Homeಕರ್ನಾಟಕಬೆಳಗಾವಿ ಗ್ರಾಮೀಣ ಮರಾಠಿಗರದ್ದು, ಇಲ್ಲಿ ಮರಾಠಿಗರೇ ಗೆಲ್ಲಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮೀಣ ಮರಾಠಿಗರದ್ದು, ಇಲ್ಲಿ ಮರಾಠಿಗರೇ ಗೆಲ್ಲಬೇಕು; ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ರಮೇಶ್ ಜಾರಕಿಹೊಳಿ

ಈ ಬಾರಿ ಲಕ್ಷ್ಮಿ ಹೆಬ್ಬಾಳಕರ್‌ ಸೋಲಿಸಲು ನೀವೆಲ್ಲಾ ದುಡ್ಡು ಕೊಡಬೇಕು. ನಾನು 5ಕೋಟಿ ಫಂಡ್‌ ಕೊಡುತ್ತೇನೆ ಎಂದು ಘೋಷಿಸಿದ್ದಾರೆ.

- Advertisement -
- Advertisement -

ಅನರ್ಹ ಶಾಸಕನಾಗಿ ನಂತರ ಉಪಚುನಾವಣೆಯಲ್ಲಿ ಗೆದ್ದಿರುವ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಬೆಳಗಾವಿಯಲ್ಲಿ ನಡೆದ ಮರಾಠ ಸಮುದಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮರಾಠರನ್ನು ಒಲೈಸುವ ಭರದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರದ್ದು, ಇಲ್ಲಿ ಮರಾಠಿಗರು ನಿಂತರೆ ಮಾತ್ರ ನಾನು ಬೆಂಬಲಿಸುತ್ತೇನೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಹಾಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷದ ಲಕ್ಷ್ಮಿ ಹೆಬ್ಬಾಳ್‌ಕರ್‌ ಪ್ರತಿನಿಧಿಸುತ್ತಿದ್ದಾರೆ. ಅವರನ್ನು ಕಂಡರಾಗದ ರಮೇಶ್‌ ಜಾರಕಿಹೊಳಿ ವೇದಿಕೆಯಿಂದ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರನ್ನು ಉದ್ದೇಶಿಸಿ ಮಾತನಾಡಿದ ರಮೇಶ್, “ನೀವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್‌ ಮತ್ತು ಒಂದು ಸಾವಿರ ದುಡ್ಡು ತೆಗೆದುಕೊಂಡು ಓಟಾಕ್ಕಿದ್ದೀರಿ. ಈ ಸಲ ಹಾಗೆ ಮಾಡುವುದಿಲ್ಲ ಅಂದರೆ ಮಾತ್ರ ನಾನು ಈ ಕ್ಷೇತ್ರಕ್ಕೆ ತಲೆಹಾಕುತ್ತೇನೆ. ನಾನೇ ಬೇಕಾದರೆ ನಿಮಗೆ ಕುಕ್ಕರ್‌ ಮತ್ತು ತಲಾ ಒಂದು ಸಾವಿರ ಕೊಡುತ್ತೇನೆ. ಮರಾಠ ಮುಖಂಡರು ಒಂದಾಗಬೇಕು. ಚುನಾವಣೆಯಲ್ಲಿ ಮರಾಠ ಮುಖಂಡರು ಯಾರೇ ಆದರೂ ಪರವಾಗಿಲ್ಲ ಒಬ್ಬರು ಮಾತ್ರ ಎಲೆಕ್ಷನ್‌ಗೆ ನಿಲ್ಲಬೇಕು. ಸಂಜಯ್‌ ಅಥವಾ ಇನ್ಯಾರೋ ಒಬ್ಬರು ಮಾತ್ರ ನಿಂತರೆ ನಾನು ಕೆಲಸ ಮಾಡುತ್ತೇನೆ.” ಎಂದಿದ್ದಾರೆ.

ಅದಕ್ಕೂ ಮುಂಚೆ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರದ್ದು, ಇಲ್ಲಿ ಮರಾಠಿಗರು ಗೆಲ್ಲಬೇಕು. ನಾನು ಕಳೆದ ಸಾರಿ ಒಳ್ಳೇಯ ಸಂಸ್ಕೃತಿಯ ಮಗಳು ಎಂದು ಲಕ್ಷ್ಮಿ ಹೆಬ್ಬಾಳಕರ್‌ ಬೆಂಬಲಿಸಿ ತಪ್ಪು ಮಾಡಿದ್ದೆ. ಈ ಬಾರಿ ಆಕೆಯನ್ನು ಸೋಲಿಸಲು ನೀವೆಲ್ಲಾ ದುಡ್ಡು ಕೊಡಬೇಕು. ನಾನು 5ಕೋಟಿ ಫಂಡ್‌ ಕೊಡುತ್ತೇನೆ ಎಂದು ಘೋಷಿಸಿದ್ದಾರೆ.

ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಅದರಲ್ಲಿ ಈ ಬಿಜೆಪಿಗರು ಅದನ್ನು ಮರಾಠಿಗರದು ಎನ್ನುವ ಮೂಲಕ ವಿಭಜನೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...