Homeಕರ್ನಾಟಕ56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

- Advertisement -
- Advertisement -

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ್ದಾರೆ. 

“ಸರ್ಕಾರವು ತರಾತುರಿಯಲ್ಲಿ ಹೊರಡಿಸಿರುವ ನೇಮಕಾತಿ ಆದೇಶವನ್ನು ಹಿಂಪಡೆಯಬೇಕು. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಅಳವಡಿಕೆಗೆ ತೀರ್ಮಾನಿಸಿ, ಕೂಡಲೇ ಆದೇಶ ಹೊರಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ದಲಿತರ ಜನಸಂಖ್ಯೆ 18% ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಸರ್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. 

“ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್ಇಪಿ-ಟಿಎಸ್ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು. ಸಮಾಜ ಕಲ್ಯಾಣ ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವ ಎಚ್.ಸಿ. ಮಹಾದೇವಪ್ಪ ಅವರನ್ನು ಕೂಡಲೇ ಬದಲಾಯಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮೂರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮೂರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮೂರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ,  ವೇಣುಗೋಪಾಲ್ ಮೌರ್ಯ,  ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು, ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...