Homeಮುಖಪುಟಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

- Advertisement -
- Advertisement -

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ.

ಫೆಬ್ರವರಿ 27ರಂದು ನೀಡಿದ ಆದೇಶದಲ್ಲಿ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಸಿದ್ಧಾರ್ಥ್ ನಂದನ್ ಅವರಿದ್ದ ಪೀಠವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಜಿಲ್ಲಾಧಿಕಾರಿ (ಡಿಸಿ) ಕಾನೂನು ಸುವ್ಯವಸ್ಥೆ ಸಮಸ್ಯೆಯ ನೆಪವೊಡ್ಡಿ ಜನರ ಸಂಖ್ಯೆಯನ್ನು ಸೀಮಿತಗೊಳಿಸಲು ಮುಂದಾದರೆ, ಅವರಿಗೆ ಕಾನೂನಿನ ಆಳ್ವಿಕೆಯನ್ನು ಜಾರಿಗೊಳಿಸಲು ಸಾಧ್ಯವಾಗದಿದ್ದಲ್ಲಿ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ವರ್ಗಾವಣೆ ಪಡೆಯಬೇಕು ಎಂದು ತೀಕ್ಷ್ಣವಾಗಿ ಹೇಳಿದೆ.

“ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಆತಂಕದಿಂದಾಗಿ ಮಸೀದಿಯಲ್ಲಿ ಜನರ ಸಂಖ್ಯೆಯನ್ನು ನಿರ್ಬಂಧಿಸುವ ಆದೇಶವನ್ನು ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. ಈ ವಾದವನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ. ಯಾವುದೇ ಸಂದರ್ಭದಲ್ಲೂ ಕಾನೂನಿನ ಆಳ್ವಿಕೆ ಜಾರಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“ಸ್ಥಳೀಯ ಅಧಿಕಾರಿಗಳು, ಅಂದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಜಿಲ್ಲಾಧಿಕಾರಿ (ಡಿಸಿ) ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಉಂಟಾಗಬಹುದು ಎಂಬ ಕಾರಣ ನೀಡಿ ಮಸೀದಿಯಲ್ಲಿ ಜನರ ಸಂಖ್ಯೆಯನ್ನು ಸೀಮಿತಗೊಳಿಸಲು ಬಯಸಿದರೆ; ಅವರು ಕಾನೂನಿನ ಆಳ್ವಿಕೆಯನ್ನು ಜಾರಿಗೊಳಿಸಲು ತಾವು ಅಸಮರ್ಥರು ಎಂದು ಭಾವಿಸಿದ್ದಲ್ಲಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಸಂಭಾಲ್ ಜಿಲ್ಲೆಯಿಂದ ಹೊರಗೆ ವರ್ಗಾವಣೆ ಪಡೆಯಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪ್ರತಿಯೊಂದು ಸಮುದಾಯವು ತಮಗಾಗಿ ನಿಗದಿಪಡಿಸಿದ ಆರಾಧನಾ ಸ್ಥಳಗಳಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಸುವುದನ್ನು ಖಚಿತಪಡಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಂದು ವೇಳೆ ಅದು ಖಾಸಗಿ ಆಸ್ತಿಯಾಗಿದ್ದರೆ, ನ್ಯಾಯಾಲಯವು ಈಗಾಗಲೇ ತಿಳಿಸಿರುವಂತೆ, ಸರ್ಕಾರದ ಯಾವುದೇ ಅನುಮತಿಯಿಲ್ಲದೆ ಅಲ್ಲಿ ಆರಾಧನೆ ಮಾಡುವ ಹಕ್ಕು ಅವರಿಗೆ ಇರುತ್ತದೆ” ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಸಂಭಾಲ್ ಜಿಲ್ಲೆಯ ಸರ್ವೆ ನಂಬರ್ 291ರಲ್ಲಿ ಮಸೀದಿ ಇದ್ದು, ರಂಝಾನ್‌ ತಿಂಗಳಲ್ಲಿ ಅಲ್ಲಿ ಪ್ರಾರ್ಥನೆ ಮಾಡದಂತೆ ನಮ್ಮನ್ನು ತಡೆಯಲಾಗುತ್ತಿದೆ ಎಂದು ಆರೋಪಿಸಿ ಮುನಾಝಿರ್ ಖಾನ್ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಮೇಲಿನ ಅವಲೋಕನಗಳನ್ನು ಮಾಡಿದೆ.

