Homeಮುಖಪುಟಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ 'ಇರಾನ್‌ಗೆ ಹೋಗಿ' ಎಂದ ಪೊಲೀಸ್‌ ಅಧಿಕಾರಿ :...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಮಾ.13) ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸಂಭಾಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಒ) ಕುಲದೀಪ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಕೆಲವರು ‘ಅತಿಯಾದ ಕಾಳಜಿ’ ಹೊಂದಿರುವಂತೆ ಕಾಣಿಸುತ್ತಿದೆ ಎಂದು ಕುಮಾರ್ ಹೇಳಿದ್ದಾರೆ. ಅಲ್ಲದೆ, ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗುವುದು, ಪ್ರತಿಭಟನೆಗಳನ್ನು ಸಂಘಟಿಸುವುದು ಅಥವಾ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಅಂತಹವರ ವಿರುದ್ಧ ಕಠಿಣ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಮುಂದುವರಿದು, ಅಂತಾರಾಷ್ಟ್ರೀಯ ಸಂಘರ್ಷಗಳು ಸ್ಥಳೀಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರಬಾರದು ಎಂದು ಕುಮಾರ್ ಹೇಳಿದ್ದಾರೆ.

ಇಲ್ಲಿ ಕೆಲವರು ಇರಾನ್-ಇಸ್ರೇಲ್ ಯುದ್ಧದ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಾ, ಅದರ ಬಗ್ಗೆ ಎದೆ ಬಡಿದುಕೊಳ್ಳುತ್ತಿದ್ದಾರೆ, ಅವರು ವಿಮಾನ ಹತ್ತಿ ಇರಾನ್‌ಗೆ ಹೋಗಲಿ. ಅಂತಹ ವಿಷಯಗಳನ್ನು ಸರ್ಕಾರಗಳು ನಿರ್ವಹಿಸಬೇಕೇ ಹೊರತು ಸ್ಥಳೀಯ ನಾಗರಿಕರಲ್ಲ ಎಂದಿದ್ದಾರೆ.

ಯುದ್ಧದ ಯಾವುದೇ ಒಂದು ಪಕ್ಷವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುವುದು, ವಿಷಯಕ್ಕೆ ಸಂಬಂಧಿಸಿದ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಪ್ರದರ್ಶಿಸುವುದು ಮತ್ತು ಈದ್ ಪ್ರಾರ್ಥನೆಯ ಸಮಯದಲ್ಲಿ ಅಡಚಣೆ ಉಂಟುಮಾಡುವುದು ಕಟ್ಟುನಿಟ್ಟಾದ ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ಕುಮಾರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಮತ್ತೊಂದು ವೈರಲ್ ವಿಡಿಯೋ ಪ್ರಕಾರ, ಮಸೀದಿಗಳಲ್ಲಿ ಸ್ಥಳದ ಕೊರತೆಯಿದೆ ಎಂಬ ಕಾರಣಕ್ಕೆ ರಸ್ತೆಗಳ ಮೇಲೆ ನಮಾಝ್ ಮಾಡಿದರೆ, ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುವುದಾಗಿ ಕುಮಾರ್ ಎಚ್ಚರಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮಸೀದಿಯಲ್ಲಿ ಸ್ಥಳವಿಲ್ಲದಿದ್ದಾಗ ಪ್ರಾರ್ಥನೆ ಮಾಡುವವರು ಧಾವಿಸಿ ರಸ್ತೆಯ ಮೇಲೆ ನಮಾಝ್ ಮಾಡಲು ಶುರು ಮಾಡುತ್ತಾರೆ. ಹೀಗಾದರೆ, ನಾವು ಒಂದು ನಿಮಿಷದವರೆಗೆ ಏನನ್ನೂ ಹೇಳುವುದಿಲ್ಲ, ಆನಂತರ ಅವರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತೇವೆ. ಯಾರಾದರೂ ಇರಾನ್-ಇಸ್ರೇಲ್ ಯುದ್ಧಕ್ಕೆ ಬೆಂಬಲ ಸೂಚಿಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ, ಅವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ನಾವು ಹಿಂದುಸ್ತಾನಿಗಳು. ನಾವು ಭಾರತೀಯರು. ಅಂತಾರಾಷ್ಟ್ರೀಯ ವಿಷಯಗಳನ್ನು ಸರ್ಕಾರಗಳು ನಿಭಾಯಿಸಬೇಕು. ಒಂದು ವೇಳೆ ಬೇರೆ ದೇಶದ ವಿವಾದಗಳು ನಮ್ಮ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಪೊಲೀಸರು ಅಂತಹವರಿಗೆ ‘ಅತಿ ಉತ್ತಮ ಚಿಕಿತ್ಸೆ’ (ಕಠಿಣ ಕ್ರಮ) ನೀಡುತ್ತಾರೆ ಎಂದು ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಯುದ್ಧದ ಬಗ್ಗೆ ವೈರಲ್ ರೀಲ್ಸ್‌ಗಳನ್ನು ಮಾಡುವ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೂಡ ಅಧಿಕಾರಿ ಟೀಕಿಸಿದ್ದು, ಆನ್‌ಲೈನ್‌ನಲ್ಲಿ ವದಂತಿಗಳನ್ನು ಅಥವಾ ಪ್ರಚೋದನಕಾರಿ ವಿಷಯಗಳನ್ನು ಹರಡುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ ಓವೈಸಿ

