Homeಮುಖಪುಟವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

- Advertisement -
- Advertisement -

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. 

ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ ಎಂದರೂ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ದೂರುಗಳಿಂದಾಗಿ ಅನೇಕರು ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ತೀವ್ರವಾಗಿ ಖಂಡಿಸುತ್ತಿದ್ದಾರೆ.

ಗಾಯಕಿ ಚಿನ್ಮಯಿ ಶ್ರೀಪಾದ ಸೇರಿದಂತೆ ಹಲವು ಕಲಾವಿದರು ಈ ಪ್ರಶಸ್ತಿ ಆಯ್ಕೆಯ ವಿರುದ್ಧ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ನಿರ್ಧಾರವು ವೈರಮುತ್ತು ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ನೋವುಗಳನ್ನು ಕಡೆಗಣಿಸಿದಂತಾಗುತ್ತದೆ ಮತ್ತು ಅವರಂತಹ ವ್ಯಕ್ತಿಗೆ ಮತ್ತಷ್ಟು ಸಾಮಾಜಿಕ ಮಾನ್ಯತೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಜ್ಞಾನಪೀಠ ಎಂಬ ಸಾಹಿತ್ಯಿಕ ಸಂಸ್ಥೆಯು 2026ರ ಮಾರ್ಚ್ 14ರಂದು 2025ನೇ ಸಾಲಿನ (60ನೇ ವರ್ಷದ) ಜ್ಞಾನಪೀಠ ಪ್ರಶಸ್ತಿಯನ್ನು ವೈರಮುತ್ತು ಅವರಿಗೆ ಘೋಷಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯನ್ನು 1944ರಲ್ಲಿ ಉದ್ಯಮಿ ಸಾಹು ಶಾಂತಿ ಪ್ರಸಾದ್ ಜೈನ್ ಅವರು ಸ್ಥಾಪಿಸಿದರು.

1964ರಿಂದ ಪ್ರತಿ ವರ್ಷದ ಜ್ಞಾನಪೀಠ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಿಗೆ ನೀಡಿದ ಕೊಡುಗೆಗಾಗಿ ಸಾಹಿತಿಗಳಿಗೆ ನೀಡಲಾಗುತ್ತಿದೆ. ಇದನ್ನು ಭಾರತೀಯ ಸಾಹಿತ್ಯದ ಅತ್ಯಂತ ಪ್ರತಿಷ್ಠಿತ ಗೌರವವೆಂದು ಪರಿಗಣಿಸಲಾಗಿದೆ. ಈ ಪ್ರಶಸ್ತಿ 11 ಲಕ್ಷ ರೂಪಾಯಿ ನಗದು ಬಹುಮಾನ, ವಾಗ್ವೇವಿ (ಸರಸ್ವತಿ ದೇವಿಯ) ಕಂಚಿನ ವಿಗ್ರಹ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಗೌರವವನ್ನು ರಾಷ್ಟ್ರಪತಿ ಪ್ರಧಾನ ಮಾಡುತ್ತಾರೆ.

ಅಮೃತಾ ಪ್ರೀತಮ್, ಸಿ. ನಾರಾಯಣ ರೆಡ್ಡಿ, ಯು.ಆರ್. ಅನಂತಮೂರ್ತಿ, ಎಂ.ಟಿ ವಾಸುದೇವನ್ ನಾಯರ್, ಮಹಾಶ್ವೇತಾ ದೇವಿ, ಗಿರೀಶ್ ಕಾರ್ನಾಡ್, ಕೃಷ್ಣಾ ಸೋಬ್ತಿ, ಅಮಿತಾವ್ ಘೋಷ್ ಮತ್ತು ಗುಲ್ಜಾರ್ ಅವರಂತಹ ದಿಗ್ಗಜರು ಈ ಹಿಂದೆ ಈ ಪ್ರಶಸ್ತಿಯನ್ನು ಪಡೆದಿದ್ದಾರೆ.

2025ರ ಭಾರತೀಯ ಜ್ಞಾನಪೀಠ ಆಯ್ಕೆ ಸಮಿತಿಯು ಪ್ರತಿಭಾ ರೇ, ಮಾಧವ್ ಕೌಶಿಕ್, ದಾಮೋದರ್ ಮೌಜೊ, ಸುರಂಜನ್ ದಾಸ್, ಎ. ಕೃಷ್ಣ ರಾವ್, ಪ್ರಫುಲ್ಲ ಶಿಲೇದಾರ್, ಕೇಸುಭಾಯಿ ದೇಸಾಯಿ, ಜಾನಕಿ ಪ್ರಸಾದ್ ಶರ್ಮಾ, ಕೆ. ಶ್ರೀನಿವಾಸ್ ರಾವ್ ಮತ್ತು ಮಹೇಶ್ವರ್ ಸೇರಿದಂತೆ ಹಲವಾರು ಸಾಹಿತಿಗಳು ಮತ್ತು ವಿದ್ವಾಂಸರನ್ನು ಒಳಗೊಂಡಿತ್ತು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಟೀಕಿಸಿದ ಚಿನ್ಮಯಿ ಶ್ರೀಪಾದ, “2018ರಲ್ಲಿ, ವಿವಿಧ ವಯೋಮಾನದ ಅನೇಕ ಮಹಿಳೆಯರು ಒಬ್ಬ ಕವಿ ಮತ್ತು ಗೀತರಚನೆಕಾರನನ್ನು ತಮಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಎಂದು ಹೆಸರಿಸಿದ್ದರು. ಇಂದು ಅದೇ ವ್ಯಕ್ತಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗುತ್ತಿದೆ… ಅವರ ವಿರುದ್ಧ ದನಿ ಎತ್ತಿದ ಮಹಿಳೆಯರ ಒಟ್ಟಾರೆ ಧ್ವನಿಯನ್ನು ಅಡಗಿಸಲಾಗಿದೆ. ಇದಕ್ಕಾಗಿ ನಾನು ದೊಡ್ಡ ಬೆಲೆ ತೆರಬೇಕಾಯಿತು – ತಮ್ಮ ಕನಸುಗಳನ್ನು ಅರ್ಧಕ್ಕೇ ಬಿಟ್ಟು ಹೋದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

