ್ಟ್ರಪತಿಗಾಗಿ ಸ್ಥಾಪಿಸಲಾಗಿದ್ದ ಶೌಚಾಲಯದಲ್ಲಿ ನೀರು ಇರಲಿಲ್ಲ, ಇದಕ್ಕಾಗಿ ರಾಜ್ಯ ಸರ್ಕಾರದಿಂದ ವಿವರಣೆ ಕೇಳಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ರಾಷ್ಟ್ರಪತಿಯನ್ನು ಕರೆದೊಯ್ಯಲು ಆಡಳಿತವು ಆಯ್ಕೆ ಮಾಡಿದ ಮಾರ್ಗವು ಕಸದಿಂದ ತುಂಬಿರುವುದಕ್ಕೆ ಕಾರಣವೇನು ಎಂಬುದನ್ನು ವಿವರಿಸಲು ರಾಜ್ಯ ಸರ್ಕಾರವನ್ನು ಕೇಳಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮಾರ್ಚ್ 7ರಂದು ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ ಸಮೀಪದ ಗೋಸೈನ್‌ಪುರದಲ್ಲಿ ನಡೆದ ಆದಿವಾಸಿಗಳ ಅಂತಾರಾಷ್ಟ್ರೀಯ ಸಂತಾಲ್‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಶ್ಚಿಮ ಬಂಗಾಳಕ್ಕೆ ಹೋಗಿದ್ದರು. ಈ ವೇಳೆ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಗಂಭೀರ ಆರೋಪಗಳನ್ನು ಮಾಡಿವೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ಯಾವುದೇ ರಾಜ್ಯ ಸಚಿವರು ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಅಥವಾ ಅವರು ಭಾಗವಹಿಸಿದ್ದ 9ನೇ ಅಂತಾರಾಷ್ಟ್ರೀಯ ಸಾಂತಾಲ್ ಸಮ್ಮೇಳನಕ್ಕೆ ಹಾಜರಾಗದಿರುವುದು ಪ್ರಮುಖ ಆರೋಪವಾಗಿದೆ. ಇದರೊಂದಿಗೆ, ಭದ್ರತಾ ಕಾರಣಗಳನ್ನು ನೀಡಿ ಸಮ್ಮೇಳನದ ಸ್ಥಳವನ್ನು ಕೊನೆಯ ಕ್ಷಣದಲ್ಲಿ ಸಣ್ಣ ಮತ್ತು ಅನಾನುಕೂಲವಾದ ಜಾಗಕ್ಕೆ ಬದಲಾಯಿಸಲಾಗಿದೆ, ಇದರಿಂದಾಗಿ ಅನೇಕ ಬುಡಕಟ್ಟು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಮತ್ತು ಸ್ಥಳದಲ್ಲಿ ಕನಿಷ್ಠ ಸೌಕರ್ಯಗಳಾದ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಾರ್ಗದುದ್ದಕ್ಕೂ ಕಸದ ರಾಶಿ ಇದ್ದ ಬಗ್ಗೆಯೂ ಕೇಂದ್ರ ಗೃಹ ಸಚಿವಾಲಯವು ವರದಿ ಕೇಳಿದೆ. ಈ ಬೆಳವಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು “ಅಪರೂಪ ಮತ್ತು ಅವಮಾನಕರ” ಎಂದು ಖಂಡಿಸಿದ್ದರೆ, ಮಮತಾ ಬ್ಯಾನರ್ಜಿ ಅವರು ಇವುಗಳನ್ನು ರಾಜಕೀಯ ಪ್ರೇರಿತ ಆರೋಪಗಳೆಂದು ತಳ್ಳಿಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...