Homeಮುಖಪುಟಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

- Advertisement -
- Advertisement -

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು, ಕಾರ್ಪೊರೇಟ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸುಮಾರು 170 ಪದಾಧಿಕಾರಿಗಳ ಸಂಪೂರ್ಣ ಮಂಡಳಿಯನ್ನು ವಜಾ ಮಾಡಿದೆ ಎಂದು ವರದಿಯಾಗಿದೆ.

ಕೇರಳದ ಪ್ರಭಾವಿ ಈಳವ ಸಮುದಾಯದ ಪ್ರಮುಖ ಸಾಮಾಜಿಕ ಸಂಘಟನೆಯಾದ ಎಸ್‌ಎನ್‌ಡಿಪಿ ಯೋಗಂ ಅನ್ನು ನಟೇಶನ್ ಕಳೆದ 25 ವರ್ಷಗಳಿಗೂ ಹೆಚ್ಚು ಸಮಯದಿಂದ ಮುನ್ನಡೆಸಿದ್ದಾರೆ.

ಬರಹಗಾರ ಎಂ.ಕೆ. ಸಾನು ಮತ್ತು ಎಸ್‌ಎನ್‌ಡಿಪಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಎಸ್. ಚಂದ್ರಸೇನನ್ ಅವರು ಸಲ್ಲಿಸಿದ ಅರ್ಜಿಗಳಿಗೆ ಸಂಬಂಧಿಸಿದೆ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್ ಅವರ ಪೀಠವು ಆದೇಶ ನೀಡಿದೆ. ಈ ಅರ್ಜಿದಾರರು ವ್ಯವಸ್ಥೆಯಲ್ಲಿನ ಗಂಭೀರ ಅಕ್ರಮಗಳನ್ನು ಎತ್ತಿ ತೋರಿಸಿದ್ದರು.

ನಟೇಶನ್ ಜೊತೆಗೆ ಮಂಡಳಿಯ ಉಪಾಧ್ಯಕ್ಷನಾಗಿರುವ ಅವರ ಮಗರ ತುಷಾರ್ ವೆಳ್ಳಾಪ್ಪಳ್ಳಿ, ಅಧ್ಯಕ್ಷ ಎಂ.ಎನ್. ಸೋಮನ್, ದೇವಸ್ವಂ ಕಾರ್ಯದರ್ಶಿ ಅರಾಯಕಂಡಿ ಸಂತೋಷ್ ಮತ್ತು ಇತರರು ಅನರ್ಹಗೊಂಡ ಪ್ರಮುಖರು.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿರುವ ಎಸ್‌ಎನ್‌ಡಿಪಿ ಯೋಗಂ, 2014 ರಿಂದ, ಅಂದರೆ ಸುಮಾರು ಒಂಬತ್ತು ವರ್ಷಗಳಿಂದ ತನ್ನ ವಾರ್ಷಿಕ ಹಣಕಾಸು ವರದಿಗಳನ್ನು ಸಲ್ಲಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಕಂಪನಿ ಕಾಯ್ದೆಯ ಪ್ರಕಾರ, ಸತತ ಮೂರು ವರ್ಷಗಳ ಕಾಲ ವರದಿ ಸಲ್ಲಿಸದಿದ್ದರೆ ನಿರ್ದೇಶಕರು ಅನರ್ಹರಾಗುತ್ತಾರೆ. ಅಲ್ಲದೆ, ಹಲವಾರು ನಿರ್ದೇಶಕರು ಕಡ್ಡಾಯವಾಗಿ ಹೊಂದಿರಬೇಕಾದ ನಿರ್ದೇಶಕರ ಗುರುತಿನ ಸಂಖ್ಯೆಯನ್ನು ಹೊಂದಿರಲಿಲ್ಲ ಎಂದು ನ್ಯಾಯಾಲಯ ಎತ್ತಿ ತೋರಿಸಿದೆ.

ಕಂಪನಿಗಳ ನೋಂದಣಾಧಿಕಾರಿಯ ವರದಿಯನ್ನು ಉಲ್ಲೇಖಿಸಿದ ಹೈಕೋರ್ಟ್, ಪ್ರಸ್ತುತ ಇರುವ ಎಲ್ಲಾ ಪದಾಧಿಕಾರಿಗಳನ್ನು ಅನರ್ಹಗೊಳಿಸಿದೆ ಮತ್ತು ಹೊಸ ಮಂಡಳಿಯನ್ನು ನೇಮಿಸುವಂತೆ ಆದೇಶಿಸಿದೆ. ಹೊಸ ಮಂಡಳಿಯು ನೇಮಕವಾಗುವವರೆಗೆ, ಒಂದು ತಾತ್ಕಾಲಿಕ ಮಂಡಳಿಯು ದೈನಂದಿನ ಕಾರ್ಯಕಲಾಪಗಳನ್ನು ನಿರ್ವಹಿಸಲಿದೆ ಮತ್ತು ಕಾನೂನುಬದ್ಧವಾಗಿ ಹೊಸ ಚುನಾವಣೆಗಳು ನಡೆಯುವಂತೆ ನೋಡಿಕೊಳ್ಳಲಿದೆ.

ವೆಳ್ಳಾಪಳ್ಳಿ ನಟೇಶನ್ ಅವರು ಈ ಸಂಪೂರ್ಣ ಅನರ್ಹತೆಯನ್ನು ಒಪ್ಪಿಕೊಂಡಿದ್ದು, ತೀರ್ಪಿನ ಪ್ರತಿಯನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ. ಈ ತೀರ್ಪು ದಶಕಗಳ ಕಾಲ ಸಂಘಟನೆಯಲ್ಲಿ ಪ್ರಾಬಲ್ಯ ಹೊಂದಿದ್ದ ಅವರಿಗೆ ಕಾನೂನಾತ್ಮಕವಾಗಿ ಎದುರಾದ ಅತಿದೊಡ್ಡ ಹಿನ್ನಡೆಗಳಲ್ಲಿ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...