Homeಕರ್ನಾಟಕ‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

- Advertisement -
- Advertisement -

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಖರ್ಗೆ ಹೊಲೆಯ ಸಮುದಾಯದವರು. ಅವರು ಒಳಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಗೆ ಬಿಡುತ್ತಿಲ್ಲ’ ಎಂದುಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಳಮೀಸಲಾತಿ ಅನುಷ್ಠಾನದ ನೇತಾರ, ಹೋರಾಟಗಾರ ಮಂದಕೃಷ್ಣ ಮಾದಿಗ ಆರೋಪಿಸಿದರು. 

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಇದೇ ಬಲಗೈ ಸಮುದಾಯದ ಪರಮೇಶ್ವರ್, ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಬಿಡುತ್ತಿಲ್ಲ ಎಂದು ಅವರು ಹೇಳಿದರು.

“ಇಂದು ಒಂದು ಸಂತೋಷ ಮತ್ತು ಒಂದು ದುಖಃ ನನ್ನನ್ನು ಕಾಡುತ್ತಿದೆ. ಸಂತೋಷ ಏನೆಂದರೆ ಕರ್ನಾಟಕದ ಎಲ್ಲಾ ಒಳಮೀಸಲಾತಿ ಹೋರಾಟಗಾರರು ಒಂದೇ ವೇದಿಕೆಗೆ ಬಂದು ನಮಗೆ ಗುಂಪುಗಳು ಮುಖ್ಯವಲ್ಲ, ಸಮುದಾಯದ ಹಕ್ಕುಗಳನ್ನುಪಡೆದುಕೊಳ್ಳುವುದೇ ನಮಗೆ ಮುಖ್ಯ ಎಂದು ಒಂದೇ ವೇದಿಕೆಗೆ ಬಂದಿರುವುದು. ದುಖಃದ ವಿಚಾರವೆಂದರೆ, ಇಷ್ಟೆಲ್ಲ ಒತ್ತಡ ಬರುತ್ತಿದ್ದರೂ ಕರ್ನಾಟಕ ಸರ್ಕಾರ ಒಳಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೇ ಇರುವುದು” ಎಂದರು. 

“ಕರ್ನಾಟಕದಲ್ಲಿ 15 ರಷ್ಟು ಮೀಸಲಾತಿಯಲ್ಲಿ ಬಹುತೇಕ ಮೀಸಲಾತಿಯನ್ನು ಹೊಲೆಯ ಸಮುದಾಯವೇ ಅನುಭವಿಸಿದೆ, ಇದು ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಪರಿಸ್ಥಿತಿ ಇದೇ ಆಗಿದೆ. 1965ರಲ್ಲೆ ಕೇಂದ್ರ ಸರ್ಕಾರ ಲೋಕೂರ್ ಕಮಿಟಿ, ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಯಾಗಬೇಕೆಂದು ಶಿಫಾರಸ್ಸು ಮಾಡಿತ್ತು, ಏಕೆಂದರೆ ಕಾಂಗ್ರೆಸ್ ನಲ್ಲಿ ಅಂದಿನಿಂದ ಹೊಲೆಯ ಸಮುದಾಯದ ಮೇಲಾಧಿಪತ್ಯ ಕಾರಣದಿಂದಾಗಿ ಇದನ್ನು ಜಾರಿಯಾಗುವುದನ್ನು ತಡೆಹಿಡಿಯಾಲಾಯಿತು” ಎಂದು ಮಂದಕೃಷ್ಣ ಮಾದಿಗ ಹೇಳಿದರು. 

