Homeಮುಖಪುಟಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

- Advertisement -
- Advertisement -

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಒಬ್ಬ ರೌಡಿ ಶೀಟರ್ ನನ್ನು ಬಂಧಿಸಲಾಗಿದೆ. ಆತನನ್ನು ತಿರುವೆರ್ಕಾಡುವಿನ ‘ಕಕ್ಕ’ ಬಾಲಾಜಿ ಎಂದು ಗುರುತಿಸಲಾಗಿದೆ. ಚೆಂಗಲ್ಪಟ್ಟು ಜಿಲ್ಲಾ ಪೊಲೀಸ್‌ನ ಅಧಿಕೃತ ಹ್ಯಾಂಡಲ್‌ನಿಂದ ಎಕ್ಸ್‌ನಲ್ಲಿನ ಪೋಸ್ಟ್ ಪ್ರಕಾರ, ಎರಡನೇ ಆರೋಪಿ ಮಾರಿಪುತ್ತೂರಿನ ವೈ ಧಾಮು ಅಲಿಯಾಸ್ ಧಮೋಧರನ್ (25)ಗಾಗಿ ಹುಡುಕಾಟ ನಡೆಯುತ್ತಿದೆ.

ಪ್ರಾಥಮಿಕ ವಿಚಾರಣೆಯಲ್ಲಿ ಸಂತ್ರಸ್ತ ಬಾಲಕಿ 17 ವರ್ಷದ ಬಾಲಕ ಮತ್ತು 16 ವರ್ಷದ ಬಾಲಕಿಯೊಂದಿಗೆ ತಾಂಬರಂನಿಂದ ಮಧುರಾಂತಕಂ ಬಳಿಯ ಕೀಲಕಂಡೈ ಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ದೇವತೂರು ಬಳಿ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಬೈಕ್ ಅನ್ನು ಹಿಂಬಾಲಿಸಿ, ಅಡ್ಡಗಟ್ಟಿದ್ದಾರೆ.

ಅವರು ಬೆನ್ನಟ್ಟುವವರಿಂದ ತಪ್ಪಿಸಿಕೊಳ್ಳಲು, ಬೈಕ್ ಹೋಡಿಸುತ್ತಿದ್ದ ಹುಡುಗ ವೇಗ ಹೆಚ್ಚಿಸಿದ್ದು, ನಿಯಂತ್ರಣ ಕಳೆದುಕೊಂಡು ಮೂವರು ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಅಲ್ಲಿಯೇ ಬಿದ್ದಿದ್ದ 14 ವರ್ಷದ ಬಾಲಕಿಯನ್ನು ಬಿಟ್ಟು 16ವರ್ಷದ ಬಾಲಕಿಯನ್ನು ಕರೆದುಕೊಂಡು ಹುಡುಗ ಬೈಕ್ ನಲ್ಲಿ ತಪ್ಪಿಸಿಕೊಂಡಿದ್ದಾನೆ.

ಆ ಸಮಯದಲ್ಲಿ ಕುಡಿದಿದ್ದ ರೌಡಿ ಶೀಟರ್ ಮತ್ತು ಆತನ ಸಹಚರರು, ಬಾಲಕಿಯನ್ನು ಸರೋವರದ ದಂಡೆಯ ಬಳಿಯ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಮಂಗಳವಾರ ಬೆಳಗಿನ ಜಾವದವರೆಗೂ ಆಕೆಯ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕಿ ಮಂಗಳವಾರ ಬೆಳಿಗ್ಗೆ ಹೇಗೋ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ತಲುಪಿ ಅಲ್ಲಿನ ಕರ್ತವ್ಯ ನಿರತ ವೈದ್ಯರಿಗೆ ಘಟನೆಯ ಬಗ್ಗೆ ವರದಿ ಮಾಡಿದ್ದಾರೆ. ಆಸ್ಪತ್ರೆ ಅಧಿಕಾರಿಗಳ ಎಚ್ಚರಿಕೆಯ ನಂತರ, ಮೇಲ್ಮರುವತ್ತೂರು ಎಲ್ಲಾ ಮಹಿಳಾ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ನಾಲ್ಕು ವಿಶೇಷ ತಂಡಗಳನ್ನು ರಚಿಸಿದೆ.

ಗುಡುವಾಂಚೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳನ್ನು ಹೊಂದಿರುವ ಬಾಲಾಜಿಯ ಬಂಧನವನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಸಂತ್ರಸ್ತ ಬಾಲಕಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...