Homeಮುಖಪುಟ'ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?'..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

- Advertisement -
- Advertisement -

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಕೇಂದ್ರಾಡಳಿತ ಪ್ರದೇಶದ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮೊದಲು ವಿಷಯ ಪ್ರಸ್ತಾಪಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಫಾರೂಕ್ ಅಬ್ದುಲ್ಲಾ ಅವರಿಗೆ ಇರುವ ಭದ್ರತಾ ಬೆದರಿಕೆಗಳನ್ನು ಎತ್ತಿ ತೋರಿಸಿದರು ಮತ್ತು ಸ್ಥಳೀಯ ಪೊಲೀಸರ ಮೇಲೆ ಕೇಂದ್ರ ಸರ್ಕಾರದ ನಿಯಂತ್ರಣವನ್ನು ಟೀಕಿಸಿದರು.

“ಫಾರೂಕ್ ಅಬ್ದುಲ್ಲಾ ಅವರ ಭದ್ರತೆಗೆ ಅಪಾಯವಿದೆ” ಎಂದ ಖರ್ಗೆ, ಜಮ್ಮು ಕಾಶ್ಮೀರ ಈ ಹಿಂದೆ ಪೂರ್ಣ ಪ್ರಮಾಣದ ರಾಜ್ಯವಾಗಿತ್ತು. ಸ್ಥಳೀಯ ಭದ್ರತೆ ಅವರನ್ನು ಉಳಿಸಿತು ಎಂದು ಒತ್ತಿ ಹೇಳಿದರು.”ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?” ಎಂದು ಪ್ರಶ್ನಿಸಿದರು.

ಖರ್ಗೆ ಮಾತಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೆ.ಪಿ ನಡ್ಡಾ, ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ‘ಆತಂಕಕಾರಿ ಮತ್ತು ಗಂಭೀರ ವಿಷಯ’ ಎಂದರು. ಈ ಕುರಿತು ಸರಿಯಾದ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಘಟನೆಗೆ ಸಂಬಂಧಿಸಿದಂತೆ ಶಂಕಿತನ ಬಂಧನವನ್ನು ದೃಢಪಡಿಸಿದ ಅವರು, ಫಾರೂಕ್ ಅಬ್ದುಲ್ಲಾ ಅವರ ಭದ್ರತೆಯನ್ನು ಬಲಪಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಖರ್ಗೆ ಆರೋಪಗಳನ್ನು ಟೀಕಿಸಿದ ನಡ್ಡಾ, “ಕಾಂಗ್ರೆಸ್ ಅಂತಹ (ಹತ್ಯೆಯಂತಹ) ಉದ್ದೇಶಗಳನ್ನು ಹೊಂದಿರಬಹುದು” ಎಂದು ಕಿಡಿಕಾರಿದರು. ವಿಷಯವನ್ನು ರಾಜಕೀಯಗೊಳಿಸುವುದನ್ನು ವಿರೋಧಿಸಿದರು. ಜಮ್ಮು ಕಾಶ್ಮೀರದಲ್ಲಿ ಕಸ್ಟಡಿಯಲ್ಲಿ ನಡೆದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸಾವಿನ ಪ್ರಕರಣವನ್ನು ಉಲ್ಲೇಖಿಸಿದರು.

“ಘಟನೆ ನಡೆದ ಸ್ಥಳದಲ್ಲಿ ಯಾವುದೇ ಪೊಲೀಸರು ಇರಲಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್‌ನ ಸದಸ್ಯ ಚೌಧರಿ ಮೊಹಮ್ಮದ್ ರಂಝಾನ್ ಹೇಳಿದರು. ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಆಗಂತುಕನನ್ನು ಅವರು ಮತ್ತು ಇತರರು ಬಲಪ್ರಯೋಗ ಮಾಡಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿಸಿದರು. ಫಾರೂಕ್ ಅಬ್ದುಲ್ಲಾ ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡುವುದರ ಜೊತೆಗೆ ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಬೇಕೆಂದು ಅವರು ಆಗ್ರಹಿಸಿದರು.

ಬುಧವಾರ (ಮಾ.11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದ ರಾಯಲ್ ಪಾರ್ಕ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಪ್ರಯತ್ನ ನಡೆದಿದೆ. ಲೋಡ್ ಮಾಡಿದ ಪಿಸ್ತೂಲ್ ಮೂಲಕ ವ್ಯಕ್ತಿಯೊಬ್ಬ ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಫಾರೂಕ್ ಅಬ್ದುಲ್ಲಾ ಅವರ ರಕ್ಷಣೆಗೆ ನಿಯೋಜಿಸಲಾದ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ತಕ್ಷಣ ಮಧ್ಯಪ್ರವೇಶಿಸಿ ಆ ಪ್ರಯತ್ನವನ್ನು ತಡೆದಿದ್ದಾರೆ.

ಜಮ್ಮುವಿನ ಪುರಾಣಿ ಮಂಡಿ ನಿವಾಸಿ ಕಮಲ್ ಸಿಂಗ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ದಾಳಿಗೆ ಬಳಸಲಾದ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...