- Advertisement -
- Advertisement -
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ.
ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ ಹೇಳಿಕೆ ನೀಡಿದೆ. ಇರಾನ್‌ನ ಅಧಿಕೃತ ಸುದ್ದಿ ಸಂಸ್ಥೆಯಾದ Sepah News ನಲ್ಲಿ ಐಆರ್‌ಜಿಸಿ ಈ ಹೇಳಿಕೆಯನ್ನು ಪ್ರಕಟಿಸಿದೆ.
ನೆತನ್ಯಾಹು ಅವರನ್ನು ‘ಮಕ್ಕಳ ಹಂತಕ’ ಎಂದು ಕರೆದಿರುವ ಐಆರ್‌ಜಿಸಿ “ಒಂದು ವೇಳೆ ಆತ ಇನ್ನೂ ಬದುಕಿದ್ದರೆ, ನಾವು ಆತನನ್ನು ಪೂರ್ಣ ಶಕ್ತಿಯೊಂದಿಗೆ ಹುಡುಕಿ ಹತ್ಯೆ ಮಾಡುತ್ತೇವೆ” ಎಂದು ಎಚ್ಚರಿಕೆ ಹೇಳಿದೆ.
ನೆತನ್ಯಾಹು ಅವರು ಇರಾನ್ ದಾಳಿಯಲ್ಲಿ ಹತ್ಯೆಗೀಡಾಗಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದವು. ಇದನ್ನು ಇಸ್ರೇಲ್ ಪ್ರಧಾನಿ ಕಚೇರಿಯು ತಳ್ಳಿ ಹಾಕಿದ್ದು, ನೆತನ್ಯಾಹು ಕ್ಷೇಮವಾಗಿದ್ದಾರೆ ಎಂದು ಭಾನುವಾರ ಸ್ಪಷ್ಟಪಡಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿಐಆರ್‌ಜಿಸಿ ಈ ನೇರ ಬೆದರಿಕೆಯನ್ನು ಹಾಕಿದೆ.


