Homeಮುಖಪುಟ'ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..'; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ‘ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು’. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಶುಕ್ರವಾರ ಹೇಳಿದ್ದಾರೆ.

ಮುಟ್ಟಿನ ರಜೆ ನಿಯಮಗಳನ್ನು ರಾಜ್ಯ ಸರ್ಕಾರಗಳು ರೂಪಿಸಲು ನಿರ್ದೇಶನ ಕೋರಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು, “ಇಂತಹ ಕಾನೂನು ‘ದುಡಿಯುವ ಮಹಿಳೆಯರಲ್ಲಿ ಮಾನಸಿಕ ಭಯ ಅಥವಾ ಕೀಳರಿಮೆ ಉಂಟುಮಾಡುತ್ತದೆ… ಅವರು ಪುರುಷರಿಗಿಂತ ‘ಕಡಿಮೆ’ ಎಂಬ ಭಾವನೆಯನ್ನು ಉಂಟುಮಾಡುತ್ತದೆ” ಎಂದು ಎಂದು ಅಭಿಪ್ರಾಯಪಟ್ಟರು.

“ಈ ಬಗ್ಗೆ ಜಾಗೃತಿ ಮತ್ತು ಸಂವೇದನೆ ಮೂಡಿಸುವುದು ಬೇರೆ. ಆದರೆ, ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತಂದ ತಕ್ಷಣ, ಯಾರೂ ಅವರನ್ನು ನೇಮಿಸಿಕೊಳ್ಳುವುದಿಲ್ಲ, ನಿಮಗೆ ಉದ್ಯೋಗದಾತರ ಮನಸ್ಥಿತಿ ತಿಳಿದಿಲ್ಲ. ನಾವು ಅಂತಹ ಕಾನೂನನ್ನು ಜಾರಿಗೊಳಿಸಿದರೆ ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ” ಎಂದು ಅವರು ಅರ್ಜಿದಾರರಿಗೆ ಎಚ್ಚರಿಸಿದರು.

ನಿರ್ದಿಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿನಿಯರಾಗಿರಲಿ ಅಥವಾ ಕೆಲಸ ಮಾಡುವ ವೃತ್ತಿಪರರಾಗಿರಲಿ, ಮುಟ್ಟಿನ ಸಮಯದಲ್ಲಿ ರಜೆ ನೀಡುವುದನ್ನು ಖಚಿತಪಡಿಸಬೇಕು ಎಂದು ಅರ್ಜಿದಾರರು ಬಯಸಿದ್ದರು. ಆದರೆ, ಅಂತಹ ಮನವಿಗಳು “ಭಯವನ್ನು ಸೃಷ್ಟಿಸಲು ಮಾಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಘೋಷಿಸಿದರು.

“ಉದ್ಯೋಗದಾತರು ಮಹಿಳೆಯರನ್ನು ಕೀಳಾಗಿ ನೋಡುತ್ತಾರೆ, ಮುಟ್ಟು ಅವರಿಗೆ ‘ಕೆಟ್ಟ’ ಸಂಗತಿಯಾಗಿದೆ” ಎಂದು ಎಂದು ಹೇಳಿದರು. 

ಈ ವೇಳೆ ಕೇರಳ ಸರ್ಕಾರದ ನಿರ್ಧಾರವನ್ನು ನೆನಪಿಸಿದ ಹಿರಿಯ ವಕೀಲ ಎಂ.ಆರ್. ಶಂಶಾದ್, “2013 ರಲ್ಲಿ ಕೇರಳ ಸರ್ಕಾರವು ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆಯನ್ನು ಮಂಜೂರು ಮಾಡಿತ್ತು” ಎಂಬುದನ್ನು ನೆನಪಿಸಿದರು. ಆಗ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಈ ನಿರ್ಧಾರವು ಲಿಂಗ ನ್ಯಾಯಯುತ ಸಮಾಜವನ್ನು ಸಾಕಾರಗೊಳಿಸುವ ಬದ್ಧತೆಯ ಭಾಗವಾಗಿದೆ” ಎಂದು ಹೇಳಿದ್ದರು ಎಂದರು.

“ಖಾಸಗಿ ಕಂಪನಿಗಳು ಇದೇ ರೀತಿಯ ಸಡಿಲಿಕೆಗಳನ್ನು ನೀಡಿವೆ” ಎಂದು ಶಂಶಾದ್ ಗಮನಸೆಳೆದರು.

ಆದರೆ, “ಇವು ಸ್ವಯಂಪ್ರೇರಿತ ಕ್ರಮಗಳು” ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು. “ನೀವು ಕಾನೂನಿನಲ್ಲಿ ಕಡ್ಡಾಯ ಎಂದು ಹೇಳಿದ ತಕ್ಷಣ, ಯಾರೂ ಅವರಿಗೆ ಉದ್ಯೋಗ ನೀಡುವುದಿಲ್ಲ, ಯಾರೂ ಅವರನ್ನು ನ್ಯಾಯಾಂಗ ಅಥವಾ ಸರ್ಕಾರಿ ಉದ್ಯೋಗಗಳಲ್ಲಿ ತೆಗೆದುಕೊಳ್ಳುವುದಿಲ್ಲ. ವೃತ್ತಿಜೀವನ ಮುಗಿದಿದೆ, ‘ನೀವು ಮನೆಯಲ್ಲಿಯೇ ಕುಳಿತುಕೊಳ್ಳಿ…’ ಎಂದು ಅವರು ಹೇಳುತ್ತಾರೆ” ಎಂದರು. 

ಜನವರಿಯಲ್ಲಿ ಸುಪ್ರೀಂ ಕೋರ್ಟ್ ಮುಟ್ಟಿನ ನೈರ್ಮಲ್ಯದ ಬಗ್ಗೆ ನಿರ್ಣಾಯಕ ತೀರ್ಪು ನೀಡಿತು. ಅದು ‘ಹೆಣ್ಣು ಮಗುವಿನ ಜೀವನ, ಘನತೆ, ಆರೋಗ್ಯ ಮತ್ತು ಶಿಕ್ಷಣದ ಹಕ್ಕಿನ ಅವಿಭಾಜ್ಯ ಅಂಗ’ ಎಂದು ಹೇಳಿತ್ತು. 

ಸಂವಿಧಾನದ 21ನೇ ವಿಧಿಯಡಿಯಲ್ಲಿ ಹುಡುಗಿಯರು ಮತ್ತು ಮಹಿಳೆಯರ ಆರೋಗ್ಯದ ಹಕ್ಕನ್ನು ರಕ್ಷಿಸಲು ಸರ್ಕಾರಗಳು ಸಕಾರಾತ್ಮಕ ಬಾಧ್ಯತೆಯನ್ನು ಹೊಂದಿವೆ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠ ಹೇಳಿದ್ದಲ್ಲದೆ. ಉಚಿತ ಸ್ಯಾನಿಟರಿ ನ್ಯಾಪ್ಕಿನ್‌ಗಳು, ಕ್ರಿಯಾತ್ಮಕ ಲಿಂಗ-ಪ್ರತ್ಯೇಕ ಶೌಚಾಲಯಗಳು ಮತ್ತು ಮುಟ್ಟಿನ ಆರೋಗ್ಯ ಜಾಗೃತಿ ಅಭಿಯಾನಗಳನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಎಲ್ಲಾ ಸರ್ಕಾರಗಳಿಗೆ ಕಡ್ಡಾಯ ನಿರ್ದೇಶನಗಳನ್ನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...