Homeಕರ್ನಾಟಕಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

- Advertisement -
- Advertisement -

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅವರು ಮಾತನಾಡಿದರು.  

ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ‘ಇದು ಬಹಳ ಸೂಕ್ಷ್ಮವಾದ ವಿಷಯ, ಮತ್ತು ಸಾರ್ವಜನಿಕ ಚರ್ಚೆಗಳಲ್ಲಿ ಬಹಳಷ್ಟು ಕಾಲದಿಂದ, ದಶಕಗಳಿಂದ ನಡೆದುಕೊಂಡು ಬಂದಿರುವ ಹೋರಾಟ ಈ ಹೋರಾಟದ ಬಗ್ಗೆ ನಮಗೆ ಗೌರವವಿದೆ ಎಂದರು.   

‘ಇಂದು ನಮ್ಮ ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಳಮೀಸಲಾತಿ ವಿಚಾರದಲ್ಲಿ ಬಹಳ ಸ್ಪಷ್ಟವಾಗಿ ನಾವು ಒಳಮೀಸಲಾತಿ ಆಗಬೇಕು, ಅದನ್ನು ಜಾರಿ ಮಾಡುವ ಬದ್ಧತೆ ಇದೆ ಅನ್ನುವ ಸ್ಪಷ್ಟತೆಯನ್ನು ನೀಡಿದೆ’ ಎಂದರು. 

ಒಳಮೀಸಲಾತಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಇದನ್ನು ನಾವು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಹಲವು ಸಭೆಗಳಲ್ಲೂ ಹೇಳಿದ್ದೇವೆ. ಮತ್ತು ಸಚಿವ ಸಂಪುಟ ಸಭೆಯಲ್ಲಿ ನಾವು ಒಳಮೀಸಲಾತಿ ಜಾರಿ ಮಾಡುವ ಕ್ರಮದ ಬಗ್ಗೆಯೂ ತಿಳಿಸಿದ್ದೇವೆ. ಮೀಸಲಾತಿಯನ್ನು ಹೆಚ್ಚು ಮಾಡಿ, ಎಸ್-ಸಿ ಗೆ 17%, ಎಸ್-ಟಿಗೆ 7% ಹೆಚ್ಚು ಮಾಡಿ ಇತ್ಯರ್ಥ ಮಾಡುವ ಪ್ರಯತ್ನ ಮಾಡಿದ್ದೇವೆ. ಅದಕ್ಕೆ ಸಾಮಾಜಿಕ-ಶೈಕ್ಷಣಿಕ-ಆರ್ಥಿಕ ಸಮೀಕ್ಷೆಯನ್ನ ಮಾಡಿಸಿದ್ದೇವೆ. ಎರಡು ಬಾರಿ ಸಮೀಕ್ಷೆ ಮಾಡಿಸಿದ್ದು ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಸರ್ಕಾರವೇ ಎಂದು ಹೇಳಿದರು. 

ಯಾವುದೇ ಸಮಸ್ಯೆ ಮತ್ತೆ ಬರಬಾರದು ಎನ್ನುವ ಕಾರಣಕ್ಕೆ ಎರಡನೇ ಬಾರಿಗೆ ಸಮೀಕ್ಷೆಯನ್ನು ಮಾಡಿ, ಸಮೀಕ್ಷೆಯ ವರದಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ. ಅನುಮೋದನೆಯೂ ಆಗಿದೆ. ಆದರೆ ನ್ಯಾಯಾಲಯದಲ್ಲಿ ನಿಂತಿದೆ. ಅದು ನ್ಯಾಯಾಲಯದಲ್ಲಿರುವುದರಿಂದ ನಾವು ಸದ್ಯದ ನಿರ್ಧಾರ ತೆಗೆದುಕೊಳ್ಳುವಂತಿರಲಿಲ್ಲ ಎಂದರು.  

