Homeಮುಖಪುಟದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ತನ್ನ ಸಹೋದರನ ಮದುವೆಯಲ್ಲಿ ಪಾಲ್ಗೊಳ್ಳಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಇಮಾಮ್ ಅವರಿಗೆ ಜಾಮೀನು ನೀಡಲಾಗಿದೆ ಎಂದು barandbench.com ವರದಿ ಮಾಡಿದೆ.

ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೈ ಅವರು ಮಾರ್ಚ್ 20ರಿಂದ 30ರವರೆಗೆ ಇಮಾಮ್‌ಗೆ ಜಾಮೀನು ನೀಡಿದ್ದಾರೆ.

ಜಾಮೀನಿನ ಮೇಲೆ ಇರುವಾಗ ಇಮಾಮ್ ಮಾಧ್ಯಮಗಳನ್ನು ಸಂಪರ್ಕಿಸಬಾರದು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಬಾರದು. ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಮಾತ್ರ ಸಂವಹನ ನಡೆಸಬೇಕೆಂದು ನ್ಯಾಯಾಲಯವು ಸೂಚಿಸಿದೆ.

“ನ್ಯಾಯವಾದಿಗಳು ಉಲ್ಲೇಖಿಸಿದ ಮತ್ತು ಪ್ರಾಸಿಕ್ಯೂಷನ್‌ನಿಂದ ಪರಿಶೀಲಿಸಲ್ಪಟ್ಟ ಸತ್ಯಾಂಶಗಳನ್ನು ಪರಿಗಣಿಸಿ, ಅರ್ಜಿದಾರರಿಗೆ 20.03.2026 ರಿಂದ 30.03.2026 ರವರೆಗೆ ಅಪೇಕ್ಷಿತ ಪರಿಹಾರವನ್ನು (ಜಾಮೀನು) ನೀಡುವುದು ಸೂಕ್ತವೆಂದು ನ್ಯಾಯಾಲಯವು ಭಾವಿಸುತ್ತದೆ. ಈ ಅವಧಿಗೆ ಅರ್ಜಿದಾರರು 50,000 ರೂ. ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರು ಶೂರಿಟಿಗಳನ್ನು (ಜಾಮೀನುದಾರರನ್ನು) ಒದಗಿಸಬೇಕು” ಎಂದು ನ್ಯಾಯಾಲಯ ಹೇಳಿರುವುದಾಗಿ barandbench.com ವರದಿ ಉಲ್ಲೇಖಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾದ ನಂತರ, ಇಮಾಮ್ ಜನವರಿ 2020 ರಿಂದ ಜೈಲಿನಲ್ಲಿದ್ದಾರೆ. ಅವರಿಗೆ ಇತರ ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆಯಾದರೂ, ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಇನ್ನೂ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯನ್ನು (ಯುಎಪಿಎ) ಪ್ರಯೋಗಿಸಿದ್ದಾರೆ.

ಈ ಪ್ರಕರಣದಲ್ಲಿ ಇಮಾಮ್ ಅವರಿಗೆ ಸೆಪ್ಟೆಂಬರ್ 2, 2025ರಂದು ದೆಹಲಿ ಹೈಕೋರ್ಟ್ ನಿಯಮಿತ ಜಾಮೀನು ನಿರಾಕರಿಸಿತ್ತು. ಈ ಆದೇಶವನ್ನು ಜನವರಿ 5, 2026 ರಂದು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...