Homeದಲಿತ್ ಫೈಲ್ಸ್ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

- Advertisement -
- Advertisement -

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

ಇಂಜಿನಿಯರಿಂಗ್ ಪದವೀಧರನಾಗಿರುವ ಪರಿಶಿಷ್ಟ ಜಾತಿಯ ಆರ್. ಆಕಾಶ್ ಡೆಲಿಸನ್ ಮೃತ ಯುವ ಎಂದು ದಿ ಹಿಂದೂ ವರದಿ ಮಾಡಿದೆ.

ವರದಿಯ ಪ್ರಕಾರ, ಎರಡು ದಿನಗಳ ಹಿಂದೆ ಪಿ. ಜಯಕುಮಾರ್ (37) ಮತ್ತು ಆರ್. ಅಳಗರ್ (40) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಮಾನಮದುರೈ ಪೊಲೀಸರು ಆಕಾಶ್ ಮತ್ತು ಆತನ ಪರಿಚಯಸ್ಥ ಗುಣ ಎಂಬುವವರನ್ನು ಬಂಧಿಸಿದ್ದರು.

ಅಳಗರ್ ನೀಡಿದ ದೂರಿನ ಮೇರೆಗೆ ಮಾರ್ಚ್ 6ರಂದು ಮಾನಮದುರೈ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 324(2), 296(b), 118(1), 109(1), ಮತ್ತು 351(3) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆಕಾಶ ಡೆಲಿಸನ್ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ 1985ರ ಮಾದಕ ದ್ರವ್ಯಗಳು ಮತ್ತು ಮನೋತ್ತೇಜಕ ವಸ್ತುಗಳ ಕಾಯ್ದೆ (NDPS Act) ಅಡಿಯಲ್ಲಿ ಮೂರು ಪ್ರಕರಣಗಳು ಮತ್ತು ಒಂದು ಕೊಲೆ ಯತ್ನದ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾಗಿ ದಿ ಹಿಂದೂ ವರದಿ ಉಲ್ಲೇಖಿಸಿದೆ.

ಶಿವಗಂಗಾ ಜಿಲ್ಲಾ ಪೊಲೀಸರು ತಮ್ಮ ಹೇಳಿಕೆಯಲ್ಲಿ, ಅಳಗರ್ ಮತ್ತು ಆಕಾಶ್ ಡೆಲಿಸನ್ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಪರಸ್ಪರ ಪರಿಚಿತರಾಗಿದ್ದರು ಎಂದು ತಿಳಿಸಿದ್ದಾಗಿ ವರದಿ ಹೇಳಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಆಕಾಶ್‌ನನ್ನು ಹುಡುಕಿಕೊಂಡು ಹೋದಾಗ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾರ್ಚ್ 6ರಂದು ಆಕಾಶ್ ಕುಟುಂಬಕ್ಕೆ ಅಧಿಕೃತವಾಗಿ ಬಂಧನದ ಮಾಹಿತಿ ನೀಡಿದ ನಂತರ, ಆತನನ್ನು ಶಿವಗಂಗಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್ 7ರಂದು ಮಾನಮದುರೈ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಸ್ಪತ್ರೆಗೆ ಭೇಟಿ ನೀಡಿ, ಆತನಿಗೆ ಮಾರ್ಚ್ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದರು. ಅಲ್ಲದೆ, ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ (ಜಿಆರ್‌ಹೆಚ್‌) ಕೈದಿಗಳ ವಾರ್ಡ್‌ನಲ್ಲಿ ಇರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆತನನ್ನು ಜಿಆರ್‌ಹೆಚ್‌ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕಾಶ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜಿಆರ್‌ಹೆಚ್‌ ಮೂಲಗಳ ಪ್ರಕಾರ, ಆಕಾಶ್ ದೇಹದ ಹಲವು ಭಾಗಗಳಲ್ಲಿ ಮೂಳೆ ಮುರಿತಗಳಾಗಿದ್ದವು ಮತ್ತು ಸಾವಿಗೆ ‘ಫ್ಯಾಟ್ ಎಂಬೋಲಿಸಂ’ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೂ, ಸಾವಿನ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಲಿದೆ ಎಂದು ದಿ ಹಿಂದೂ ವರದಿ ಉಲ್ಲೇಖಿಸಿದೆ.

ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಆಕಾಶ್‌ನನ್ನು ಅಜ್ಞಾತ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತೀವ್ರವಾಗಿ ಚಿತ್ರಹಿಂಸೆ ನೀಡಿದ್ದಾರೆ. ಆತನ ಕಾಲಿನ ಮೇಲೆ ದೊಡ್ಡ ಕಲ್ಲುಗಳನ್ನು ಹಾಕಿ ಮೂಳೆ ಮುರಿಯುವಂತೆ ಮಾಡಿದ್ದಾರೆ ಎಂದು ಆತನ ತಂದೆ ರಾಜೇಶ್ ಕಣ್ಣನ್ ಆರೋಪಿಸಿದ್ದಾರೆ.

ವಿಚಾರಣೆಯ ನೆಪದಲ್ಲಿ ಪೊಲೀಸರು ಆಕಾಶ್‌ಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಇದು ಆಕಸ್ಮಿಕವಲ್ಲ, ಬದಲಿಗೆ ಪೊಲೀಸ್ ಕಸ್ಟಡಿಯಲ್ಲಿ ನಡೆದ ಕೊಲೆ ಎಂದು ಆರೋಪ ಮಾಡಿದ್ದಾರೆ.

ಆರೋಪ ಅಲ್ಲಗಳೆದ ಪೊಲೀಸರು

ಆಕಾಶ್ ಕುಟುಂಬಸ್ಥರ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕಾಶ್‌ನನ್ನು ಬಂಧಿಸಲು ಹೋದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಕೆಳಕ್ಕೆ ಜಿಗಿದಿದ್ದಾನೆ ಎಂದಿದ್ದಾರೆ.

ಸೇತುವೆಯಿಂದ ಬಿದ್ದ ಕಾರಣ ಕಾಲಿನ ಮೂಳೆ ಮುರಿತದಂತಹ ಗಂಭೀರ ಗಾಯಗಳಾಗಿವೆ ಹೊರತು ಪೊಲೀಸರು ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ತನಿಖೆ

ಪೊಲೀಸ್ ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಯಂತೆ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಅವರಿಗೆ ಸೂಚಿಸಲಾಗಿದೆ.

ಮೃತರ ದೇಹವನ್ನು ಮರಣೋತ್ತರ ಪರೀಕ್ಷೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯ ಪ್ರಕ್ರಿಯೆಗಳಿಗಾಗಿ ಮಧುರೈ ರಾಜಾಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಮ್ಯಾಜಿಸ್ಟ್ರೇಟ್ ಕಾಯುತ್ತಿದ್ದಾರೆ. ಪ್ರಾಥಮಿಕವಾಗಿ ಇದು ‘ಫ್ಯಾಟ್ ಎಂಬೋಲಿಸಂ’ನಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದರೂ, ತನಿಖೆಯ ನಂತರವಷ್ಟೇ ಸತ್ಯಾಂಶ ಹೊರಬರಲಿದೆ.

ತನಿಖೆಯು ಪಾರದರ್ಶಕವಾಗಿರಬೇಕು ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...