“1996ರಲ್ಲಿ ಶುರು ಮಾಡಿದ ಹೋರಾಟ ಇಂದು ಮಾದಿಗ ಮೀಸಲಾತಿ ಇಲ್ಲಿಗೆ ತಂದು ನಿಲ್ಲಿಸಿದೆ. ನಮ್ಮ ಒಳಮೀಸಲಾತಿ ಹೋರಾಟದಲ್ಲಿ ನ್ಯಾಯವಿದೆ, ಧರ್ಮವಿದೆ. ತೆಲಂಗಾಣದಲ್ಲಿ ಎಲ್ಲ  ಪಕ್ಷಗಳು ನಮಗೆ ಬಂಬಲಿಸಿದ್ದರು, ತಮಿಳುನಾಡಿನಲ್ಲೂ ಕೂಡಾ ಒಳಮೀಸಲಾತಿಯ ಪರವಾಗಿದೆ ಎಂದು ಹೇಳುತ್ತಿದೆ. ಕರ್ನಾಟಕದಲ್ಲೂ ಕೂಡಾ ಎಲ್ಲ ಪಕ್ಷಗಳು ನಮ್ಮ ಒಳಮೀಸಲಾತಿ ಪರವಾಗಿ ಇವೆ ಎಂದು ಹೇಳುತ್ತಿವೆ. ನಮ್ಮ ಹೋರಾಟದಲ್ಲಿ ನ್ಯಾಯ ಇಲ್ಲದಿದ್ದರೆ, ಧರ್ಮ ಇಲ್ಲದಿದ್ದರೆ ಈ ಎಲ್ಲ ಪಕ್ಷಗಳು ಏಕೆ ಒಳಮೀಸಲಾತಿ ಜಾರಿಯಾಗಬೆಕೆಂದು ಬಯಸುತ್ತಿದ್ದವು ಎಂದು ಪ್ರಶ್ನಿಸಿದರು. 

ಎಲ್ಲಿ ಒಳಮೀಸಲಾತಿ ಕೂಗು, ಹೋರಾಟ ಹೆಚ್ಚಾಗಿ ಕೇಳಿಬರುತ್ತಿವೆಯೋ ಆ ರಾಜ್ಯಗಳಲ್ಲಿನ ಪಕ್ಷಗಳೆಲ್ಲವೂ ಒಳಮೀಸಲಾತಿ ಪರವಾಗಿ ನಿಲುವು ತೆಗೆದುಕೊಳ್ಳುತ್ತಿವೆ. ಎಲ್ಲ ಆಯೋಗಗಳೂ ಒಳಮೀಸಲಾತಿ ಜಾರಿಯಾಗಬೇಕೆಂದು ವರದಿ ನೀಡುತ್ತಿದೆ” ಎಂದರು.

“ಹರಿಯಾಣದಲ್ಲಿ 2024 ಆಗಸ್ಟ್ ತೀರ್ಪು ಬಂದ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಆಂದ್ರ ಪ್ರದೇಶದಲ್ಲಿ ಒಳಮಿಸಲಾತಗಾಗಿ ಆಗ್ರಹಿಸಿ ಶುರುವಾದ ಹೋರಾಟದಲ್ಲಿ ಹಲವು ಏಳುಬೀಳುಗಳು ಕಂಡಿವೆ. 

ಚಂದ್ರಬಾಬು ಸರ್ಕಾರ ಒಳಮೀಸಲಾತಿ ಜಾರಿ  ಮಾಡಿ ಆದೇಶ ಮಾಡಿತ್ತು ಅಂದು ಮಾಲಾ ಜಾತಿಗಳು ಒಳಮೀಸಲಾತಿಯ ವಿರುದ್ದ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದವು. 2004ರಲ್ಲಿ ಕೇಂದ್ರ ಸರ್ಕಾರ ಒಳಮೀಸಲಾತಿ ಪರವಾಗಿ ಅಫೀಡವಿಟ್ ಹಾಕದಿದ್ದ ಕಾರಣದಿಂದಾಗಿ ಅಂದು ಸುಪ್ರೀಂ ಕೋರ್ಟ್ ಒಳಮಿಸಲಾತಿ ವಿರುದ್ದ ತೀರ್ಪು ನೀಡಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಂಡಿದ್ದ ಕಾರಣದಿಂದಾಗಿ ಉಷಾ ಮೆಹ್ರಾ ಸಮಿತಿ ಸೇರಿದಂತೆ ಹಲವು ಸಮಿತಿಗಳ ರಚಿಸುವ ಮೂಲಕ ಒಳಮೀಸಲಾತಿಯನ್ನು ಸಂಕಷ್ಟಕ್ಕೆ ದೂಡಿದವರು” ಎಂದು ಆರೋಪಿಸಿದರು. 

