Homeಕರ್ನಾಟಕವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

- Advertisement -
- Advertisement -

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು ಪತ್ರಿಕಾಗೋಷ್ಠಿ ನಡೆಸಿದರು.

ಕಳೆದ 35 ವರ್ಷಗಳಿಂದ ಒಳಮೀಸಲಾತಿ ಜಾರಿ ಮಾಡಲು ಆಗ್ರಹಿಸಿ ನಿರಂತರವಾಗಿ ಹಲವು ರೀತಿಯ ಹೋರಾಟಗಳನ್ನು ಮಾಡುತ್ತಿದ್ದು, ನಮ್ಮ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಪರವಾಗಿ ತೀರ್ಪು ನೀಡಿತ್ತು. ತೀರ್ಪು ಬಂದು ಎರಡು ವರ್ಷಗಳಾದರೂ ಸಮಗ್ರವಾಗಿ ಒಳಮಿಸಲಾತಿ ಜಾರಿಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಲದೇ 56,432 ಹುದ್ದೆಗಳನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ 12 ಮಾರ್ಚ್‌ ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಹೋರಾಟದ ನಿಯೋಗವನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಹುದ್ದೆಯನ್ನು ಒಳಮೀಸಲಾತಿ ಇಲ್ಲದೆಯೇ ಭರ್ತಿ ಮಾಡುವುದಿಲ್ಲ ಎಂದು ಆಶ್ವಾಸನೆ ನೀಡಿದ್ದರು. 13ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯರನ್ನು ಭೇಟಿ ಮಾಡಿದ ಹೋರಾಟಗಾರರ ನಿಯೋಗ DPAR ಸುತ್ತೋಲೆ, ರಾಜ್ಯಪಾಲರಿಂದ ಸಹಿಯಾದ ಕಾಯ್ದೆಯ ರಾಜ್ಯಪತ್ರ ಹೊರಡಿಸಲು ನಿಧಾನಗತಿ ಧೋರಣೆ ಅನುಸರಿಸುತ್ತಿರುವ ಕುರಿತು ಚರ್ಚಿಸಿದಾಗ, ಕೂಡಲೇ ರಾಜ್ಯಪತ್ರವನ್ನು ಹೊರಡಿಸುವುದಾಗಿ ನಿಯೋಗಕ್ಕೆ ತಿಳಿಸಿದರು ಎಂದು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ವಿವರಿಸಿದರು.

ಮಾರ್ಚ್‌ 27ರಂದು ನಡೆಯುವ ವಿಶೇಷ ಸಚಿವ ಸಂಪುಟವು ಒಳಮೀಸಲಾತಿ ಪರವಾದ ತೀರ್ಮಾನವನ್ನು ತೆಗೆದುಕೊಳ್ಳಲು ಎಲ್ಲಾ ಸಮುದಾಯಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಒಳಮೀಸಲಾತಿ ಅಲ್ಲದೆಯೇ ಅಸ್ಪೃಷ್ಯ ಸಮುದಾಯಗಳ ಜ್ವಲಂತ ಸಮಸ್ಯೆಗಳಾದ ಭೂಮಿ ಹಕ್ಕು, ದೌರ್ಜನ್ಯ ತಡೆ, SCSP-TSP ಅನುದಾನದಲ್ಲಿ ಅನ್ಯಾಯದ ವಿರುದ್ದ ಸಂಘಟಿರಾಗಿ ಹೋರಾಟ ನಡೆಸುವ ಅನಿವಾರ್ಯ ಇದೆ. ಹಾಗಾಗಿ ರೋಸ್ಟರ್‌ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಕೂತು ಬಗೆಹರಿಸಿಕೊಂಡು ಒಳಮೀಸಲಾತಿಯನ್ನು ಜಾರಿಮಾಡಿಕೊಳ್ಳೋಣ ಎಂದು ಮನವಿ ಮಾಡಿದರು.

ಒಳಮೀಸಲಾತಿ ಹೋರಾಟ ಸಾಮಾಜಿಕ ನ್ಯಾಯದ ಹೋರಾಟವಾದ್ದರಿಂದ ಇದು ಯಾವುದೇ ಸಮುದಾಯದ ವಿರುದ್ಧದ ಹೋರಾಟ ಎಂದು ಯಾರೂ ಭಾವಿಸಬಾರದು ಎಂದೂ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಅಂಬಣ್ಣ ಅರೋಲಿಕರ್‌ ರವರು “27ರಂದು ಒಳಮೀಸಲಾತಿಯನ್ನು ಎಲ್ಲಾ ಹಂತಗಳಲ್ಲೂ ಅನ್ವಯಿಸಿ ಆದೇಶ ಹೊರಡಿಸದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರವಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಳಮೀಸಲಾತಿ ಹೋರಾಟಗಾರರು ಸರ್ಕಾರಕ್ಕೆ ಎಲ್ಲಾ ರೀತಿಯಲ್ಲೂ ಎದುರುಗೊಳ್ಳುತ್ತೇವೆ. ಸಮುದಾಯದ ಭಾವನೆಗೆ ಬೆಲೆ ಕೊಟ್ಟು ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ” ಎಂದು ಆಗ್ರಹಿಸಿದರು.

ಮತ್ತೊಬ್ಬ ಹಿರಿಯ ಒಳಮೀಸಲಾತಿ ಹೋರಾಟಗಾರರಾದ ಬಿ. ನರಸಪ್ಪ ಮಾತನಾಡಿ, “ಒಳಮೀಸಲಾತಿ ಹೋರಾಟವನ್ನು ಸರ್ಕಾರ ಕಡೆಗಣಿಸಿದ ಪಕ್ಷದಲ್ಲಿ ಸರ್ಕಾರ ತನ್ನ ಅಂತ್ಯವನ್ನು ಕಾಣಲಿದೆ” ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾರಸಂದ್ರ ಮುನಿಯಪ್ಪ, ಅಂಬಣ್ಣ ಅರೋಲಿಕರ್‌, ಬಿ ನರಸಪ್ಪ, ಎಂ ಗುರುಮೂರ್ತಿ, ಫರ್ನಾಂಡಿಸ್‌ ಇಪ್ಪಳಗಾಂವ್‌, ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...