Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...