ಸರ್ಕಲ್ ಇನ್‌ಸ್ಪೆಕ್ಟರ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ತಡೆಯಲು ಅಥವಾ ಬೆದರಿಕೆ ಹಾಕಲು ಅಧಿಕಾರಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಈ ದೇಶವು ಇನ್‌ಸ್ಪೆಕ್ಟರ್ ಕುಲದೀಪ್ ಕುಮಾರ್ ಅವರ ತಂದೆಯದ್ದಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಸ್ರೇಲ್ ಪರ ರ್‍ಯಾಲಿಗಳನ್ನು ಬೆಂಬಲಿಸುವ ಮೂಲಕ ಇರಾನ್ ಸಂಘರ್ಷದ ಬಗ್ಗೆ ಪ್ರತಿಭಟಿಸುವ ಮುಸ್ಲಿಮರಿಗೆ ಬೆದರಿಕೆ ಹಾಕುವ ಮೂಲಕ ಅಧಿಕಾರಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು, ಶಾಂತಿ ಕಾಪಾಡುವ ಹೆಸರಿನಲ್ಲಿ ಜನರನ್ನು ಭಯಭೀತಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಮಾತುಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾಷೆಯಂತೆ ಕೇಳಿಸುತ್ತಿವೆ ಎಂದು ಓವೈಸಿ ಟೀಕಿಸಿದ್ದಾರೆ.

ಇಮ್ರಾನ್‌ ಪ್ರತಾಪ್‌ಗಢ ಟೀಕೆ

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಢ ಅವರು ಸಂಭಾಲ್ ಪೊಲೀಸರ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ನಮಾಝ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ ಅಧಿಕಾರಿಯನ್ನು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಭಾಷೆ ‘ಸ್ವೀಕಾರ್ಹವಲ್ಲ’ ಎಂದು ಎಂದಿರುವ ಇಮ್ರಾನ್, ನಾಗರಿಕರ ಹಕ್ಕುಗಳಿಗೆ ಸಂವಿಧಾನವು ನೀಡಿರುವ ರಕ್ಷಣೆಯ ಬಗ್ಗೆ ಅಧಿಕಾರಿಗಳಿಗೆ ನೆನಪಿಸುವಂತೆ ಒತ್ತಾಯಿಸಿದ್ದಾರೆ.

ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವವರು ಎಲ್ಲಿಗೆ ಹೋಗಬೇಕು? ಎಂದು ಇಮ್ರಾನ್ ಪ್ರಶ್ನಿಸಿದ್ದಾರೆ. ಇದು ಜವಾಬ್ದಾರಿಯುತ ಭಾಷೆಯಲ್ಲ. ಶಾಂತಿ ಸಮಿತಿ ಸಭೆಯು ಶಾಂತಿ ಮತ್ತು ಭ್ರಾತೃತ್ವದ ಮೇಲೆ ಗಮನ ಹರಿಸಬೇಕೇ ಹೊರತು, ಬೆದರಿಕೆಗಳ ಮೇಲಲ್ಲ ಎಂದಿದ್ದಾರೆ.

ಇದಾದ ಬೆನ್ನಲ್ಲೇ, ಎಐಎಂಐಎಂ ಉತ್ತರ ಪ್ರದೇಶದ ರಾಜ್ಯಾಧ್ಯಕ್ಷ ಶೌಕತ್ ಅಲಿ ಅವರು ಕೂಡ ಅಧಿಕಾರಿಯ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದ್ದು, ಶಾಂತಿ ಕಾಪಾಡುವ ನೆಪದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೌಕತ್ ಅಲಿ ಅವರು ಸಭೆಯಲ್ಲಿ ಬಳಸಲಾದ ಭಾಷೆಯು ಮುಸ್ಲಿಂ ಸಮುದಾಯವನ್ನು ಬೆದರಿಸುವಂತಿದೆ ಎಂದು ಆರೋಪಿಸಿರುವ ಅವರು, ಅಧಿಕಾರಿಗಳು ಶಾಂತಿ ಕಾಪಾಡುವ ಬದಲು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ನಾವು ಅಸಂವಿಧಾನಿಕವಾಗಿ ಏನಾದರೂ ಮಾಡಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ. ಆದರೆ ನೀವು ಶಾಂತಿ ಸಮಿತಿ ಸಭೆಯಲ್ಲಿ ಕುಳಿತು ಮುಸ್ಲಿಮರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಹೇಳಿದ್ದಾರೆ. ಅಧಿಕಾರಿಯ ಈ ಮಾತುಗಳು ಕಾನೂನು ಜಾರಿ ಅಧಿಕಾರಿಗಳಿಂದ ನಿರೀಕ್ಷಿಸಲಾದ ಸಂವಿಧಾನಬದ್ಧ ಪ್ರಮಾಣ ವಚನವನ್ನು ಪ್ರತಿಬಿಂಬಿಸುವುದಿಲ್ಲ ಎಂದಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...