ಅರ್ಜಿದಾರ ಮುನಾಝಿರ್ ಪ್ರಕಾರ, ರಂಝಾನ್ ತಿಂಗಳಲ್ಲಿ ಮಸೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಆದರೆ, ಸ್ಥಳೀಯಾಡಳಿತ ಕೇವಲ 20 ಜನರಿಗೆ ಮಾತ್ರ ಮಸೀದಿಯಲ್ಲಿ ನಮಾಝ್ ಮಾಡಲು ಅನುಮತಿ ನೀಡಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮಸೀದಿಯಲ್ಲಿ ಜನರ ಸಂಖ್ಯೆಯ ಮೇಲೆ ಮಿತಿಯನ್ನು ಹೇರಲಾಗಿದೆ ಎಂದು ತಿಳಿಸುವ ಮೂಲಕ ಸರ್ಕಾರವು ತನ್ನ ನಿರ್ಬಂಧವನ್ನು ಸಮರ್ಥಿಸಿಕೊಂಡಿದೆ.

ಆದರೆ, ಆಡಳಿತದ ಸಮರ್ಥನೆಯನ್ನು ನ್ಯಾಯಪೀಠ ತಿರಸ್ಕರಿಸಿದ್ದು, ಎಲ್ಲಾ ಸಂದರ್ಭಗಳಲ್ಲೂ ಕಾನೂನಿನ ಆಳ್ವಿಕೆ ಜಾರಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವುದು ಮತ್ತು ಪ್ರತಿಯೊಂದು ಸಮುದಾಯವು ಶಾಂತಿಯುತವಾಗಿ ತನ್ನ ಧರ್ಮವನ್ನು ಪಾಲಿಸಲು ಅವಕಾಶ ಮಾಡಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಒತ್ತಿಹೇಳಿದೆ.

ಧಾರ್ಮಿಕ ಚಟುವಟಿಕೆಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆದಾಗ ಅಥವಾ ಅವು ಸಾರ್ವಜನಿಕ ಆಸ್ತಿಗೆ ವ್ಯಾಪಿಸಿದಾಗ ಮಾತ್ರ ಸರ್ಕಾರದ ಅನುಮತಿಯ ಅಗತ್ಯವಿರುತ್ತದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಆಸ್ತಿಯ ಕುರಿತಾದ ಅರ್ಜಿದಾರರ ಹಕ್ಕನ್ನು ಸರ್ಕಾರವು ಆಕ್ಷೇಪಿಸಿದೆ. ಕಂದಾಯ ದಾಖಲೆಗಳ ಪ್ರಕಾರ ಆ ಜಮೀನು ಸುಖಿ ಸಿಂಗ್ ಅವರ ಪುತ್ರರಾದ ಮೋಹನ್ ಸಿಂಗ್ ಮತ್ತು ಭೂರಜ್ ಸಿಂಗ್ ಅವರ ಹೆಸರಿನಲ್ಲಿದೆ ಎಂದು ಸರ್ಕಾರ ತಿಳಿಸಿದೆ. ಅಷ್ಟೇ ಅಲ್ಲದೆ, ನಮಾಝ್ ಮಾಡಲು ಉದ್ದೇಶಿಸಿರುವ ಸ್ಥಳದಲ್ಲಿ ಮಸೀದಿ ಅಥವಾ ಆರಾಧನಾ ಕೇಂದ್ರ ಇರುವುದನ್ನು ಸಾಬೀತುಪಡಿಸುವ ಯಾವುದೇ ಫೋಟೋಗಳನ್ನು ಅರ್ಜಿದಾರರು ಈವರೆಗೆ ಸಲ್ಲಿಸಿಲ್ಲ ಎಂಬ ಅಂಶವನ್ನೂ ನ್ಯಾಯಾಲಯದ ನ್ಯಾಯಾಲಯದ ಗಮನಕ್ಕೆ ತಂದಿತ್ತು.

ಜಾಗಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ಕಂದಾಯ ದಾಖಲೆಗಳನ್ನು ಒದಗಿಸಲು ಅರ್ಜಿದಾರರು ಕಾಲಾವಕಾಶ ಕೋರಿದ್ದಾರೆ. ಇದೇ ವೇಳೆ ಹೆಚ್ಚಿನ ಮಾಹಿತಿ ಪಡೆಯಲು ಸರ್ಕಾರ ಕೂಡ ಕಾಲಾವಕಾಶ ಕೋರಿದೆ.

ನ್ಯಾಯಾಲಯ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಿದೆ.

Courtesy :livelaw.in


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...