ವೈರಮುತ್ತು ಅವರಿಗೆ ಪ್ರಶಸ್ತಿ ಬಂದಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರನ್ನೂ ಸಹ ಚಿನ್ಮಯಿ ಟೀಕಿಸಿದ್ದಾರೆ. ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸುವುದು ತಪ್ಪು ಎಂಬರ್ಥದಲ್ಲಿ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಚಿನ್ಮಯಿ ಅವರು, “ಸಿನಿಮಾದಲ್ಲಿ ಇಂತಹ ಪ್ರಬಲ ಅಧಿಕಾರ ಹೊಂದಿದ್ದು, ರಾಜಕೀಯಕ್ಕೆ ಕಾಲಿಡುತ್ತಿರುವ ಪುರುಷರು, ತಮ್ಮ ‘ಮಾರ್ಗದರ್ಶಕ ಅಥವಾ ಚಿಕ್ಕಪ್ಪ’ನಂತಹ ವ್ಯಕ್ತಿಯಿಂದ ತಾವು ಕಿರುಕುಳಕ್ಕೊಳಗಾಗಿದ್ದೇವೆ ಎಂದು ದಾಖಲೆ ಸಮೇತ ಹೇಳುವ ಮಹಿಳೆಯರ ವಿಷಯದಲ್ಲಿ ಸಂಪೂರ್ಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಪುರುಷರು ಎಂದಿಗೂ ನಮ್ಮ ಪರವಾಗಿ ನಿಲ್ಲುವುದಿಲ್ಲ ಎಂಬ ಅಂಶವನ್ನು ಮತ ಚಲಾಯಿಸುವ ಮಹಿಳೆಯರಿಗೆ ನೆನಪಿಸಬೇಕು” ಎಂದು ಹೇಳಿದ್ದಾರೆ.

ಸಂಗೀತಗಾರ, ಬರಹಗಾರ ಮತ್ತು ಹೋರಾಟಗಾರ ಟಿ.ಎಂ. ಕೃಷ್ಣ ಅವರು ವೈರಮುತ್ತು ಅವರಿಗೆ ನೀಡಲಾದ ಪ್ರಶಸ್ತಿಯನ್ನು ಟೀಕಿಸಿದ್ದು, ಇದು “ಅವರನ್ನು ಇನ್ನಷ್ಟು ಬಲಶಾಲಿಯನ್ನಾಗಿಸುತ್ತದೆ ಮತ್ತು ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ಮಾಡಿದ ಎಲ್ಲಾ ಮಹಿಳೆಯರನ್ನು ಮತ್ತಷ್ಟು ಮೂಲೆಗುಂಪು ಮಾಡುತ್ತದೆ” ಎಂದು ಹೇಳಿದ್ದಾರೆ. ಮುಂದುವರಿದು, “ಒಬ್ಬ ಕಲಾವಿದನನ್ನು ಆತ ಸೃಷ್ಟಿಸುವ ಕಲೆಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಮತ್ತು ಹಾಗೆ ಮಾಡಬಾರದು. #metoo” ಎಂದು ಅವರು ಬರೆದುಕೊಂಡಿದ್ದಾರೆ.

ಬರಹಗಾರ್ತಿ ಮೀನಾ ಕಂದಸ್ವಾಮಿ ಅವರು 2023ರಲ್ಲಿ ವ್ಯಕ್ತಪಡಿಸಿದ್ದ ತಮ್ಮ ಅಭಿಪ್ರಾಯಗಳನ್ನು ಪುನರುಚ್ಚರಿಸಿದ್ದಾರೆ. ಆಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವೈರಮುತ್ತು ಅವರ ಜನ್ಮದಿನದಂದು ಅವರ ಮನೆಗೆ ಭೇಟಿ ನೀಡಿದ್ದನ್ನು ಮೀನಾ ಟೀಕಿಸಿದ್ದರು. “ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕವಿಯೊಂದಿಗೆ ರಾಜಕಾರಣಿಗಳು ಸಾರ್ವಜನಿಕವಾಗಿ ಇಷ್ಟೊಂದು ಮುಜುಗರದ ರೀತಿಯಲ್ಲಿ ಬೆರೆಯುವ ಅಗತ್ಯವೇನಿದೆ?” ಎಂದು ಅವರು ಆ ಸಮಯದಲ್ಲಿ ಪ್ರಶ್ನಿಸಿದ್ದರು.

ವೈರಮುತ್ತು ಅವರಿಗೆ ಪ್ರಶಸ್ತಿ ನೀಡುವ ನಿರ್ಧಾರವನ್ನು ಇನ್ನೂ ಅನೇಕರು ಟೀಕಿಸಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...