Homeಮುಖಪುಟಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

- Advertisement -
- Advertisement -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ.

ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್ ಪದಚ್ಯುತಿ ನಿರ್ಣಯವನ್ನು ಧ್ವನಿ ಮತಕ್ಕೆ ಹಾಕಲಾಯಿತು ಬಹುಪಾಲು ಸದಸ್ಯರು ನಿರ್ಣಯದ ವಿರುದ್ಧ ಧ್ವನಿ ಎತ್ತಿದ್ದರಿಂದ, ಪದಚ್ಯುತಿ ನಿರ್ಣಯವು ತಿರಸ್ಕೃತಗೊಂಡಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಘೋಷಿಸಿದರು.

ಸದನದಲ್ಲಿ ಗದ್ದಲವಿದ್ದ ಕಾರಣ ಮತ್ತು ವಿರೋಧ ಪಕ್ಷದ ಸದಸ್ಯರು ತಮ್ಮ ಸ್ಥಾನಗಳಿಗೆ ಮರಳದ ಕಾರಣ, ಮತಗಳ ಎಣಿಕೆ ಮಾಡುವ ‘ಡಿವಿಷನ್ ವೋಟ್’ (ವೈಯಕ್ತಿಕ ಮತದಾನ) ಪ್ರಕ್ರಿಯೆ ನಡೆದಿಲ್ಲ ಎಂದು ವರದಿಯಾಗಿದೆ.

ವಿರೋಧ ಪಕ್ಷಗಳ ಒಕ್ಕೂಟದ (ಇಂಡಿಯಾ) ಬಳಿ ಸುಮಾರು 238 ಸಂಸದರ ಬೆಂಬಲವಿತ್ತು (ಕಾಂಗ್ರೆಸ್‌ನ 99 ಸದಸ್ಯರು ಸೇರಿದಂತೆ), ಆದರೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಹೊಂದಿದ್ದರಿಂದ ನಿರ್ಣಯದ ಸೋಲು ನಿರೀಕ್ಷಿತವಾಗಿತ್ತು.

ಸಂವಿಧಾನದ 94(ಸಿ) ವಿಧಿಯ ಪ್ರಕಾರ, ಸ್ಪೀಕರ್ ಅವರನ್ನು ಪದಚ್ಯುತಗೊಳಿಸಲು ಸದನದ ಒಟ್ಟು ಸದಸ್ಯರ ಬಹುಮತದ ಅವಶ್ಯಕತೆಯಿರುತ್ತದೆ.

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಮತ್ತು ದಾಖಲೆ ಸಂಖ್ಯೆಯ ಸಂಸದರನ್ನು ಅಮಾನತುಗೊಳಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಈ ನಿರ್ಣಯ ಮಂಡಿಸಿತ್ತು.

ಈ ನಿರ್ಣಯಕ್ಕೆ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸೇರಿದಂತೆ 118 ಸದಸ್ಯರು ಸಹಿ ಹಾಕಿದ್ದರು.

ನಿರ್ಣಯದ ಮೇಲಿನ ಚರ್ಚೆಯ ನಂತರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡುತ್ತಿದ್ದಂತೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡದೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ಈ ನಡುವೆ ಅಮಿತ್ ಶಾ ಮಾತನಾಡಿ, ಸ್ಪೀಕರ್ ವಿರುದ್ಧದ ಈ ನಿರ್ಣಯವು “ಪ್ರಜಾಪ್ರಭುತ್ವದ ಮೇಲಿನ ಕಪ್ಪುಚುಕ್ಕೆ” ಎಂದು ಟೀಕಿಸಿದರು. ಅಲ್ಲದೆ, ಸದನಕ್ಕೆ ಸರಿಯಾಗಿ ಹಾಜರಾಗದ ರಾಹುಲ್ ಗಾಂಧಿ ಅವರ ವಿರುದ್ಧವೂ ಕಿಡಿಕಾರಿದರು.

ಲೋಕಸಭೆಯು ಇಡೀ ದೇಶಕ್ಕೆ ಸೇರಿದ್ದೇ ಹೊರತು ಕೇವಲ ಒಂದು ಪಕ್ಷಕ್ಕಲ್ಲ. ವಿರೋಧ ಪಕ್ಷದ ಧ್ವನಿಯನ್ನು ಪದೇ ಪದೇ ಹತ್ತಿಕ್ಕಲಾಗುತ್ತಿದೆ ಎಂದು ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...