Homeಕರ್ನಾಟಕಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

- Advertisement -
- Advertisement -

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ ಇಲ್ಲ, ಎಲ್‌ಪಿಜಿ ಒದಗಿಸುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತಲೇ ಬಂದಿರುವ ಸರ್ಕಾರಗಳು ಸಹ ಸಮಸ್ಯೆಯನ್ನು ಮುಚ್ಚಿಡುವಲ್ಲಿ ಸೋತಿವೆ. 

ಇದೀಗ ಮುಂದಿನ ಏಳರಿಂದ ಹತ್ತು ದಿನಗಳವರೆಗೆ ವಿದ್ಯುತ್ ಅಥವಾ ಇಂಡಕ್ಷನ್ ಸ್ಟೌವ್‌ಗಳನ್ನು ಬಳಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ​​ಮುನಿಯಪ್ಪ ಶುಕ್ರವಾರ ಹೋಟೆಲ್ ಮಾಲೀಕರಿಗೆ ಮನವಿ ಮಾಡಿದ್ದಾರೆ. 

ವಿಧಾನ ಪರಿಷತ್ತಿನಲ್ಲಿ ಎಲ್‌ಪಿಜಿ ಕೊರತೆ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿದ ಮುನಿಯಪ್ಪ, ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಪೂರೈಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. “ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಆದ್ಯತೆಯ ಮೇರೆಗೆ ವಿತರಿಸಲಾಗುತ್ತಿದೆ. ಅವರ ಮೆನುವನ್ನು ನಿರ್ಬಂಧಿಸಲು ನಾವು ಅವರನ್ನು ಕೇಳಿದ್ದೇವೆ. ತೈಲ ಕಂಪನಿಗಳು ತಮ್ಮ ಸ್ಟಾಕ್ ಸೀಮಿತವಾಗಿದೆ ಎಂದು ನಮಗೆ ತಿಳಿಸಿವೆ” ಎಂದು ಸಚಿವರು ಹೇಳಿದ್ದಾರೆ. 

ಅನಿಲ ತುಂಬಿದ ಎರಡು ಹಡಗುಗಳು ಭಾರತಕ್ಕೆ ಬಂದಿವೆ ಎಂದು ಒಪ್ಪಿಕೊಂಡ ಮುನಿಯಪ್ಪ, ಹಾರ್ಮುಜ್ ಜಲಸಂಧಿಯಲ್ಲಿ ಇನ್ನೂ 10-12 ಹಡಗುಗಳು ಸಿಕ್ಕಿಹಾಕಿಕೊಂಡಿವೆ ಎಂದು ಹೇಳಿದ್ದಾರೆ “ಅವು ನಮ್ಮ ತೀರವನ್ನು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ, ನಾವು ನಮ್ಮಲ್ಲಿರುವದನ್ನು ನಿಭಾಯಿಸಬೇಕು” ಎಂದು ಮನವಿ ಮಾಡಿದ್ದಾರೆ. 

ಆಟೋ ಎಲ್‌ಪಿಜಿ ಕುರಿತ ಕಳವಳಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಇಂಧನದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ತೈಲ ಕಂಪನಿಗಳನ್ನು ಕೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...