ಅಲ್ಲದೇ ಶೆಡ್ಯೂಲ್ 9 ರಲ್ಲಿ ಸೇರಿಸಿದರೆ ಯಾವ ತಕರಾರು ಇರುವುದಿಲ್ಲ, ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಬಗ್ಗೆ ಈಗ ಮಾತನಾಡುವುದಿಲ್ಲ ಎಂದ ದಿನೇಶ್ ಗುಂಡೂರಾವ್ ಅವರು, ಒಳಮೀಸಲಾತಿಯ ಪರವಾಗಿರುವ ತೀರ್ಮಾನ ಈಗಾಗಲೇ ಆಗಿದೆ. ಈಗ ಮುಖ್ಯಮಂತ್ರಿಯವರು ಇದನ್ನ ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು, ಯಾರಿಗೂ ಅನ್ಯಾಯ ಆಗದೆ ಹಂಚಿಕೆ ಮಾಡುವ ಕಾರಣಕ್ಕೆ 27ಕ್ಕೆ ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಆ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳುತ್ತೇನೆ. ಮುಖ್ಯಮಂತ್ರಿಗಳು ಈ ವಿಚಾರಕ್ಕೆ ಯಾವ ಮಟ್ಟದ ಪ್ರಾಧ್ಯಾನ್ಯತೆ ನೀಡಿದ್ದಾರೆ ಅನ್ನುವುದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದರು. 

27ನೇ ತಾರೀಖಿನ ಸಚಿವ ಸಂಪುಟ ಸಭೆಯ ತೀರ್ಮಾನಕ್ಕೆ ನೀವೆಲ್ಲರೂ ಕಾಯಬೇಕು ಎಂದು ಹೇಳಿದರು. 

ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ 56 ಸಾವಿರ ನೇಮಕಾತಿಯನ್ನು ಒಳಮೀಸಲಾತಿ ಜಾರಿಯಾಗದೇ ಮಾಡುವುದಿಲ್ಲ ಎನ್ನುವ ಮಾತು ನೀಡಿದೆ. ರಾಜ್ಯದ ಮುಖ್ಯಮಂತ್ರಿಗಳ ಮಾತನ್ನು ನಾವು ನಂಬಬೇಕು, ಗೌರವಿಸಬೇಕು, ಕಾಯ್ದು ನೋಡೋಣ, ತಾಳ್ಮೆಯಿಂದ ಇರಿ’ ಎಂದು ಸಮುದಾಯಕ್ಕೆ ಕರೆ ಕೊಟ್ಟರು. 

ಮಾಜಿ ಸಚಿವ ಎಚ್. ಆಂಜನೇಯ ಅವರು ಮಾತನಾಡಿ, ‘ಹೋರಾಟಗಾರರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಚರ್ಚೆ ಮಾಡಿದ್ದಾರೆ. 27ಕ್ಕೆ ನಡೆಯುವ ಸಚಿವ ಸಂಪುಟದಲ್ಲಿ ನಮ್ಮ ಪಾಲು ಏನಿದೆಯೋ ಅದನ್ನು ನೀಡಲಾಗುತ್ತದೆ. ಒಳಮೀಸಲಾತಿ ಜಾರಿಯಾಗದೇ 56ಸಾವಿರ ಹುದ್ದೆಗಳನ್ನ ತುಂಬಲಾಗುವುದಿಲ್ಲ, 27ಕ್ಕೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪಾಲು ನಮಗೆ ನೀಡಬೇಕು. ಇಲ್ಲವಾದರೆ ಸರ್ಕಾರಕ್ಕೆ ಮಾದಿಗರ ಸಾವನ್ನ ಎದುರಿಸಿ ಅನ್ನುವ ಸವಾಲಿನೊಂದಿಗೆ ನಾವು ಬೀದಿಗಿಳಿಯುತ್ತೇವೆ’ ಅಂದರು. 

ಈ ವೇಳೆ ನಿಮ್ಮೆಲ್ಲರ ಹೋರಾಟದ ಫಲದಿಂದ 27ನೇ ತಾರೀಖು ಮಾದಿಗರಿಗೆ ಸ್ವಾತಂತ್ರ್ಯ ಸಿಗುತ್ತದೆ ಎಂದು ಘೋಷಣೆ ಮಾಡಿದರು. 

