Homeಮುಖಪುಟಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

- Advertisement -
- Advertisement -

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಶನಿವಾರ ನಡೆದಿದೆ ಎನ್ನಲಾದ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚಕ್ರಧರಪುರದ ಉಪವಿಭಾಗೀಯ ಆಸ್ಪತ್ರೆಯ ಅಧಿಕಾರಿಗಳು 35 ವರ್ಷದ ದಿನಗೂಲಿ ಕೆಲಸಗಾರನೊಬ್ಬನಿಗೆ ಆಂಬ್ಯುಲೆನ್ಸ್ ನಿರಾಕರಿಸಿದ್ದಾರೆ. ಕಾರ್ಡ್‌ಬೋರ್ಡ್‌ನಲ್ಲೇ ಮಗುವಿನ ಶವ ತೆಗೆದುಕೊಂಡು ಹೋಗುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ. ಸದ್ಯ. ಆರೋಗ್ಯ ಇಲಾಖೆಯು ಘಟನೆ ಕುರಿತು ತನಿಖೆಗೆ ಆದೇಶಿಸಿದೆ.

ಕಾರ್ಡ್‌ಬೋರ್ಡ್ ಪೆಟ್ಟಿಗೆಯಲ್ಲಿ ಶವವನ್ನು ಹೊತ್ತೊಯ್ಯುತ್ತಿರುವ ವ್ಯಕ್ತಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ, ಆರೋಗ್ಯ ಇಲಾಖೆ ತನಿಖಗೆ ಆದೇಶಿಸಿದೆ.

ವರದಿಗಳ ಪ್ರಕಾರ, ಬಂಗಾರಸಾಯಿ ಗ್ರಾಮದ ರಾಮಕೃಷ್ಣ ಹೆಂಬ್ರಾಮ್ ತನ್ನ ಗರ್ಭಿಣಿ ಪತ್ನಿ 28 ವರ್ಷದ ರೀಟಾ ತಿರಿಯಾ ಅವರನ್ನು ಮಾರ್ಚ್ 5 ರಂದು ಆಸ್ಪತ್ರೆಗೆ ದಾಖಲಿಸಿದರು. ಶನಿವಾರ ತಪಾಸಣೆಯ ಸಮಯದಲ್ಲಿ, ಸಿಬ್ಬಂದಿ ಮಗುವಿನ ಹೃದಯ ಬಡಿತವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ರೀಟಾ ಅವರನ್ನು ಅಲ್ಟ್ರಾಸೌಂಡ್‌ ಮಾಡಿಸಿಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಪರೀಕ್ಷೆ ಪೂರ್ಣಗೊಳ್ಳುವ ಮೊದಲೇ ಆಕೆ ಹೆರಿಗೆ ನೋವು ಅನುಭವಿಸಲು ಪ್ರಾರಂಭಿಸಿದ್ದು, ಸತ್ತ ಮಗುವನ್ನು ಹೆತ್ತಿದ್ದಾರೆ.

ಮಗುವಿನ ದೇಹವನ್ನು ಸುಮಾರು 12 ಕಿಮೀ ದೂರದಲ್ಲಿರುವ ತನ್ನ ಮನೆಗೆ ಸಾಗಿಸಲು ಆಂಬ್ಯುಲೆನ್ಸ್ ನೀಡುವಂತೆ ಮೃತ ಮಗುವಿನ ತಂದೆ ಮನವಿ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಅವರ ವಿನಂತಿಯನ್ನು ಪರಿಗಣಿಸಿಲ್ಲ. ಶವವನ್ನು ತಕ್ಷಣ ಹೊರಗೆ ತೆಗೆದುಕೊಂಡು ಹೋಗುವಂತೆ ಒತ್ತಾಯಿಸಿದ ವಾರ್ಡ್ ಬಾಯ್‌ಗಳು, ಆಸ್ಪತ್ರೆಯ ಆವರಣದಲ್ಲಿ ಎಸೆದಿದ್ದ ರಟ್ಟಿನ ಪೆಟ್ಟಿಗೆಯನ್ನು ತಂದೆಗೆ ನೀಡಿದ್ದಾರೆ. ಹೆಂಬ್ರಾಮ್ ಅವರು ಶವವನ್ನು ಪೆಟ್ಟಿಗೆಯಲ್ಲಿ ಇರಿಸಿ, ದಿನಸಿ ಚೀಲದಲ್ಲಿ ಪ್ಯಾಕ್ ಮಾಡಿ ರಿಕ್ಷಾ ಮೂಲಕ ಮನೆ ತಲುಪಿದ್ದಾರೆ.

“ಮಹಿಳೆಯನ್ನು ಆಸ್ಪತ್ರೆಯಲ್ಲಿ ಇರಿಸಲಾಗಿತ್ತು, ಮಗುವಿನ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಲು ಕುಟುಂಬಕ್ಕೆ ಸೂಚಿಸಿದ್ದೆವು” ಎಂದು ಆಸ್ಪತ್ರೆಯ ಉಸ್ತುವಾರಿ ಡಾ. ಅಂಶುಮಾನ್ ಶರ್ಮಾ ಹೇಳಿದರು.

“ರೋಗಿಯ ಕುಟುಂಬವು ಆಂಬ್ಯುಲೆನ್ಸ್‌ಗಾಗಿ ಯಾವುದೇ ವಿನಂತಿ ಮಾಡಿಲ್ಲ. ಒಂದು ವೇಳೆ ಕೇಳಿಕೊಂಡಿದ್ದರೆ ನಾವು ಆಸ್ಪತ್ರೆಯಲ್ಲಿ ಲಭ್ಯವಿರುವ ಮಮತಾ ವಾಹನ (ಆಂಬ್ಯುಲೆನ್ಸ್) ವ್ಯವಸ್ಥೆ ಮಾಡುತ್ತಿದ್ದೆವು” ಎಂದು ಹೇಳಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಅಜಯ್ ಕುಮಾರ್ ಸಿಂಗ್, ಆರೋಪಗಳ ತನಿಖೆಗಾಗಿ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಹೇಳಿದರು. “ಆರೋಪಗಳು ನಿಜವೆಂದು ಕಂಡುಬಂದರೆ, ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...