“ಆಂದ್ರದಲ್ಲಿ 2023ರಲ್ಲಿ ಮಾದಿಗ ವಿಶ್ವರೂಪಂ ಕಾರ್ಯಕ್ರಮ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕುವಂತೆ ಒತ್ತಡ ತರಲಾಯಿತು. ಅದರಂತೆಯೇ ನರೇಂದ್ರ ಮೋದಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಒಳಮೀಸಲಾತಿ ಪರವಾಗಿ ಅಫಿಡವಿಟ್ ಹಾಕಿದ್ದರು. ಆ ಕಾರಣದಿಂದಾಗಿಯೇ ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಲು ಸಾದ್ಯವಾಯಿತು.

ಆಂಧ್ರ ಪ್ರದೇಶದಲ್ಲಿ ರಾಜೀವ್ ರಂಜಮಿಶ್ರನ್ ಸಮಿತಿ ರಚಿಸುವ ಮೂಲಕ ಒಳಮೀಸಲಾತಿ ಜಾರಿಯಾಗುತ್ತಿದೆ. ತೆಲಂಗಾಣದಲ್ಲಿಯೂ ಒಳಮೀಸಲಾತಿ ಜಾರಿಯಾಗಿದೆ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಅರುಂಧತಿಯಾರ್ ಸಮುದಾಯಕ್ಕೆ 3% ರಷ್ಟು ಒಳಮೀಸಲಾತಿ ನೀಡಿದೆ.

ಎಲ್ಲ ರಾಜ್ಯಗಳಲ್ಲೂ ಒಳಮೀಸಲಾತಿ ಬಹತೇಕ ಬಗೆಹರಿಯುವ ಹಂತಕ್ಕೆ ಬಂದಿದೆ. ಆದರೆ ಕರ್ನಾಟಕದಲ್ಲಿ ಒಳಮೀಸಲಾತಿಯನ್ನು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕಾರಣದಿಂದಾಗಿ ನನಗೆ ಅತೀವ ದುಖಃ ತಂದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಎ.ಜೆ ಸದಾಶಿವ ಸಮಿತಿ ಒಳಮೀಸಲಾತಿ ಪರವಾಗಿ ತೀರ್ಪು ನೀಡಿದ್ದವು. ಮಾದುಸ್ವಾಮಿ ಸಮಿತಿಯೂ ಕೂಡಾ ಒಳಮೀಸಲಾತಿ ಪರವಾಗಿ ವರದಿನೀಡಿದ್ದವು. ಇವೆಲ್ಲಾ ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆ ಎಂದುಕೊಂಡರೆ ಇದೇ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ನೀವೇ ರಚಿಸಿದ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯೂ ಕೂಡಾ ಒಳಮೀಸಲಾತಿ ಜಾರಿಮಾಡಬೇಕೆಂದು ವರದಿ ನೀಡಿವೆ ಮತ್ತೇಕೆ ಜಾರಿ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ತಮಿಳುನಾಡಿನಲ್ಲಿ, ಆಂಧ್ರದಲ್ಲಿ, ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಅನುಸಾರ ಒಳಮೀಸಲಾತಿ ಜಾರಿ ಮಾಡಿವೆ. ಆದರೆ ಕರ್ನಾಟಕದಲ್ಲಿ 3 ಸಮಿತಿಗಳ ವರದಿ ಇದ್ದರೂ ಒಳಮೀಸಲಾತಿ ಜಾರಿ ಮಾಡದಿರುವುದು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿರುದ್ದ ನಿಲುವು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. 

ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಪರವಾಗಿ ಇದೆ ಎಂದು ಘೋಷಿಸಿದರೂ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯಕ್ಕೆ ಇರುವ ಪ್ರಾಧಾನ್ಯತೆ ಮಾದಿಗರಿಗಿಲ್ಲ ಎಂದು ಇದರ ಮೂಲಕ ತಿಳಿಯುತ್ತದೆ. ಇಂದು ಕರ್ನಾಟಕದ ಕಾಂಗ್ರೆಸ್ ಪಕ್ಷದಲ್ಲಿ ಹೊಲೆಯ ಸಮುದಾಯದ ಪ್ರಭಾವಕ್ಕೆ ಹೆದರುತ್ತಿದೆ. ಆದರೆ ಮಾದಿಗ ಸಮುದಾಯದ ಆಕ್ರೋಶ, ನೋವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ಕಿಡಿಕಾರಿದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...