ಸರ್ಕಾರದ ಪರವಾಗಿ ಬಂದಿದ್ದ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ನಮ್ಮ ಸರ್ಕಾರ ಚಿತ್ರದುರ್ಗ ಸಮಾವೇಶದಲ್ಲಿ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿದೆ, ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿ ಮಾಡಲು ನಿರ್ಧಾರ ಕೈಗೊಂಡಿದ್ದೇವೆ. ಕೆಲವು ಸಮಸ್ಯೆಗಳನ್ನು ಬಗೆ ಹರಿಸಲು ಉಭಯ ಸದನದಲ್ಲಿ ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ 17%, ಪರಿಶಿಷ್ಟ ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಬೇಕೆಂದು ಕೇಳಿದ್ದೇವೆ. ಈಗ ಚೆಂಡು ಕೇಂದ್ರದ ಅಂಗಳದಲ್ಲಿದೆ. ರೋಸ್ಟರ್ ಬಿಂದು ಸಮಸ್ಯೆ ಎದುರಾಗಿದೆ. ತಾವೇ ಹೇಳಿದಂತೆ ರೋಸ್ಟರ್ ನಲ್ಲಿ ಸಮಸ್ಯೆ ಇದೆ. ಆ ಕಾರಣಕ್ಕೆ ಯಾರಿಗೂ ಅನ್ಯಾಯ ಆಗದಂತೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿ ಮಾಡಬೇಕು ಅನ್ನುವುದು ಸರ್ಕಾರದ ನಿರ್ಧಾರ. ಸಚಿವ ಸಂಪುಟ ಸಭೆಯಲ್ಲಿಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಯಾವ ಸಚಿವರೂ ಇದಕ್ಕೆ ಚಕಾರವೆತ್ತಿಲ್ಲ ಎಂದರು. 

ಮುಖ್ಯಮಂತ್ರಿಗಳು ಇಂದು ಮತ್ತೆ 27ಕ್ಕೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅದಕ್ಕಾಗಿ ನಾವೆಲ್ಲರೂ ಇಲ್ಲಿ ಬಂದಿದ್ದೇವೆ. ನಾವೆಲ್ಲಾ ನಿಮ್ಮ ಪರವಾಗೇ ಇದ್ದೇವೆ. ಇನ್ನು 15 ದಿನಗಳ ಒಳಗಾಗಿ ಒಳಮೀಸಲಾತಿ ಸಮಸ್ಯೆ ಶಾಶ್ವತವಾಗಿ ಬಗೆಹರಿಯುತ್ತೆ ಎನ್ನುವ ಭರವಸೆ ನೀಡಿದರು. 

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, 15ರಲ್ಲಿ ಒಳಮೀಸಲಾತಿ ಜಾರಿ ಮಾಡುವುದರಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಕೂಡಾ ನಾವು ಚರ್ಚೆ ಮಾಡಿದ್ದೇವೆ. ನಿಮ್ಮ ಬೇಡಿಕೆಯಂತೆ 56 ಸಾವಿರ ಹುದ್ದೆ ನೇಮಕಾತಿಯನ್ನ ನಿಮ್ಮ ಬೇಡಿಕೆಯನ್ನು ಸರಿ ಮಾಡಿಯೇ ಹುದ್ದೆಗಳನ್ನ ಭರ್ತಿ ಮಾಡುತ್ತೇವೆ. ಮುನಿಯಪ್ಪನವರು ನಿಮ್ಮ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. 27ಕ್ಕೆ ವಿಶೇಷ ಸಭೆ ಆಗುತ್ತಿದೆ. ನಿಮ್ಮ ಪರವಾಗಿ ಸಿದ್ದರಾಮಯ್ಯ ಸರ್ಕಾರ ಇದೆ. 15ದಿನಗಳು ಕಾಯ್ದರೆ ನಿಮಗೆ ಒಳ್ಳೆ ದಿನಗಳು ಬರುತ್ತವೆ ಎಂದು ಹೇಳಿದರು.  

ಈ ವೇಳೆ ಸಚಿವರಾದ ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ, ದಿನೇಶ್‌ ಗುಂಡೂರಾವ್, ಸತೀಶ್‌ ಜಾರಕಿಹೊಳಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರು ಸರ್ಕಾರದ ನಿರ್ಧಾರವನ್ನು ಪುನರುಚ್ಛರಿಸಿದರು.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮೂರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮೂರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮೂರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ,  ವೇಣುಗೋಪಾಲ್ ಮೌರ್ಯ,  ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು, ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...